ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ ಆಗಮಿಸಿದ ಸೋನಿಯಾ ಗಾಂಧಿ

Date:

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಶನಿವಾರ ಬಂದಿಳಿದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಆಗಮಿಸಿದ್ದಾರೆ.

ಏರ್​​ಪೋರ್ಟ್‌ನಿಂದ ಖಾಸಗಿ ಹೋಟೆಲ್‌ಗೆ ಸದ್ಯ ತೆರಳಿದ್ದು, ಉತ್ತರ ಕರ್ನಾಟಕ ಭಾಗದ ರಾಜಕೀಯ ಬೆಳವಣಿಗೆ ಬಗ್ಗೆ ಸ್ಥಳೀಯ ನಾಯಕರ ಜೊತೆ ಚರ್ಚಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಜೆ 6 ಗಂಟೆಗೆ ಹುಬ್ಬಳ್ಳಿಯ ಹಾಕಿ ಮೈದಾನದಲ್ಲಿ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ರಾಹುಲ್ ಗಾಂಧಿ ಇಂದು ಸಂಜೆ ಹುಬ್ಬಳ್ಳಿಯಲ್ಲಿ ತಮ್ಮ ತಾಯಿಯೊಂದಿಗೆ ಸೇರಿಕೊಳ್ಳಲಿದ್ದಾರೆ. ಹುಬ್ಬಳ್ಳಿ ರ‍್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಭಾಗವಹಿಸಲಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೇ ಕಾಂಗ್ರೆಸ್‌ ಎಲ್ಲ ರಾಷ್ಟ್ರೀಯ ನಾಯಕರು ಚುನಾವಣಾ ರಣರಂಗವಾಗಿರುವ ಕರ್ನಾಟಕಕ್ಕೆ ಬಂದು ಪ್ರಚಾರ ಆರಂಭಿಸಿದ್ದರೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಬಂದಿರಲಿಲ್ಲ.

ಜಗದೀಶ್‌ ಶೆಟ್ಟರ್‌ ಅವರನ್ನು ಗೆಲ್ಲಿಸುವುದಕ್ಕಾಗಿ ಪ್ರಚಾರದ ಯೋಜನೆಯಲ್ಲಿ ಸೋನಿಯಾ ಅವರನ್ನು ಕರೆತರಲಾಗಿದೆ. ಇದುವರೆಗೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಏಪ್ರಿಲ್ 16 ರಿಂದ ರಾಜ್ಯಾದ್ಯಂತ ಸುಮಾರು 60 ಸಭೆ ಮತ್ತು ರೋಡ್ ಶೋ ನಡೆಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...