ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾಗಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಜಯಭೇರಿ ಸಾಧಿಸಿದೆ. ಆದರೆ, ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಸಂಭ್ರಮ ಕಳೆಗುಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಬೆಳಿಗ್ಗೆ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಮೃತರಿಗೆ ಪತ್ನಿ, ಮೂವರು ಹೆಣ್ಣು ಓರ್ವ ಪುತ್ರ ಇದ್ದಾರೆ. ಶನಿವಾರ ಮಧ್ಯಾಹ್ನ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ.