ವರಿಷ್ಠರು ಸೂಚಿಸಿದರೆ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಎಂದ ಸಂಸದೆ ಸುಮಲತಾ

Date:

  • ಸಕ್ಕರೆನಾಡಲ್ಲಿ ಬಿಜೆಪಿ ಬಲಪಡಿಸಿಲು ಸಿದ್ಧರಾದ ಸುಮಲತಾ
  • ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ʼರೆಬೆಲ್‌ ಸ್ಟಾರ್‌ ಪತ್ನಿʼ

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲಪಡಿಸಲು ಜಿಲ್ಲೆಯ ಸಂಸದೆ ಸುಮಲತಾ ಮುಂದಾಗಿದ್ದಾರೆ. ಇದರ ಭಾಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಮಂಡ್ಯ ಪ್ರವಾಸ ವೇಳೆ ಬಿಜೆಪಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರೂ, ತಮ್ಮ ರಾಜಕೀಯ ನಡೆಯನ್ನು ನಿಗೂಢವಾಗಿಟ್ಟುಕೊಂಡಿದ್ದ ಸಮಲತಾ ಅಂಬರೀಶ್ ಈಗ ಅದನ್ನು ಬಹಿರಂಗ ಮಾಡಿದ್ದಾರೆ.

ಆ ಮೂಲಕ ರಾಜ್ಯ ರಾಜಕಾರಣಕ್ಕೆ ಬರಲು ಅನುವಾಗಿರುವ ಅವರು ಮಂಡ್ಯವನ್ನೇ ತಮ್ಮ ಸ್ಪರ್ಧಾ ವೇದಿಕೆಯನ್ನಾಗಿಸಿಕೊಳ್ಳಲು ಅವರು ಚಿಂತಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು (ಏಪ್ರಿಲ್ 17) ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನಾನೂ ಅಲ್ಲಿಂದಲೇ ಸ್ಪರ್ಧೆ ಮಾಡುವೆ ಎಂದಿರುವ ಅವರು, ಈವರೆಗೆ ಪಕ್ಷ ಈ ವಿಚಾರದಲ್ಲಿ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ…

ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ ಎಂದು ಸಂಸದೆ ಸುಮಲತಾ ಭವಿಷ್ಯ ನುಡಿದರು.

ಮದ್ದೂರಿನಲ್ಲಿ ದಿ.ಅಂಬರೀಶ್ ಅಭಿಮಾನಿಗಳು ಹೆಚ್ಚಿದ್ದಾರೆ. ಅಂಬರೀಶ್ ಅಭಿಮಾನಿಗಳ ಬೆಂಬಲ ಇರುವುದರಿಂದ ಬಿಜೆಪಿಗೆ ಪ್ಲಸ್ ಆಗುತ್ತೆ ಎಂದ ಸುಮಲತಾ ನನ್ನ ಪುತ್ರ ಅಭೀಷೇಕ್ ಮುಂದಿನ ದಿನಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ ಎಂದು ತಿಳಿಸಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...