ಚಿಕ್ಕಮಗಳೂರಿನ ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು : ಪ್ರಿಯಾಂಕಾ ಗಾಂಧಿ ವಾದ್ರಾ

Date:

  • ಮತ ನೀಡಿ ವಿಶ್ವಾಸ ತುಂಬಿ ಎಂದ ಪ್ರಿಯಾಂಕ ವಾದ್ರಾ
  • ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಭಾಷಣ

“ನನ್ನ ಅಜ್ಜಿಯ ಸಂಕಷ್ಟದ ಕಾಲದಲ್ಲಿ ಚಿಕ್ಕಮಗಳೂರು ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು. ಈಗ ಕಾಂಗ್ರೆಸ್‌ಗೆ ಸಂಕಷ್ಟದ ಸಮಯ ಎದುರಾಗುತ್ತಿದೆ. ಜಿಲ್ಲೆಯ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಟಿ ಡಿ ರಾಜೇಗೌಡ ಪರ ಮತ ಯಾಚಿಸಿದ್ದಾರೆ.

“ಸಮಾವೇಶದ ನಡುವೆ ಮಳೆ ಬರುತ್ತಿದೆ. ಇದು ಭಗವಂತನ ಆಶೀರ್ವಾದ. ಚಿಕ್ಕಮಗಳೂರನ್ನು ನಾನು ನನ್ನ ಜೀವಮಾನದವರೆಗೆ ಮರೆಯುವುದಿಲ್ಲ” ಎಂದಿದ್ದಾರೆ. ಮಳೆಯ ನಡುವೆಯೂ ಜನರು ಪ್ರಿಯಾಂಕಾ ವಾದ್ರಾ ಅವರ ಭಾಷಣ ಕೇಳಲು ನೆರೆದಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಹುಲ್ ಗಾಂಧಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ, ಲೋಕಸಭೆಯಿಂದ ಹೊರಹಾಕಿದ್ದಾರೆ. ಆದರೆ, ರಾಹುಲ್ ಮತ್ತೆ ಲೋಕಸಭೆಗೆ ಬರುತ್ತಾನೆ ಎನ್ನುವ ವಿಶ್ವಾಸವಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಪರೇಷನ್ ಕಮಲ ಮಾಡಿದಾಗಲೇ ಬಿಜೆಪಿಯ ತತ್ವ ಸಿದ್ದಾಂತ ಮಣ್ಣು ಪಾಲದವು : ಜಗದೀಶ್ ಶೆಟ್ಟರ್

“ಕರ್ನಾಟಕದ ಈ ಚುನಾವಣೆ ಸತ್ಯ ಮತ್ತು ಜಯದ ಹೋರಾಟ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಎಲ್ಲ ಕಡೆಯಿಂದಲೂ ನಮಗೆ ಮೋಸವಾಗುತ್ತಿದೆ. ನಿಮ್ಮ ಮತವನ್ನು ನೀಡಿ ವಿಶ್ವಾಸ ತುಂಬಿ” ಎಂದು ಮನವಿ ಮಾಡಿಕೊಂಡಿದ್ದಾರೆ.

“ಕರ್ನಾಟಕ ಸ್ವಾಭಿಮಾನದ ನಾಡು. ಆದರೆ, ರಾಜ್ಯದ ಪರಿಸ್ಥಿತಿಯನ್ನು ಬಿಜೆಪಿ ಬದಲಿಸುತ್ತಿದೆ. ನಾವು ನಿಮ್ಮಿಂದ ಲೂಟಿ ಮಾಡುವುದಿಲ್ಲ. ಬೆಲೆ ಏರಿಕೆ ಕಡಿಮೆ ಮಾಡುತ್ತೇವೆ” ಎಂದಿದ್ದಾರೆ.

ಪ್ರಿಯಾಂಕಾ ಗಾಂಧಿ ಬಾಳೆಹೊನ್ನೂರು ಮಠಕ್ಕೆ ಭೇಟಿ‌ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್ ಆರ್‌ ಪುರ ತಾಲೂಕಿನ ಬಾಳೆಹೊನ್ನೂರು ಮಠಕ್ಕೆ ಭೇಟಿ ನೀಡಿ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೂನ್ 15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ’: ಸಚಿವ ಡಾ. ಎಚ್ ಕೆ ಪಾಟೀಲ್

ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶ, ಉದ್ಯೋಗ ಸೃಷ್ಟಿಗೆ...

ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ

ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...

ಸಚಿವ ಸ್ಥಾನ ತಲೆದಂಡದಿಂದ ತಪ್ಪಿಸಿಕೊಳ್ಳಲು ಮೂವರು ಡಿಸಿಎಂ ವಿಚಾರ ಪ್ರಸ್ತಾಪಿಸಿದ್ರಾ ಕೆ ಎನ್‌ ರಾಜಣ್ಣ?

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರ ಕಳೆಯುವದರೊಳಗೆ ಮತ್ತೆ...