ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ

Date:

  • ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ
  • ಬಿಜೆಪಿಯ ಸತೀಶ್ ರೆಡ್ಡಿ ಎದುರು ಸೆಣಸಲಿರುವ ಉಮಾಪತಿ ಗೌಡ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ಉಮಾಪತಿಗೌಡ ಚುನಾವಣಾ ಕಣಕ್ಕಿಳಿದಿದ್ದಾರೆ.

- Advertisement -

ಚಂದನವನದಲ್ಲಿ ಹೆಸರು ಮಾಡಿದ ಹೆಬ್ಬುಲಿ, ಮದಗಜ, ರಾಬರ್ಟ್‌ನಂತಹ ಚಿತ್ರಗಳನ್ನು ನಿರ್ಮಾಣ ಮಾಡಿ ಕೋಟಿ ನಿರ್ಮಾಪಕನೆಂಬ ಹೆಸರನ್ನು ಉಮಾಪತಿಗೌಡ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಚಿತ್ರರಂಗದ ಬಳಿಕ ಈಗ ರಾಜಕಾರಣದಲ್ಲಿ ಅದೃಷ್ಟ ಪರೀಕ್ಷೆಗೆ ಬಂದ ಉಮಾಪತಿಯವರನ್ನು ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನಾಗಿಸಿ, ಬೊಮ್ಮನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲು ಅನುವು ಮಾಡಿಕೊಟ್ಟಿದೆ.

ಏಪ್ರಿಲ್ 15ರಂದು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಉಮಾಪತಿ ಗೌಡ ಅವರ ಹೆಸರಿದ್ದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

ಉಮಾಪತಿ ಗೌಡ ನಿವಾಸದಲ್ಲಿ ನೆರೆದ ಬೆಂಬಲಿಗರು ಹಾಗೂ ಕುಟುಂಬಸ್ಥರು ಅಭ್ಯರ್ಥಿ ಉಮಾಪತಿಗೆ ಸಿಹಿ ತಿನ್ನಿಸಿದರು.

ಈ ಸುದ್ದಿ ಓದಿದ್ದೀರಾ? : ನಟ ಚೇತನ್‌ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಈ ವೇಳೆ ಮಾತನಾಡಿದ ಉಮಾಪತಿ ಗೌಡ, ಈ ಬಾರಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನೂರಕ್ಕೆ ನೂರು ಪರ್ಸೆಂಟ್ ಗೆಲುವು ದಾಖಲಿಸುತ್ತದೆ ಎಂದರು.

ಉಮಾಪತಿ ಗೌಡ ಕ್ಷೇತ್ರದ ಹಾಲಿ ಶಾಸಕ ಹಾಗೂ ಗೆಲುವಿನ ಹ್ಯಾಟ್ರಿಕ್ ಕಂಡಿರುವ ಬಿಜೆಪಿ ಸತೀಶ್ ರೆಡ್ಡಿ ಎದುರು ಸೆಣಸಲಿದ್ದಾರೆ.

ನಟ ದರ್ಶನ್‌ ಜೊತೆಗಿನ ಜಗಳವೊಂದರ ಕಾರಣದಿಂದ ಉಮಾಪತಿ ಗೌಡ ಇತ್ತೀಚೆಗೆ ಸುದ್ದಿಗೆ ಗ್ರಾಸವಾಗಿದ್ದರು. ಇವರು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಕೂಡ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...