ಮೈತ್ರಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಭಯ ಹುಟ್ಟಿಕೊಂಡಿದೆ : ಸಿಎಂ ಬೊಮ್ಮಾಯಿ

Date:

  • ನಾಮಪತ್ರ ಸಲ್ಲಿಕೆ ಬಳಿಕ ಪ್ರಧಾನಿ ಮೋದಿಯಿಂದ ಪ್ರಚಾರ
  • ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ನವರು ಜೆಡಿಎಸ್‌ನಿಂದ ಸ್ಪರ್ಧೆ

ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವರುಣಾದಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದೆ. ಹಾಗಾಗಿ ಒಳ ಮೈತ್ರಿ, ಹೊರ ಮೈತ್ರಿ ಕುರಿತು ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕ್ಷೇತ್ರದಲ್ಲಿ ಯಾರಾದರು ಸೇರಿಕೊಳ್ಳಲಿ ಸಿದ್ದರಾಮಯ್ಯ ಅವರಿಗೆ ಸ್ವಂತ ಬಲವಿದ್ದರೆ, ಗೆಲ್ಲುತ್ತಾರೆ. ಇಲ್ಲದಿದ್ದರೆ ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್ – ಜೆಡಿಎಸ್ ಒಂದಾಗಿವೆ ಇದರಿಂದ ನನಗೇನೂ ಭಯವಿಲ್ಲ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

“ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿದೆ. ಇದು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಒಳ ಮೈತ್ರಿ ಎನ್ನಲಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಈ ಥರ ಆರೋಪ ಮಾಡುವುದಿಲ್ಲ. ಯಾರು ಯಾರ ಜತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ” ಎಂದಿದ್ದಾರೆ.

“ಸಿದ್ದರಾಮಯ್ಯ ವರುಣಾದಿಂದ ಆರೇಳು ಸಲ ಗೆದ್ದು ಬಂದವರು. ಈ ಮೊದಲು ಅವರಿಗೆ ಕ್ಷೇತ್ರದ ಅನಿಶ್ಚಿತತೆ ಇತ್ತು. ಈಗ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮೋದಿ ಪ್ರಚಾರ

ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...