ವಿಜಯಪುರ | ನಕಲಿ ಮತದಾನ ಆರೋಪ; ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

Date:

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ದೂರು ನೀಡಿದ್ದಾರೆ.

ವಿಜಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿದ್ದಸಿರಿ ಸಂಸ್ಥೆಯ ಬ್ಯಾಂಕ್‌ ಮತ್ತು ಸಕ್ಕರೆ ಕಾರ್ಖಾನೆಗೆ ಯತ್ನಾಳ್ ಅಧ್ಯಕ್ಷರಾಗಿದ್ದಾರೆ. ಈ ಎರಡೂ ಸಂಸ್ಥೆಗಳ ಸಿಬ್ಬಂದಿ ಹೆಸರಿನಲ್ಲಿ ನಕಲಿ ಮತದಾನ ಮಾಡಿದ್ದಾರೆ ಎಂದು ಯತ್ನಾಳ್‌ ವಿರುದ್ಧ ಸ್ಪರ್ಧಿಸಿ ಸೋಲುಂಡ ಕಾಂಗ್ರೆಸ್‌ನ ಅಬ್ದುಲ್ ಹಮೀದ್ ಮುಶ್ರಫ್ ಆರೋಪಿಸಿದ್ದಾರೆ.

“ಯತ್ನಾಳ್‌ ಮಾಡಿರುವ ನಕಲಿ ಮತದಾನಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳೂ ಯತ್ನಾಳ್‌ ಜೊತೆ ಶಾಮೀಲಾಗಿರುವ ಶಂಕೆ ಇದೆ” ಎಂದು ಅವರು ಹೇಳಿದ್ದಾರೆ.

ಯತ್ನಾಳ್‌ಗೆ ನೋಟಿಸ್‌
ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರು. ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯತ್ನಾಳ್ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ...

ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ...

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...