ಬಸವನ ಬಾಗೇವಾಡಿ | ಜಲಧಾರೆ ಕಾಮಗಾರಿ ವಿಳಂಬಕ್ಕೆ ಸಚಿವ ಶಿವಾನಂದ ಪಾಟೀಲ್ ಗರಂ

Date:

ಜಲಧಾರೆ ಕಾಮಗಾರಿ ಅವಧಿ ಮೀರಿ, ಹೆಚ್ಚುವರಿ ಒಂದು ವರ್ಷ ಮುಗಿದರೂ ಕಾಮಗಾರಿ ಅಪೂರ್ಣವಾಗಿಯೇ ಉಳಿದದ್ದಕ್ಕೆ ಆಕ್ರೋಶಗೊಂಡ ಸಚಿವ ಶಿವಾನಂದ ಪಾಟೀಲ ಗುತ್ತಿಗೆ ಕಂಪನಿಯ ಯೋಜನಾ ಇಂಜಿನಿಯರ್ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡರು.

- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳ ಕುರಿತು ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಜರುಗಿದ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಜಲಧಾರ ಕಾಮಗಾರಿ ಹೆಚ್ಚುವರಿ ಒಂದು ವರ್ಷದ ಅವಧಿ ಮುಗಿದರು ಅಪೂರ್ಣಗೊಂಡಿರುವುದಕ್ಕೆ ಕುಪಿತರಾದ ಸಚಿವರು, ಎರಡು ತಿಂಗಳಲ್ಲಿ ಜಲಧಾರೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆ ಕಂಪನಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

“ಮತಕ್ಷೇತ್ರದ ಬೃಹತ್ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ವ್ಯಥೆಯವಾಗದಂತೆ ನಿಗಾ ವಹಿಸಲು ವಿದ್ಯುತ್ ಸಂಪರ್ಕ ಕಡಿತಗಳಾಗದಂತೆ ತಕ್ಷಣವೇ ದುರಸ್ತಿ ಮಾಡಲು ಹೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ, ಗ್ರಾಮೀಣ ಭಾಗದಲ್ಲಿ ರೈತರಿಗೆ ತೊಂದರೆ ನೀಡುತ್ತಿರುವ ಸುಟ್ಟುಹೋದ ವಿದ್ಯುತ್ ಪರಿವರ್ತಕಗಳನ್ನು ಸಕಾಲದಲ್ಲಿ ಮತ್ತು ಇದ್ದೋಪಾದಿಯಲ್ಲಿ ಬದಲಾಯಿಸುವ ಕೆಲಸವಾಗಬೇಕು. ಮತಕ್ಷೇತ್ರದ ಪ್ರತಿಯೊಂದು ಮನೆಗೂ ಸಮರ್ಪಕವಾಗಿ ಕುಡಿಯುವ ನೀರು ತಲುಪಿಸುವ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರವಾಗಿ ಕಾರ್ಯ ಪ್ರವೃತ್ತರಾಗಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ 2025-26 ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮತಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ, ಜಿಲ್ಲಾ ಪಂಚಾಯತ್‌ ಸಿಇಓ ರಿಷಿ ಆನಂದ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಭದ್ರುದ್ದೀನ್ ಸೌದಾಗಾರ, ವಿಜಯಪುರ ಎಸಿ ಗುರುನಾಥ ದಡ್ಡೆ, ಬಸವನಬಾಗೇವಾಡಿ ತಹಶೀಲ್ದಾರ್‌ ಸೋಮನಕಟ್ಟಿ, ಕೋಲಾರ ತಹಶೀಲ್ದಾರ್ ಸಂತೋಷ ಮ್ಯಾಗೇರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಒಂದಲ, ಸುನೀಲ ಮುದ್ದಿನ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...