ತೇರದಾಳ ಕ್ಷೇತ್ರ | ನೇಕಾರ ಸಮುದಾಯ ಯಾರ ಪರ ನಿಲ್ಲುತ್ತೋ ಅವರೇ ಶಾಸಕರು

Date:

ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಫೈಟ್‌ ಇರಲಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ ಗೆಲುವಿಗೆ ಕಾರಣವಾಗುತ್ತಾರೆ ಎಂಬುದು ಕೂಡ ಕುತೂಹಲ ಸೃಷ್ಟಿಸಿದೆ.

‌ಜೈನರ ಪ್ರಮುಖ ಕೇಂದ್ರವಾಗಿರುವ ತೇರದಾಳ, ರಾಜ್ಯದಲ್ಲಿ ಅತಿಹೆಚ್ಚು ನೇಕಾರರನ್ನು ಹೊಂದಿರುವ ವಿಧಾನಸಭಾ ಕ್ಷೇತ್ರ. ನಾಲ್ಕನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ತೇರದಾಳ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ.

- Advertisement -

2008ರಲ್ಲಿ ನಡೆದ ಕ್ಷೇತ್ರ ಮರುವಿಂಗಡನೆಯಲ್ಲಿ ಗುಳೇದಗುಡ್ಡ ಮತ್ತು ಜಮಖಂಡಿಯ ಹಳ್ಳಿಗಳನ್ನು ಸೇರಿಸಿ, ತೇರದಾಳ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ರಬಕವಿ, ಬನಹಟ್ಟಿ, ಮಹಾಲಿಂಗಪುರ ಈ ಕ್ಷೇತ್ರದ ಪ್ರಮುಖ ಪಟ್ಟಣಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ 2018ರಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಬಾಗಲಕೋಟ ಜಿಲ್ಲೆಯ ತೇರದಾಳವನ್ನು ಹೊಸ ತಾಲೂಕನ್ನಾಗಿ ಘೋಷಣೆ ಮಾಡಿದರು. ರಾಜಕೀಯವಾಗಿ ಇಲ್ಲಿ ಮೇಲಿಂದ ಮೇಲೆ ನೇಕಾರರಿಗೆ ಮನ್ನಣೆ ನೀಡಿ ಅನ್ನುವ ಕೂಗು ಸದಾ ಕೇಳುತ್ತಲೇ ಇರುತ್ತದೆ.

ಆದರೆ ನೇಕಾರ ಪ್ರಾತಿನಿಧ್ಯ ವಿಚಾರದಲ್ಲಿ ಕಾಂಗ್ರೆಸ್​ ನೇಕಾರ ಸಮುದಾಯದ ಉಮಾಶ್ರೀ ಅವರಿಗೆ ಮಣೆ ಹಾಕಿ ಒಮ್ಮೆ ಗೆಲುವು ಕಂಡು ಇನ್ನೊಮ್ಮೆ ಸೋಲು ಅನುಭವಿಸಿದೆ. ಆದರೆ ಬಿಜೆಪಿ ಮಾತ್ರ ಈ ವಿಚಾರದಲ್ಲಿ ಭಿನ್ನವಾಗಿ ನಡೆದುಕೊಂಡಿದೆ. ಪ್ರತಿ ಬಾರಿ ನೇಕಾರರಿಗೆ ಸ್ಪರ್ಧೆಗೆ ಅವಕಾಶ ಕೊಡಿ ಎಂಬ ಕೂಗು ಇದ್ದರೂ ಇದೂವರೆಗೂ ಬಿಜೆಪಿ ನೇಕಾರರಿಗೆ ಮನ್ನಣೆ ನೀಡಿಲ್ಲ. ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿ, ನೇಕಾರ ಸಮುದಾಯ ಅಲ್ಲದ ಲಿಂಗಾಯತ ಸಮುದಾಯದ ಸಿದ್ದು ಸವದಿಗೆ ಟಿಕೆಟ್‌ ನೀಡಿದೆ.

2008ರಿಂದ ಕಾಂಗ್ರೆಸ್‌ನಿಂದ ತೇರದಾಳ ಕ್ಷೇತ್ರವನ್ನು ಪ್ರತಿನಿಧಿಸುತ್ತ ಬಂದ ನಟಿ ಉಮಾಶ್ರೀಗೆ ಈ ಬಾರಿ ಟಿಕೆಟ್‌ ತಪ್ಪಿದೆ. ಹೊಸ ಮುಖ ಸಿದ್ದು ಕೊಣ್ಣೂರು ಅವರಿಗೆ ಕಾಂಗ್ರೆಸ್‌ ಮಣೆ ಹಾಕಿದೆ. 2013ರಲ್ಲಿ ನಟಿ ಉಮಾಶ್ರೀ ಶಾಸಕಿಯಾಗಿ ಆಯ್ಕೆಯಾಗಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವೆಯೂ ಆದರು. ಅವರು ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ನೊಣವಿನಕೆರೆ ಗ್ರಾಮದವರು. ಸದಾ ಬೆಂಗಳೂರಿನಲ್ಲೇ ಕಾಲ ಕಳೆಯುತ್ತಾರೆ ಎನ್ನುವ ದೂರು ಇವರ ಮೇಲಿತ್ತು. ಕೊನೆ ಕ್ಷಣದವರೆಗೂ ತಮಗೇ ಟಿಕೆಟ್‌ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ, ತೇರದಾಳದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ಕೂಗು ಬಲವಾಗಿ ಕೇಳಿ ಬಂದಿದ್ದರಿಂದ ಸಿದ್ದು ಕೊಣ್ಣೂರು ಅವರಿಗೆ ಟಿಕೆಟ್‌ ಲಭಿಸಿದೆ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಬಿಜೆಪಿಯಲ್ಲಿ ಈ ಬಾರಿ ಜಿಲ್ಲೆಯ ನೇಕಾರ ಮುಖಂಡ ಮನೋಹರ ಶಿರೋಳ ಪ್ರಬಲ ಆಕಾಂಕ್ಷಿಯಾಗಿದ್ದರು. ಇವುಗಳ ಮಧ್ಯೆ ಮೂರನೇ ವ್ಯಕ್ತಿ ಪಿಕೆಪಿಎಸ್​ ಮಾಜಿ ನಿರ್ದೆಶಕ ಭೀಮಶಿ ಮಗದುಮ್​ ಸಹ ಬಿಜೆಪಿ ಟಿಕೆಟ್​ ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಬಿಜೆಪಿ ಅಂತಿಮವಾಗಿ ಸಿದ್ದು ಸವದಿಗೆ ಮುದ್ರೆ ಒತ್ತಿದೆ.

ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ನೀಡಲು ಮತ್ತೊಬ್ಬ ಅಭ್ಯರ್ಥಿ ಸಜ್ಜಾಗಿದ್ದಾರೆ. ಅದು ಕಾಂಗ್ರೆಸ್‌ನಿಂದ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪದ್ಮಜೀತ್ ನಾಡಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ.

ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಫೈಟ್‌ ಇರಲಿದೆ. ಮತ್ತೊಂದು ಅವಧಿಗೆ ಗೆಲ್ಲಲು ಸಿದ್ದು ಸವದಿ ಪ್ರಯತ್ನಿಸುತ್ತಿದ್ದು, ಸವದಿಗೆ ಕಾಂಗ್ರೆಸ್‌ನ ಹೊಸ ಮುಖ ಸಿದ್ದು ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ ಗೆಲುವಿಗೆ ಕಾರಣವಾಗುತ್ತಾರೆ ಎಂಬುದು ಕೂಡ ಕುತೂಹಲ ಸೃಷ್ಟಿಸಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...