ಸಿದ್ದರಾಮಯ್ಯ ಮುಸ್ಲಿಮರ ನಾಯಕ, ಡಿಕೆಶಿ ಕ್ರಿಮಿನಲ್‌ಗಳ ನಾಯಕ ಎಂದ ಶೋಭಾ ಕರಂದ್ಲಾಜೆ

Date:

  • ಸಿದ್ದರಾಮಯ್ಯರನ್ನು ಮುಸ್ಲಿಮರ ನಾಯಕ ಎಂದ ಕೇಂದ್ರ ಸಚಿವೆ
  • ಕಾಂಗ್ರೆಸ್ ವಿರುದ್ಧ ಬಿಜೆಪಿಯ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಓಡಾಡುವುದಕ್ಕೆ ನಮಗೆ ಭಯ ಆಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಶೋಭಾ ಕರಂದ್ಲಾಜೆ, “ನಮಗೆ ಪುತ್ತೂರಿನಲ್ಲಿ ಓಡಾಡಲು ಭಯವಾಗುತ್ತದೆ. ಅಲ್ಲಿ ನಾವು ಕಾರಿನಲ್ಲಿ ಹೋಗಬೇಕಾದರೆ, ಹಸಿರು ಭಾವುಟಗಳನ್ನು ಹಾಕಿಕೊಂಡು ಹಿಂಬಾಲಿಸುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಪ್ರವೀಣ್ ನೆಟ್ಟಾರು ಕೊಲೆ ಮಾಡಿದವರು ನಮ್ಮ ಮನೆಯ ಪಕ್ಕದಲ್ಲಿಯೇ ಸಿಗುತ್ತಾರೆ. ಇವರಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಹಕಾರವಿದೆ” ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

“ಬಿಜೆಪಿ ತಂದಿರುವ ಮತಾಂತರ ಕಾಯಿದೆ ಮತ್ತು ಗೋ ಹತ್ಯೆ ನಿಷೇಧ ಕಾಯಿದೆ ವಾಪಸು ಪಡೆಯುವುದಾಗಿ ಕಾಂಗ್ರೆಸ್ ಹೇಳಿದೆ. ಹಿಂದೂ ವಿರೋಧಿ, ಸಿದ್ದರಾಮಯ್ಯ ಅವರು ಮುಸ್ಲಿಮರ ನಾಯಕರಾದರೆ, ಡಿಕೆ ಶಿವಕುಮಾರ್ ಅವರು ಕ್ರಿಮಿನಲ್‌ಗಳ ನಾಯಕ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

“ಕಾಂಗ್ರೆಸ್‌ನ ಕೈ ಕಲುಷಿತ ಆಗಿದೆ. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ. ನಮ್ಮ ಮತ ಯಾರಿಗೆ ಎನ್ನುವ ಪ್ರಶ್ನೆಯಿಲ್ಲ ಇದು ನಮ್ಮ ಅಸ್ತಿತ್ವದ ಪ್ರಶ್ನೆ, ಮುಸ್ಲಿಮರಿಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ಧೈರ್ಯವಿದೆ” ಎಂದು ಹೇಳಿದರು.

“ಗ್ಯಾಂಗ್‌ಸ್ಟರ್‌ ಅತೀಕ್ ಅಹಮ್ಮದ್‌ನನ್ನು ಗುರು ಎಂದಿರುವ, ಹಿಂದೂಗಳ ವಿರುದ್ಧ ದ್ವೇಷಪೂರಿತ ಭಾಷಣ ಮಾಡುವ ಶಾಯರ್ ಇಮ್ರಾನ್ ಕರ್ನಾಟಕದ ಕಾಂಗ್ರೆಸ್ ಚುನಾವಣಾ ಸ್ಟಾರ್‌ ಪ್ರಚಾರಕ. ಕಾಂಗ್ರೆಸ್ ದೇಶದ್ರೋಹಿಗಳ ಪರವಾಗಿದೆ” ಎಂದು ಆರೋಪಿಸಿದರು.

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್‌ ಅನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಿದರು. ಪುತ್ತೂರಿನಲ್ಲಿ ಸ್ವತಃ ಸ್ವಪಕ್ಷದ ಸಂಜೀವ ಮಠಂದೂರು ಅವರೇ ಶಾಸಕರಾಗಿದ್ದರೂ, ಪುತ್ತೂರಿನಲ್ಲಿ ಓಡಾಡಲು ಭಯವಾಗುತ್ತದೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...