ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

Date:

Advertisements
  • ಜನರ ಪ್ರಬಲ ದನಿಯಾಗಲು ಎಸ್.ಯು.ಸಿ.ಐ (ಸಿ) ಪಕ್ಷವನ್ನು ಬೆಂಬಲಿಸಿ
  • ಮೋದಿ ಅಧಿಕಾರಕ್ಕೆ ಬಂದು 9 ವರ್ಷ ಕಳೆದರೂ ಭ್ರಷ್ಟಾಚಾರ ಮಿತಿಮೀರಿದೆ

ಜನರ ಪರ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಮಧುಲತಾ ಗೌಡರ ಅವರು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ ಉಮಾ ಮನವಿ ಮಾಡಿದರು.

ಧಾರವಾಡ ವಿಧಾನಸಭಾ ಕ್ಷೇತ್ರದ ಹಳೇತೇಗೂರು ಗ್ರಾಮದಲ್ಲಿ ಎಸ್.ಯು.ಸಿ.ಐ (ಸಿ) ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ ಪರವಾಗಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಮಾಯಾಣದ ಕುಂಭಕರ್ಣನಂತೆ ಜನಪ್ರತಿನಿಧಿಗಳು ಐದು ವರ್ಷಕ್ಕೊಮ್ಮೆ ನಿಮ್ಮ ಮನೆಗೆ ಬರುತ್ತಾರೆ. ದುಡ್ಡು, ಜಾತಿ ಬಲಗಳೇ ಅಭ್ಯರ್ಥಿಗಳ ಆಯ್ಕೆಗೆ ಮಾನದಂಡವಾಗಿವೆ. ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲವಾಗಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

Advertisements

‘ನ ಖಾವೂಂಗಾ, ನ ಖಾನೆ ದೂಂಗಾ’ ಎಂದು ನರೇಂದ್ರ ಮೋದಿಯವರು ದೊಡ್ಡ ದೊಡ್ಡ  ಮಾತುಗಳನ್ನು ಆಡುತ್ತ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದವು. ಆದರೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ಕೊಡುವ ಭರವಸೆ ನೀಡಿದ್ದರು. ಆದರೆ, ಅತಿ ಹೆಚ್ಚಿನ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇರುವ ಉದ್ಯೋಗಗಳನ್ನೆ ಕಡಿತ ಮಾಡಲಾಗುತ್ತಿದೆ. ಸಾವಿರಾರು ಕಾರ್ಖಾನೆಗಳನ್ನು ಮುಚ್ಚಿ ಕಾರ್ಮಿಕರನ್ನು ಮನೆಗೆ ಕಳಿಸಲಾಗಿದೆ ಎಂದು ಕಿಡಿಕಾರಿದರು.

ಸ್ವಿಸ್ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರುತ್ತೇವೆಂದು ನೋಟ್ ಬ್ಯಾನ್ ಮಾಡಿದರು. ಕಪ್ಪು ಹಣ ತಂದು ನಿಮ್ಮ ಖಾತೆಗಳಿಗೆ 15 ಲಕ್ಷ ರೂಪಾಯಿ ಹಾಕಿದ್ದರಾ? ಈ ಹಿಂದೆ ರಾಜ್ಯದಲ್ಲಿ ಆಳ್ವಿಕೆ ಮಾಡಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ನಂತರ ಜನಪರವಾದ ಸರ್ಕಾರ ನಡೆಸುವಲ್ಲಿ ವಿಪಲವಾಗಿ ರಾಜ್ಯದ ಜನರ ನಂಬಿಕೆ ಕಳೆದುಕೊಂಡಿವೆ ಎಂದು ಆರೋಪಿದರು.

ಮತ್ತೇ ಚುನಾವಣೆ ಬಂದಿದೆ. ಕಾಂಗ್ರೆಸ್ ,ಬಿಜೆಪಿ, ಜೆಡಿಎಸ್ ಭರವಸೆಗಳ ಹೊಳೆಯನ್ನೇ ಹರಿಸುತ್ತಿವೆ. ಎಷ್ಟು ಸಲ ಈ ಹುಸಿ ಭರವಸೆಗಳನ್ನು ನಂಬುವುದು? ಜನ ಪ್ರಜ್ಞಾವಂತರಾಗುತ್ತಿದ್ದಾರೆ. ಬೀದಿಗಿಳಿದು ಪ್ರಶ್ನೆ ಕೇಳುತ್ತಿದ್ದಾರೆ. ಜಗತ್ತಿನ ಬೇರೆ ಬೇರೆ ದೇಶಗಳಲ್ಲೂ ಜನ ಹೋರಾಟಗಳು ಬೆಳೆಯುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಎಂದರು.

ಈ ಸುದ್ದಿ ಓದಿದ್ದೀರಾ? ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ಕೋವಿಡ್ ಸಾಂಕ್ರಾಮಿಕ ಬಂದಾಗ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಜನರ ಹೊಟ್ಟೆಯ ಮೇಲೆ ಬರೆ ಎಳೆಯಲಾಯಿತು. ನಗರಗಳಲ್ಲಿರುವ ಕೋಟ್ಯಾಂತರ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ನಡೆದೇ ಸಾಗಿದರು. ಹಾಗೆ ಪ್ರಯಾಣಿಸುವಾಗ ಸಾವಿರಾರು ಜನ ಮೃತಪಟ್ಟರು. ಅದೇ ವಿದೇಶಗಳಲ್ಲಿರುವ ಶ್ರೀಮಂತರನ್ನು ಕರೆತರಲು ವಿಮಾನಗಳನ್ನು ಕಳಿಸಲಾಯಿತು. ಬಡವರು ಮನುಷ್ಯರಲ್ಲವಾ ಎಂದು ಪ್ರಶ್ನಿಸಿದರು.

ಕೋವಿಡ್ ಎರಡನೇ ಅಲೆಯಲ್ಲಿ ಲಕ್ಷಾಂತರ ಜನ ಸೂಕ್ತ ಚಿಕಿತ್ಸೆ ಇಲ್ಲದೇ, ಆಮ್ಲಜನಕದ ಕೊರತೆಯಿಂದ  ಮರಣಕ್ಕೆ ತುತ್ತಾದರು. ಎಷ್ಟೋ ಶವಗಳಿಗೆ ಗೌರವದ ಅಂತ್ಯಸಂಸ್ಕಾರ ಕೂಡ ದೊರೆಯಲಿಲ್ಲ. ಕೋವಿಡ್ ಸಾಂಕ್ರಾಮಿಕದ ನಿರ್ವಹಣೆಯನ್ನು ಸರಿಯಾಗಿ ಮಾಡಲಾರದೇ ಗಂಟೆ ಬಾರಿಸಿ, ಚಪ್ಪಾಳೆ ಬಾರಿಸಿ ಎಂದು ಯಾಮಾರಿಸಲಾಯಿತು ಎಂದು ಆರೋಪಿಸಿದರು.

ಬಂಡವಾಳಗಾರರ ಪರವಾಗಿರುವ ಈ ಪಕ್ಷಗಳಿಂದ ಜನರ ಯಾವುದೇ ಸಮಸ್ಯೆಗಳ ಪರಿಹಾರ ಸಾಧ್ಯವಿಲ್ಲ.  ಅದಕ್ಕಾಗಿ ಜನ ಹೋರಾಟಗಳು ಬೆಳೆದು ದೇಶದಲ್ಲಿ ಕ್ರಾಂತಿಯ ಮೂಲಕ ಸಮಾಜವಾದಿ ವ್ಯವಸ್ಥೆ ಬಂದಾಗ ಜನ ನೆಮ್ಮದಿಯಾಗಿ ಬದುಕಲು ಸಾಧ್ಯ. ಅದಕ್ಕಾಗಿ ತಮ್ಮ ಜನರ ಸಮಸ್ಯೆಗಳ ವಿರುದ್ಧ ನಿರಂತರವಾಗಿ ಚಳವಳಿಗಳನ್ನು ರೂಪಿಸುತ್ತಿದೆ. ಈ ಚಳವಳಿಗಳನ್ನು ಬಲಪಡಿಸಿ, ವಿಧಾನಸಭೆಯಲ್ಲಿ ಜನರ ದನಿಯಾಗಿ ಕೆಲಸ ಮಾಡಲು ನಮ್ಮ ಪಕ್ಷದ ಅಭ್ಯರ್ಥಿ ಮಧುಲತಾ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಸೆಕ್ರೆಟಿಯೇಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ, ಅಭ್ಯರ್ಥಿ ಮಧುಲತಾ ಗೌಡರ, ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ ಕಾರ್ಯಕ್ರಮದ ಅಧ್ಯಕ್ಷತ ವಹಿಸಿದ್ದರು. ವೇದಿಕೆಯ ಮೇಲೆ ಗಂಗಾಧರ ಬಡಿಗೇರ, ಗೋವಿಂದ ಕೃಷ್ಣಪ್ಪನವರ, ದೀಪಾ ಧಾರವಾಡ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X