ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ಯು.ನಿಸಾರ್ ಅಹಮದ್ ಸೂಚನೆ

Date:

ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಜೀವನದಲ್ಲಿ ಸಾಧನೆ ಮಾಡುವಂತೆ ಅಧಿಕಾರಿಗಳು ಮಕ್ಕಳಿಗೆ ಪ್ರೇರಣೆ ಒದಗಿಸುವ ಮೂಲಕ ಪೋಷಕರಿಗೆ ಶಿಕ್ಷಣದ ಅರಿವು ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪೋಷಕರಿಗೆ ಶೈಕ್ಷಣಿಕ ಮಹತ್ವದ ಅರಿವು ಮೂಡಿಸಬೇಕು, ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಎಲ್ಲ ಮಕ್ಕಳು ಶಾಲೆಗೆ ಸೇರಬೇಕು, ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಸಂಗ್ರಹಿಸಿ ಮತ್ತೆ ಮರಳಿ ಶಾಲೆಗೆ ಕರೆತರಬೇಕು. ಶಿಕ್ಷಣದ ಮಹತ್ವದ ಕುರಿತು ಅಧಿಕಾರಿಗಳು ಮನವರಿಕೆ ಮಾಡಿ ಕೊಡಬೇಕು. ಸರ್ಕಾರ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಶಿಕ್ಷಣದಿಂದ ಯಾರು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು. ಈ ನಿಟ್ಟಿನಲ್ಲಿ ಸಂಬಂಧಿತ ಇಲಾಖೆಗಳು ಶ್ರಮಿಸಬೇಕು” ಎಂದರು

ಮುಂದುವರೆದು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಯ ಕುರಿತು ಮಾತನಾಡಿದ ಅವರು, “ಕೊಳಚೆ ನಿರ್ಮೂಲನ ಮಂಡಳಿಯಿಂದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ನಿವೇಶನ ಒದಗಿಸುವ ಕಾಮಗಾರಿ ಚುರುಕಾಗಬೇಕು, ಸರ್ಕಾರಿ ಯೋಜನೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಯೋಜನೆಯ ವರದಿಯನ್ನು ಸಲ್ಲಿಸಬೇಕು. ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಿಳಂಬ ಮಾಡದೆ ತಕ್ಷಣವೇ ಅರ್ಜಿ ವಿಲೇವಾರಿ ಮಾಡಬೇಕು” ಎಂದು ಸೂಚಿಸಿದರು.
“ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿಗಳನ್ನು ಬಾಕಿ ಉಳಿಸಿಕೊಂಡರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಅಲ್ಪಸಂಖ್ಯಾತರು ಆರ್ಥಿಕವಾಗಿ ಸದೃಢ ಹಾಗೂ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಶಿಕ್ಷಣಕ್ಕಾಗಿ ಒತ್ತು ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತ ಸಮುದಾಯದ ನಾಲ್ಕು ವರ್ಷ ವಯೋಮಾನದ ಮಕ್ಕಳು ಅಂಗನವಾಡಿ ಹಾಗೂ ನರ್ಸರಿ ಶಾಲೆಗೆ ದಾಖಲಾತಿಯಾಗಿರುವ ಮಕ್ಕಳು ಹಾಗೂ ಪ್ರಾಥಮಿಕ ಶಾಲಾ ವಿದ್ಯಾಭ್ಯಾಸದಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳ ಕುರಿತ ಸಮಗ್ರ ಮಾಹಿತಿಯನ್ನು ಕ್ರೋಢೀಕರಿಸಿ ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದೊಡ್ಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...