ವಿಜಯಪುರ | ನೂತನ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಲು ಮನವಿ

Date:

ನಗರದ ಗಾಂಧಿ ಚೌಕ್‌ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಸದಸ್ಯರು ಜಿಲ್ಲಾಧಿಕಾರಿಗಳಿಗೆ ಅಕ್ಟೋಬರ್‌ ಎರಡರಂದು ಮನವಿ ಸಲ್ಲಿಸಿದ್ದಾರೆ.

- Advertisement -

ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಗ್ರಂಥಾಲಯ ನಿರ್ಮಾಣವಾಗಿ ಕಾರ್ಯಾರಂಭ ಮಾಡಿದೆ. ಆದರೆ, ಅದನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ. ಕಟ್ಟಡ ಈಗಾಗಲೇ ಸೋರುತ್ತಿದೆ. ಗುತ್ತಿಗೆದಾರರಿಗೆ ನೀಡಿದ ನಿಯಮಗಳ ಪ್ರಕಾರ ಅವರು ಕೇಲವು ತಿಂಗಳ ಹಿಂದೆಯೇ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಮುಗಿಸಿ, ನಗರದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಾಗಿತ್ತು. ಇಲ್ಲಿಯವರೆಗೂ ಆ ಕಾರ್ಯ ಸಾಧ್ಯವಾಗಿಲ್ಲ. ಏಷ್ಟೋ ಸಾರಿ ಸಂಬಂಧ  ಪಟ್ಟ ಅಧಿಕಾರಿಗಳಿಗೆ ಮನವರಿಕೆ ಮಾಡಿದರೂ ಮತ್ತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಡಿವಿಪಿ ಕಾರ್ಯಕತ್ರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ನಗರಕ್ಕೆ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಸರ್ಕಾರಿ ಗ್ರಂಥಾಲಯ ಮತ್ತು ಪುಸ್ತಕಗಳ ಅವಶ್ಯಕತೆ ಅವರಿಗಿದೆ. ಅವರಿಗೆ ಬೇಕಾದ ಪುಸ್ತಕಗಳನ್ನು ಒದಗಿಸಿ ಕೊಡಿ ಎಂದು ಹಲವು ಬಾರಿ ಕೇಳಿದರೂ, ಅಧಿಕಾರಿಗಳು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಸುತ್ತಿಲ್ಲ. ಈಗಿರುವ ಶಾಸ್ತ್ರಿ ಮಾರ್ಕೆಟ್ ಗ್ರಂಥಾಲಯದಲ್ಲಿ ಯಾವುದೇ ಮೂಲಭೂತ ವ್ಯವಸ್ಥೆ ಇಲ್ಲ. ಕೆಲವು ಸಾರ್ವಜನಿಕರು ಕುಡಿದು ಅಲ್ಲೇ ಮಲಗಿಕೊಳ್ಳುತ್ತಾರೆ. ಸರಿಯಾದ ಸಮಯಕ್ಕೆ ಸಿಬ್ಬಂದಿ ಕೆಲಸಕ್ಕೆ ಬರುವುದಿಲ್ಲ. ತಾವು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಗ್ರಂಥಾಲಯದ ಕಾಮಗಾರಿಯನ್ನ ಸಂಪೂರ್ಣವಾಗಿಸಿ, ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯವನ್ನು ಒದಗಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್, ಆನಂದ ಮುದುರ್, ಮಾದೇಶ್ ಛಲವಾದಿ, ದರ್ಶನ್ ಸಾಲೋಟಗಿ, ಪ್ರಭು ಹೊಸಮನಿ, ಅಸ್ಲಾಂ, ಮಂಜು, ರವಿ, ಶಕೀಲ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸೈನಿಕ ಶಾಲೆಯಲ್ಲಿ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ

ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್...

ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ

ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ...

ವಿಜಯಪುರ | ವಿಜಯಪುರ-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ ಎರಡು...