ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

Date:

  • ಶೆಟ್ಟರ್‌ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
  • ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್‌ ನಿಗಾ

ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ.

- Advertisement -

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ತೊರೆದು, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ವಿರುದ್ಧ ಟಿಕೆಟ್‌ ತಪ್ಪಲು ಅವರೇ ಕಾರಣ ಎಂದು ಆರೋಪ ಮಾಡಿದ ನಂತರ, ಅದನ್ನು ಬಿಜೆಪಿ ಮತ್ತು ಸಂಘ ಪರಿವಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ ಶೆಟ್ಟರ್ ಅವರನ್ನು ವಿಧಾನಸಭೆಗೆ ಆಯ್ಕೆಯಾಗದಂತೆ ನೋಡಿಕೊಳ್ಳಲು ಕ್ಷೇತ್ರದೊಳಗೆ ರಣತಂತ್ರ ಹೆಣೆಯುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೇಗಾದರೂ ಮಾಡಿ ಈ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲು ಮತ್ತು ತಮ್ಮ ಮತಬ್ಯಾಂಕ್​ ಅನ್ನು​ ಮತ್ತಷ್ಟು ಭದ್ರಪಡಿಸಿಕೊಳ್ಳಲು ಆರ್​ಎಸ್​​ಎಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ.

ನಾಗ್ಪುರದಿಂದ ಸುಮಾರು 50 ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿ ವಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಮೂಲಕ ಬಿಜೆಪಿ ಹಲವು ತಂತ್ರಗಳನ್ನು ಜಗದೀಶ್‌ ಶೆಟ್ಟರ್‌ ಸುತ್ತ ಹೆಣೆದಿದೆ.

ಶೆಟ್ಟರ್‌ ಮೇಲೆ ಗೂಡಾಚಾರಿಕೆ

ನಾಗ್ಪುರದಿಂದ ಬಂದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ. ಶೆಟ್ಟರ್ ಅವರ ಪ್ರತಿಯೊಂದು ನಡೆಯನ್ನು ಅವರು ಸೂಕ್ಷ್ಮವಾಗಿ ಗಮನಿಸಲು ಈಗಾಗಲೇ ಆ ವಿಶೇಷ ಪಡೆ ಆರಂಭಿಸಿದ್ದು, ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೂ ನಿಗಾ ಇಟ್ಟಿದ್ದಾರೆ.

ಬಿ ಎಲ್ ಸಂತೋಷ್ ಅವರನ್ನು ಟೀಕಿಸಿದ್ದಕ್ಕೆ ಆರ್​ಎಸ್​​ಎಸ್ ಸಹ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಹೀಗಾಗಿ ಶೆಟ್ಟರ್ ಚಲನವಲನದ ಮೇಲೆ ರಹಸ್ಯವಾಗಿ ಕಣ್ಣಿಟ್ಟಿರುವ ಆರ್​​ಎಸ್​​ಎಸ್ ಕಾರ್ಯಕರ್ತರ ತಂಡ, ಈ ಬಾರಿ ಹೇಗಾದರೂ ಮಾಡಿ ಶೆಟ್ಟರ್‌ ಅವರನ್ನು ಮಣಿಸಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಪಣತೊಟ್ಟಿದೆ ಎನ್ನಲಾಗುತ್ತಿದೆ.

ಈ ನಡುವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...