ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

Date:

  • ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು
  • ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು

ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್ ಘೋಷಣೆ ವಿಳಂಬ ಖಂಡಿಸಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಬಿಜೆಪಿ ಈಗಾಗಲೇ 212 ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಎರಡರಲ್ಲೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹೆಸರಿಲ್ಲ. ಈ ಕುರಿತು ಅವರೇ ಅಸಮಾಧಾನ ಹೊರಹಾಕಿ, ಟಿಕೆಟ್ ನಿರಾಕರಣೆಯ ಕಾರಣ ತಿಳಿಸಿ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಹುಬ್ಬಳಿ ಧಾರವಾಡ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ. ಆದ್ದರಿಂದ ಟಿಕೆಟ್ ಘೋಷಣೆಯನ್ನು ಬೇಕಂತಲೇ ಬಿಜೆಪಿ ತಡೆ ಹಿಡಿದಿದೆ. ಪಕ್ಷದ ಈ ನಿರ್ಧಾರವನ್ನು ಖಂಡಿಸಿರುವ ಮಹಾನಗರ ಪಾಲಿಕೆಯ 16 ಚುನಾಯಿತ ಸದಸ್ಯರು ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.ಜಗದೀಶ್ ಶೆಟ್ಟರ್

ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದು, ಸದಸ್ಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಹುಬ್ಬಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವಲ್ಲಿ ತಾವು ವಿಳಂಬ ನೀತಿ ಅನುಸರಿಸುತ್ತಿರುವುದು ಅತೀ ದುಃಖದ ಸಂಗತಿ” ಎಂದು ಪತ್ರದಲ್ಲಿ ಬರೆಯಲಾಗಿದೆ.

“ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದು ಅವಶ್ಯಕ. ಈ ವಿಳಂಬ ನೀತಿ ಖಂಡಿಸಿ ಒಟ್ಟು ಬಿಜೆಪಿ ಮಹಾನಗರ ಪಾಲಿಕೆಯ 16 ಬಿಜೆಪಿ ಸದಸ್ಯರು, ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಚುನಾವಣೆಗೆ ದಿನಗಣನೆ ಆರಂಭವಾದ ಹೊತ್ತಲ್ಲೇ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸುತ್ತಿದೆ. ಒಂದೆಡೆ ಟಿಕೆಟ್ ವಂಚಿತ ಆಕಾಂಕ್ಷಿಗಳು ಪಕ್ಷಕ್ಕೆ ಸೆಡ್ಡು ಹೊಡೆದು ಹೊರಟರೆ, ಮತ್ತೊಂದೆಡೆ ಪಕ್ಷದ ಸ್ಥಳೀಯ ನಾಯಕರು ಸಹ ಬಿಜೆಪಿಗೆ ವಿದಾಯ ಹೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...