ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

Date:

ರಾಜ್ಯ ವಿಧಾನಸಭಾ ಚುನಾವಣೆಯ ಮುಖ್ಯಘಟ್ಟವಾದ ಮತದಾನ ಪ್ರಕ್ರಿಯೆ ಬುಧವಾರ ಸಂಪನ್ನಗೊಂಡಿದೆ. ಎಲ್ಲ ರಾಜಕೀಯ ನಾಯಕರು ಚುನಾವಣೆ ಪ್ರಚಾರದಿಂದ ನಿರಾಳರಾಗಿದ್ದು, ಫಲಿತಾಂಶ ಕಡೆ ದೃಷ್ಟಿ ನೆಟ್ಟಿದ್ದಾರೆ.

- Advertisement -

ಈ ನಡುವೆ ಬಹುತೇಕ ರಾಜಕೀಯ ನಾಯಕರು ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದು, ತಮ್ಮ ತಮ್ಮ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಭಾವನಾತ್ಮಕ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ತಾವೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ್ದೀರಿ. ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು” ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

“ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರೆಲ್ಲರೂ ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು” ಎಂದು ಹೇಳಿದ್ದಾರೆ.

“ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...