ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

Date:

  • ಏ. 20ರಂದು ಖರೀದಿಸಿರುವ ಛಾಪಾಕಾಗದ ಏ. 19 ರಂದೇ ಅಪ್ಲೋಡ್
  • ಗಡುವು ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಕೆ

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಗಡುವು ಮುಗಿದ ನಂತರ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಂಶುಲ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಏಪ್ರಿಲ್ 20ರಂದು ಖರೀದಿಸಿರುವ ಛಾಪಾಕಾಗದದ ದಾಖಲೆಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಏಪ್ರಿಲ್ 19 ರಂದೇ ಅಪ್ಲೋಡ್ ಮಾಡಿದೆ. ಇದು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

“ಪ್ರಮಾಣಪತ್ರದ ಛಾಪಾ ಕಾಗದವನ್ನು ಏ. 20 ರಂದು ಸಂಜೆ 7.30ಕ್ಕೆ ವಿಕಾಸ್ ಕೋಆಪರೇಟಿವ್‌ ಸೊಸೈಟಿ ಸಹಕಾರ ಸಂಘದಿಂದ ಖರೀದಿಸಲಾಗಿದೆ. ಇ ಸ್ಟಾಂಪಿಂಗ್ ಪ್ರಕಾರ ಇಡೀ ರಾಜ್ಯದಲ್ಲಿ ಅದನ್ನು ಸಂಜೆ 5 ಗಂಟೆ ಒಳಗಾಗಿ ನೀಡಬೇಕು ಎಂದು ಕಾನೂನಿನಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾತ್ರಿ 7.38ಕ್ಕೆ ಛಾಪಾಕಾಗದ ನೀಡಲಾಗಿದೆ. ಈ ಛಾಪಾಕಾಗದ ಖರೀದಿ ಮಾಡಿರುವುದೇ ಅಕ್ರಮ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆ ಮಾಡಲು ರಾಜ್ಯ ಚುನಾವಣಾ ಆಯೋಗ ನೀತಿ ನಿಯಮ ಉಲ್ಲಂಘಿಸಿದ್ದು, ಏ. 20ರಂದು ಸಲ್ಲಿಕೆ ಮಾಡಲಾಗಿರುವ ದಾಖಲೆಯನ್ನು 19ರಂದೇ ಅಪ್ಲೋಡ್ ಮಾಡಲಾಗಿದೆ ಎಂದು ತೋರಿಸಲಾಗಿದೆ. ಇದು ಹೇಗೆ ಸಾಧ್ಯ? ನಡ್ಡಾ, ಅಮಿತ್ ಶಾ, ಮೋದಿ ಅಥವಾ ನಮ್ಮ ಪೇಸಿಎಂ ಬೊಮ್ಮಾಯಿ ಇದರಲ್ಲಿ ಹಸ್ತಕ್ಷೇಪ ಮಾಡಿದ್ದಾರಾ? ಕೇಂದ್ರ ಚುನಾವಣಾ ಆಯೋಗದ ರಾಜ್ಯ ವಿಭಾಗದ ಅಧಿಕಾರಿಗಳು, ಐಎಎಸ್ ಅಧಿಕಾರಿಗಳು ಪ್ರಭಾವ ಬೀರಿದ್ದಾರೆಯೇ ಎನ್ನುವುದನ್ನು ಮುಖ್ಯಚುನಾವಣಾಧಿಕಾರಿ ತಿಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಕ್ಷಗಳಿಗೆ ತಗ್ಗಿದ ಬಂಡಾಯದ ಬಿಸಿ; ಚುನಾವಣೆ ಕಣದಲ್ಲಿ 2,613 ಅಭ್ಯರ್ಥಿಗಳು

“ರಾಜ್ಯದ ಆರೂವರೆ ಕೋಟಿ ಜನರ ನಂಬಿಕೆಗೆ ಚುನಾವಣಾ ಆಯೋಗ ದ್ರೋಹ ಬಗೆಯಬಾರದು. ಡಬಲ್ ಎಂಜಿನ್ ಸರ್ಕಾರದ ಕಚೇರಿಗಳಿಂದ ಒತ್ತಡ ಬಂದಿದ್ದರೆ ಅದನ್ನು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...