ಕೊಲೆ ಆರೋಪಿ, ರೌಡಿಶೀಟರ್ ವೇದಿಕೆ ಹಂಚಿಕೊಂಡ ಪ್ರಧಾನಿ; ಮೋದಿ ವಿರುದ್ಧ ಕಿಡಿ

Date:

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್‌ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಿಡಿಕಾರಿದ್ದು, ಟೀಕೆ ಮಾಡುತ್ತಿವೆ.

- Advertisement -

ಇತ್ತೀಚೆಗೆಷ್ಟೇ, ಮಂಡ್ಯದಲ್ಲಿ ಮೋದಿ ರೋಡ್‌ ಶೋ ನಡೆಸಿದ್ದಾಗ, ಪೈಟರ್‌ ರವಿಗೆ ಮೋದಿ ಕೈಮುಗಿದಿದ್ದರು. ಅವರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಟೀಕೆಗೂ ಗುರಿಯಾಗಿತ್ತು. ಇದೀಗ, ಭಾನುವಾರ ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಿದ್ದ ಮೋದಿ, ರೌಡಿಶೀಟರ್ ಮುದ್ದುಕೃಷ್ಣ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೋದಿ ಮತ್ತು ಮುದ್ದುಕೃಷ್ಣ ವೇದಿಕೆಯಲ್ಲಿರುವ ಫೋಟೋವನ್ನು ಹಂಚಿಕೊಂಡಿರುವ ಜೆಡಿಎಸ್‌ ಪ್ರಧಾನಿ ವಿರುದ್ಧ ಕಿಡಿಕಾರಿದೆ. “ಈ ಹಿಂದೆ ರೌಡಿಶೀಟರ್‌ಗೆ ಕೈ ಮುಗಿದಿದ್ದ ;ಚುನಾವಣಾ ಜೀವಿ; ನರೇಂದ್ರ ಮೋದಿ, ಇದೀಗ ಮತ್ತೊಬ್ಬ ರೌಡಿಶೀಟರ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ. ಅವರು ಪ್ರಧಾನಿ ಹುದ್ದೆಯ ಎಲ್ಲ ಘನತೆಯನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಪ್ರಧಾನಿಯ ಗಮನಕ್ಕೆ ಬರದೆ ರೌಡಿಯೊಬ್ಬ ಇಷ್ಟೊಂದು ಹತ್ತಿರ ಸುಳಿಯಲು ಸಾಧ್ಯವೆ?” ಎಂದು ವ್ಯಂಗ್ಯವಾಡಿದೆ.

“ಬಿಜೆಪಿ ರೌಡಿ ಮೋರ್ಚಾದಿಂದ ರಾಜ್ಯಕ್ಕೆ ಏನು ಅಪಾಯ ಕಾದಿದಿಯೊ. ಕ್ರಿಮಿನಲ್‌ಗಳನ್ನು ಈ ರೀತಿಯಾಗಿ ಗುಡ್ಡೆ ಹಾಕುತ್ತಿರುವ ಬಿಜೆಪಿಯ ಬಗ್ಗೆ ಡಿಜಿಪಿ ಕರ್ನಾಟಕ ಪೊಲೀಸ್ ಎಚ್ಚರವಾಗಿರಲಿ. ಚುನಾವಣೆ ಗೆಲ್ಲಲು ಬಿಜೆಪಿ ಯಾವ ಮಟ್ಟಕ್ಕೆ ಇಳಿಯಲು ಹೇಸುವುದಿಲ್ಲ ಎಂಬುವುದು ಇಡೀ ಕರುನಾಡಿಗೆ ತಿಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ?: ಬೇಲೂರು | 20 ಸೀಟುಗಳಿಂದ ರಾಜ್ಯದ ಲೂಟಿಯಲ್ಲಿ ಪಾಲು ಬಯಸುತ್ತಿದೆ ಜೆಡಿಎಸ್‌: ಮೋದಿ

“ರೌಡಿಶೀಟರ್‌ಗಳು, ಕೊಲೆ ಆರೋಪಿಗಳು ಪ್ರಧಾನಿಯೊಂದಿಗೆ ವೇದಿಕೆ ಏರುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಇಲ್ಲಿ ಪ್ರಧಾನಿ ಮೋದಿಯವರಿಗೆ ಸನ್ಮಾನ ಮಾಡುತ್ತಿರುವುದು ರೌಡಿಶೀಟರ್, ಡಬಲ್ ಮರ್ಡರ್ ಆರೋಪಿ ಮುದ್ದು ಕೃಷ್ಣ ಅಲಿಯಾಸ್ ಮುದ್ದು. ಮೋದಿಯವರ ಕಿರೀಟಕ್ಕೆ ಬಿಜೆಪಿಯ ಮತ್ತೊಬ್ಬ ರೌಡಿಶೀಟರ್ ಗರಿ ಸೇರ್ಪಡೆ” ಎಂದು ಕಾಂಗ್ರೆಸ್ ಕೆಂಡಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...