ಆರ್‌ಎಸ್‌ಎಸ್‌ನ ಯುವಕರ ಭಾಗ ಭಜರಂಗದಳ, ತಾಕತ್ತಿದ್ದರೆ ನಿಷೇಧಿಸಿ: ಶೋಭಾ ಕರಂದ್ಲಾಜೆ

Date:

  • ದೇಶವಿರೋಧಿ ಚಟುವಟಿಕೆ ನಡೆಸುತ್ತಿದ್ದ ಪಿಎಫ್‍ಐಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ
  • ಪಿಎಫ್‌ಐ-ಭಜರಂಗದಳವನ್ನು ಒಂದೇ ತಕ್ಕಡಿಯಕಲ್ಲಿ ಇಟ್ಟು ನೋಡುವ ಉದ್ದೇಶವೇನು?

‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆʼ ಹೆಸರಲ್ಲಿ ಮಂಗಳವಾರ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಚುನಾವಣೆ ಪ್ರಣಾಳಿಕೆ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

- Advertisement -

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೋಭಾ ಕರಂದ್ಲಾಜೆ ಮಾತನಾಡಿ, “ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ವಿನಾಶಕಾಲ ಬಂದಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪಿಎಫ್‍ಐ ಮತ್ತು ಭಜರಂಗದಳ ನಿಷೇಧಿಸುವುದಾಗಿ ಹೇಳಿದೆ. ಆದರೆ, ಈಗಾಗಲೇ ಭಯೋತ್ಪಾದಕ ಮತ್ತು ದೇಶವಿರೋಧಿ ಚಟುವಟಿಕೆ ನಡೆಸುತ್ತಿದ್ದ ಪಿಎಫ್‍ಐ ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ” ಎಂದರು.

“ದೇಶ, ವಿದೇಶದಲ್ಲಿ ದೇಶಭಕ್ತಿಯನ್ನು ಮೂಡಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಮಾಡುತ್ತಿದೆ. ಬಿಜೆಪಿ ಪಕ್ಷ ಆರ್‌ಎಸ್‌ಎಸ್‌ನ ಭಾಗವಾದರೆ, ಭಜರಂಗದಳ ಕೂಡ ಆರ್‌ಎಸ್‌ಎಸ್‌ ಯುವಕರ ಭಾಗವಾಗಿದೆ. ಪಿಎಫ್‌ಐ ಜೊತೆಗೆ ಭಜರಂಗದಳ ಹೋಲಿಸುವುದು ತಪ್ಪು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ರಾಜಕೀಯಕ್ಕಾಗಿ ಬಿಜೆಪಿ ಇದೆ. ಸಮಾಜ ಸೇವೆಗಾಗಿ ಹಿಂದೂ ಸೇವಾ ಪ್ರತಿಷ್ಠಾನ ಇದೆ. ಬಣವಾಸಿಗಳ ಜೊತೆ ಕೆಲಸ ಮಾಡುವುದಕ್ಕಾಗಿ ಬಣವಾಸಿ ಕಲ್ಯಾಣ ಆಶ್ರಮ ಇದೆ. ವಿದ್ಯಾರ್ಥಿಗಳ ಜೊತೆ ಕೆಲಸ ಮಾಡಲು ಎಬಿವಿಪಿ ಇದೆ. ಹಾಗೆಯೇ ಯುವಕರ ಮಧ್ಯೆ ಕೆಲಸ ಮಾಡಲು ಭಜರಂಗದಳ ಇದೆ. ಆದರೆ, ನೀವು (ಕಾಂಗ್ರೆಸ್‌) ನಿಮ್ಮ ಪ್ರಣಾಳಿಕೆಯಲ್ಲಿ ಪಿಎಫ್‌ಐ ಮತ್ತು ಭಜರಂಗದಳವನ್ನು ಒಂದೇ ತಕ್ಕಡಿಯಲ್ಲಿ ಇಟ್ಟಿದ್ದೀರಿ. ನಿಮ್ಮ ಉದ್ದೇಶ ಏನಿದೆ” ಎಂದು ಪ್ರಶ್ನಿಸಿದರು.

“ಪಿಎಫ್‌ಐ ಒಂದು ದೇಶದ್ರೋಹಿ ಸಂಘಟನೆ, ಹಿಂದು ಯುವಕರ ಹತ್ಯೆಗೆ ಕಾರಣವಾದ ಸಂಘಟನೆ, ಬಾಂಬ್‌ ಬ್ಲಾಸ್ಟ್‌ ಮಾಡುವ ಸಂಘಟನೆ, ಹಿಂದು ಯುವತಿಯರನ್ನು ಲವ್‌ ಜಿಹಾದ್‌ ಹೆಸರಲ್ಲಿ ಮತ ಪರಿವರ್ತನೆ ಮಾಡುತ್ತಿರುವ ಸಂಘಟನೆ, ಇಂತಹ ಸಂಘಟನೆ ಜೊತೆ ದೇಶ ಭಕ್ತಿಗಾಗಿ ಹೋರಾಟ ಮಾಡುತ್ತಿರುವ ಭಜರಂಗದಳ ಹೋಲಿಕೆ ಮಾಡಿ ನಿಷೇಧದ ಬಗ್ಗೆ ಮಾತನಾಡಿದ್ದೀರಿ. ಇದು ನಿಮ್ಮ ವಿನಾಶಕ್ಕೆ ನೀವೇ ಮಾಡಿಕೊಂಡ ತಯಾರಿ. ತಾಕತ್ತು ಇದ್ದರೆ ಭಜರಂಗದಳ ನಿಷೇಧಿಸಿ” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...