ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ಬೆಂಬಲ; ಬಿಜೆಪಿ, ಕಾಂಗ್ರೆಸ್‌ಗೆ ಆಹ್ವಾನ ನೀಡಿದ ಎಚ್‌ ಡಿ ಕುಮಾರಸ್ವಾಮಿ

Date:

  • ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ. ಈ ಬಾರಿ ಮೈತ್ರಿ ಸರ್ಕಾರ: ಎಚ್‌ಡಿಕೆ
  • ಸಿಂಗಾಪುರಕ್ಕೆ ತೆರಳುವ ಮುನ್ನ ರಾಜಕೀಯ ಬಾಗಿಲು ತೆರದಿಟ್ಟ ಕುಮಾರಸ್ವಾಮಿ

ಜೆಡಿಎಸ್‌ ಈ ಬಾರಿ 50 ಸ್ಥಾನಗಳನ್ನು ಗೆಲ್ಲಲಿದೆ. ಯಾವುದೇ ಪಕ್ಷಕ್ಕೂ ಬಹುಮತ ಬರುವುದಿಲ್ಲ. ತಮ್ಮ ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ನಾವು ಬೆಂಬಲ ನೀಡಲು ಸಿದ್ಧ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಬುಧವಾರ ರಾತ್ರಿ (ಮೇ.10) ಸಿಂಗಾಪುರಕ್ಕೆ ತೆರಳುವ ಮುನ್ನ ಈ ಮೇಲಿನ ಮಾತನ್ನು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಆ ಮೂಲಕ ನಾವು ಯಾವುದೇ ಪಕ್ಷದೊಂದಿಗೆ ರಾಜಿಗೆ ಮುಂದಾಗುವುದಿಲ್ಲ ಎಂದು ಚುನಾವಣೆ ಮೊದಲು ಹೇಳುತ್ತಿದ್ದ ಕುಮಾರಸ್ವಾಮಿ ಈಗ ಯೂಟರ್ನ್‌ ಹೊಡೆದಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಏರುವ ಹೆಬ್ಬಯಕೆಯನ್ನು ಬೆಂಬಲ ಕೊಡುವ ರೂಪದಲ್ಲಿ ಮುಂದಿಟ್ಟಿದ್ದಾರೆ. ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಮುಕ್ತ ಆಹ್ವಾನ ನೀಡಿದ್ದಾರೆ.

ಬಹುತೇಕ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದರು ಬಹುಮತಕ್ಕೆ ಬೇಕಾದ 113 ಸ್ಥಾನಗಳನ್ನು ಕೊಟ್ಟಿಲ್ಲ. ಸಹಜವಾಗಿ ಈ ಬಾರಿಯೂ ಮೈತ್ರಿ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ.

ಕಾಂಗ್ರೆಸ್‌ ನಾಯಕರು ಮಾತ್ರ ಈ ಬಾರಿ ಬಹುಮತ ಸಾಧಿಸಿಯೇ ಕಾಂಗ್ರೆಸ್‌ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಮಾತುಗಳನ್ನು ಆಡುತ್ತಿದ್ದಾರೆ. ಇತ್ತ ಬಿಜೆಪಿಯವರು ಬಹುಮತ ನಮಗೇ ಸಿಗುತ್ತೆ ಎನ್ನುವ ವಿಶ್ವಾಸದಲ್ಲಿದ್ದಾರೆ.

ಈ ನಡುವೆ ಬಿಜೆಪಿಯ ಆರ್‌ ಅಶೋಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತ, “ನಮ್ಮ ಪಕ್ಷ ಬಹುಮತ ಬರದೇ ಇದ್ದರೂ ಸರ್ಕಾರ ರಚನೆಗೆ ಬೇಕಾದ‌ ಪ್ಲ್ಯಾನ್-ಎ, ಪ್ಲ್ಯಾನ್-ಬಿ, ಪ್ಲ್ಯಾನ್-ಸಿ ಯೋಜನೆಗಳು ಸಿದ್ಧವಾಗಿವೆ” ಎಂದು ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ನಾಳೆ (ಮೆ 13) ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲ ಊಹಾಪೋಹಗಳಿಗೂ ತೆರೆಬಿದ್ದು, ಸ್ಪಷ್ಟ ಚಿತ್ರಣ ಸಿಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...