ಈ ಬಾರಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ

Date:

Advertisements
  • ಬಿಜೆಪಿಗೆ 40ಕ್ಕಿಂತ ಹೆಚ್ಚು ಸೀಟು ಸಿಗುವುದಿಲ್ಲ ಎಂದು ರಾಹುಲ್ ಲೇವಡಿ
  • ಬಿಜೆಪಿ ಬಳಸುತ್ತಿರುವ 40% ಕಮಿಷನ್ ಹಣ ಈ ನಾಡಿನ ಜನರಿಗೆ ಸೇರಿದ್ದು

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹೇಳಿದರು.

ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೀದರ್ ಬಸವಣ್ಣನವರ ಕರ್ಮಭೂಮಿ. ಬಸವಣ್ಣ ಶತಮಾನಗಳ ಹಿಂದೆಯೇ ಲೋಕತಂತ್ರದ ಬಗ್ಗೆ ಮಾತನಾಡಿದ್ದರು.

ಇಂದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಇದ್ದರೆ ಅದಕ್ಕೆ ಅಡಿಪಾಯ ಹಾಕಿದವರು ಬಸವಣ್ಣನವರು. ದುರಂತ ಎಂದರೆ, ಇಂದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಬಿಜೆಪಿ ಹಾಗೂ ಆರ್ ಎಸ್ಎಸ್ ದಾಳಿ ಮಾಡುತ್ತಿದೆ.

Advertisements

ಸಮಾಜದಲ್ಲಿ ದ್ವೇಷ ಬಿತ್ತಿ, ಹಿಂಸೆ ಹೆಚ್ಚಿಸುತ್ತಿದ್ದಾರೆ. ದೇಶದ ಸಂಪತ್ತನ್ನು ಕೆಲವರ ಕೈಗೆ ನೀಡುತ್ತಿದ್ದಾರೆ. ಬಿಜೆಪಿ ಹಾಗೂ ಆರ್ ಎಸ್ಎಸ್ ಅವರ ವಿಚಾರಧಾರೆ ಬಸವಣ್ಣನವರ ವಿಚಾರಧಾರೆಗೆ ವಿರುದ್ಧವಾಗಿದೆ ಎಂದು ಕಿಡಿಕಾದರು.

ಕೆಲ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕಾಂಗ್ರೆಸ್ 150 ಕ್ಷೇತ್ರಗಳ ಪ್ರಚಂಡ ಗೆಲುವು ಸಾಧಿಸಲಿದೆ. 40% ಕಮಿಷನ್ ಸರ್ಕಾರಕ್ಕೆ 40ಕ್ಕಿಂತ ಹೆಚ್ಚು ಕ್ಷೇತ್ರ ಸಿಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ನಮ್ಮ ಪಕ್ಷ ಜನಪರ ಕೆಲಸ ಮಾಡುತ್ತಿದೆ. ಹೀಗಾಗಿ ನಾನು ಪಕ್ಷದ ನಾಯಕರಿಗೆ ಜನರಿಗೇ ಬೇಕಾದ ಅಗತ್ಯ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ. ಈ ಯೋಜನೆಗಳನ್ನು ಸರ್ಕಾರ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಿ ಎಂದು ಹೇಳಿದ್ದೆ ಎಂದರು.

ಮೋದಿ ಅವರು ಈ ದೇಶದಲ್ಲಿ ಕೇವಲ ಒಂದಿಬ್ಬರು ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಈ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನ ಸಾಮಾನ್ಯರಿಗಾಗಿ ನೀಡಲಾಗುತ್ತಿವೆ. ಈ ನಾಲ್ಕು ಯೋಜನೆ ಕರ್ನಾಟಕದ ಜನರ ಬದುಕು ಬದಲಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿಯನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ 40% ಸರ್ಕಾರ ಎಂದು ಕರೆಯುತ್ತಾರೆ. ಈ ಬಿರುದು ಕೊಟ್ಟಿದ್ದು ನಾನಲ್ಲ. ರಾಜ್ಯದ ಜನ ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ರಾಜ್ಯದ ಜನರು ಕಣ್ಣಾರೆ ಕಂಡಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲೇ ಹೋದರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಗುತ್ತಿಗೆದಾರರ ಸಂಘದವರು ರಾಜ್ಯದಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪತ್ರ ಬರೆದರೆ ಅದಕ್ಕೆ ಯಾವುದೇ ಉತ್ತರವಿಲ್ಲ.

ಇನ್ನು ಮೈಸೂರು ಸ್ಯಾಂಡಲ್ ಸೋಪ್ ಸಂಸ್ಥೆಯಲ್ಲಿ ನಡೆದಿರುವ ಅಕ್ರಮದಲ್ಲಿ ಬಿಜೆಪಿ ಶಾಸಕರ ಪುತ್ರ 8 ಕೋಟಿ ಲೂಟಿ ವೇಳೆ ಸಿಕ್ಕಿಬಿದಿದ್ದಾರೆ. ಈ ಬಗ್ಗೆ ಮೋದಿ ಮೌನವಾಗಿದ್ದಾರೆ. ನೇಮಕಾತಿ ಹಗರಣವಾದಾಗ ಸರ್ಕಾರ ಒಂದೇ ಒಂದು ಮಾತನಾಡಲಿಲ್ಲ. ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಜೆಇಇ ನೇಮಕಾತಿ ಅಕ್ರಮದ ಬಗ್ಗೆ ಮಾತನಾಡಲಿಲ್ಲ.

ನಾನು ಸಂಸತ್ತಿನಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾ ಅದಾನಿ ಅವರ ಜತೆಗಿನ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದೆ. ಅದಕ್ಕೆ ಅವರು ನನ್ನ ಮೈಕ್ ಆಫ್ ಮಾಡಿ ನನ್ನನ್ನು ಸಂಸತ್ತಿನಿಂದ ಅನರ್ಹರನ್ನಾಗಿ ಮಾಡಿದರು. ಲೋಕಸಭೆಯಿಂದ ಹೊರಹಾಕಿದರು.

ನಾನು ಭ್ರಷ್ಟಾಚಾರದ ಬಗ್ಗೆ ಮೋದಿ ಅವರನ್ನು ಪ್ರಶ್ನಿಸಿದ್ದೆ. ಮೋದಿ ಹಾಗೂ ಅದಾನಿ ಅವರ ನಡುವಣ ಸಂಬಂಧವೇನು ಎಂದು ಕೇಳಿದೆ. ಬಿಜೆಪಿಯವರ ಈ ದಬ್ಬಾಳಿಕೆಗೆ ನಾನು ಹೆದರುವುದಿಲ್ಲ. ಕರ್ನಾಟಕ ರಾಜ್ಯದ ಜನರೂ ಹೆದರುವುದಿಲ್ಲ ಎಂದು ರಾಹುಲ್ ಹೇಳಿದರು.ರಾಹುಲ್‌ ಹುಮನಾಬಾದ್ರಾಜ್ಯದ ಜನ ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. 40% ಕಮಿಷನ್ ಹಣ ನಿಮ್ಮ ಹಣ. ಈ ಹಣವನ್ನು ನಿಮ್ಮ ಆರೋಗ್ಯ, ಶಿಕ್ಷಣಕ್ಕೆ ಮೀಸಲಿಡಬೇಕು. ಕಳೆದ ಬಾರಿ ನೀವು ಬಿಜೆಪಿ ಸರ್ಕಾರಕ್ಕೆ ಅಧಿಕಾರ ನೀಡಿರಲಿಲ್ಲ. ಆದರೂ ಅವರು ಅಧಿಕಾರಕ್ಕೆ ಬಂದರು.

ಬಿಜೆಪಿಯವರು ಭ್ರಷ್ಟಾಚಾರದ ಹಣದಲ್ಲಿ ಮೈತ್ರಿ ಸರ್ಕಾರ ಬೀಳಿಸಿ, 40% ಕಮಿಷನ್ ಲೂಟಿ ಮಾಡಿದರು. ಈ ಬಾರಿಯೂ ಈ ಲೂಟಿ ಹಣದಲ್ಲಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸಲಿದ್ದಾರೆ. ಹೀಗಾಗಿ ನೀವು ಕಾಂಗ್ರೆಸ್ ಪಕ್ಷವನ್ನು 150 ಕ್ಷೇತ್ರಗಳಲ್ಲಿ ಗೆಲ್ಲಿಸಲೇಬೇಕು. ಇಲ್ಲದಿದ್ದರೆ ಮತ್ತೆ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಾರೆ. ಬಿಜೆಪಿಗೆ 40 ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಬಿಡಬಾರದು ಎಂದು ರಾಹುಲ್ ಹೇಳಿದರು.

ಮೋದಿ ಅವರು ನಾನು ಒಬಿಸಿ ಸಮುದಾಯಕ್ಕೆ ಅಪಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ಎಂದೂ ಯಾರಿಗೂ ಅಪಮಾನ ಮಾಡುವುದಿಲ್ಲ
.
ಈ ಸುದ್ದಿ ಓದಿದ್ದೀರಾ? :ದೇಶ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ…

ನರೇಂದ್ರ ಮೋದಿ ಅವರಿಗೆ ಒಬಿಸಿ ಸಮುದಾಯಗಳ ಬಗ್ಗೆ ಕಾಳಜಿ ಇದ್ದರೆ, ಈ ಸಮುದಾಯಗಳಿಗೆ ರಾಜಕೀಯ, ಆರ್ಥಿಕ ಶಕ್ತಿ ತುಂಬಲಿ. ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ ಎಂದು ರಾಹುಲ್ ಹೇಳಿದರು.

ಯುಪಿಎ ಸರ್ಕಾರ 2011ರಲ್ಲಿ ಜಾತಿ ಗಣತಿ ಮಾಡಿಸಿದ್ದು, ಅದರ ಪ್ರಕಾರ ದೇಶದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತರ ಜನಸಂಖ್ಯೆ ಎಷ್ಟಿದೆ ಎಂದು ಬಹಿರಂಗಪಡಿಸಲಿ ಎಂದರು.

ಮೋದಿ ಸರ್ಕಾರ ಜನಸಂಖ್ಯೆ ಅಂಕಿ ಅಂಶಗಳನ್ನು ಯಾರಿಗೂ ನೀಡುತ್ತಿಲ್ಲ. ಬಿಜೆಪಿ ಸರ್ಕಾರ ಈ ಕೆಲಸ ಮಾಡದಿದ್ದರೆ ಕಾಂಗ್ರೆಸ್ ಸರ್ಕಾರ ಈ ಕೆಲಸ ಮಾಡಲಿದೆ. ನಾವು ಒಬಿಸಿ, ದಲಿತರು, ಆದಿವಾಸಿಗಳಿಗೆ ಶಕ್ತಿ ತುಂಬಲಿದೆ ಎಂದು ಹೇಳಿದರು.

ಮೋದಿ ಅವರ ಸರ್ಕಾರದಲ್ಲಿ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳ ಪೈಕಿ ಕೇವಲ 7% ಮಾತ್ರ ಹಿಂದುಳಿದವರು, ದಲಿತರು ಇದ್ದಾರೆ. ಇದು ಮೋದಿ ಅವರ ಕಾಳಜಿಯೇ? ಈ 7% ಅಧಿಕಾರಿಗಳನ್ನು ಸಣ್ಣಪುಟ್ಟ ಕೆಲಸಕ್ಕೆ ಮೀಸಲಿಟ್ಟಿದ್ದಾರೆ. ನಿಮ್ಮಿಂದ ಈ ಕೆಲಸ ಸಾಧ್ಯವಾಗದಿದ್ರೆ, ಅಧಿಕಾರ ಬಿಟ್ಟು ತೊಲಗಿ, ನಾವು ಈ ಕೆಲಸ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X