ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

Date:

  • ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆ
  • ಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯ

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯ ವಿಧಾನಸಭಾ ಚುನಾವಣೆಯ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್, ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಇಂದು ಮೂರನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಬೆಳಗಾವಿ ಜಿಲ್ಲೆಯ ಐದು ಕ್ಷೇತ್ರ ಸೇರಿ ಬಾಕಿ ಇರುವ ಕ್ಷೇತ್ರಗಳ ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಅಂತಿಮ ಪಟ್ಟಿ ಇಂದು ಬಹುತೇಕ ಬಿಡುಗಡೆ ಆಗುತ್ತದೆ. ನಾನು ಪ್ರಚಾರ ಸಭೆ ಪ್ರಾರಂಭ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

ಲಕ್ಷ್ಮಣ ಸವದಿ ಅವರಿಗೆ ಹೆಚ್ಚಿನ ಚುನಾವಣಾ ಜವಾಬ್ದಾರಿ ನೀಡುವ ಕುರಿತು ಮಾತನಾಡಿ, “ಬೆಳಗಾವಿಯಲ್ಲಿ ಮತ್ತು ಬೇರೆ ಎಲ್ಲೆಲ್ಲಿ ಪ್ರಚಾರಕ್ಕೆ ಹೋಗುತ್ತೇವೆ ಅಂತಾರೋ ಅಲ್ಲೆಲ್ಲಾ ಕಳುಹಿಸಿ ಕೊಡುತ್ತೇವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 15ರಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಸಹ ಜಾರಿಕಿಹೊಳಿ ಅವರ ಪ್ರಚಾರದ ವಾಹನ ಬಳಸುತ್ತಾರೆ” ಎಂದು ತಿಳಿಸಿದ್ದಾರೆ.

ಈ ವೇಳೆ ಎಐಸಿಸಿ ಕಾರ್ಯದರ್ಶಿ ವಿಷ್ಣು ನಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಪ್ರಕಾಶ ರಾಥೋಡ್​, ಕೆಪಿಸಿಸಿ ಸದಸ್ಯ ರಾಜೇಂದ್ರ ಪಾಟೀಲ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಅವರಿಗೆ ಈಗಾಗಲೇ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಜೊತೆಗೆ ಕೋಲಾರದಿಂದಲೂ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ, ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ಆಪ್ತ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಕೊಡಿ ಎಂದಿದ್ದಾರೆ, ಸಿದ್ದರಾಮಯ್ಯ ಅವರು ಕೂಡ ವರುಣಾ ಕ್ಷೇತ್ರವೊಂದನ್ನೇ ಆಯ್ಕೆ ಮಾಡಿಕೊಳ್ಳುವರು ಎನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...