- ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆ
- ಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ
ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.
ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಏ.17 ರಂದು ವಿಚಾರಣೆ ನಡೆಸಿತ್ತು.
ವಿನಯ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ ಹೆಚ್ ಹನುಮಂತರಾಯ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸಲಾಗಿದ್ದು, ಪ್ರಚಾರ ನಡೆಸಬೇಕಾಗಿರುವುದರಿಂದ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ” ಮನವಿ ಮಾಡಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್ ಪೀಠವು ಏ.18 ರಂದು ವಿನಯ್ ಕುಲಕರ್ಣಿ ಮನವಿ ತಿರಸ್ಕರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಧಾರವಾಡಕ್ಕೆ ವಿನಯ್ ಕುಲಕರ್ಣಿ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧ ಮಾಡಿದೆ. ಆದರೂ ಕೂಡ ಧಾರವಾಡದಿಂದ ಟಿಕೆಟ್ ಏಕೆ ಕೊಟ್ಟಿದೆ” ಎಂದು ವಿನಯ್ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿದರು.
“ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ 90 ಸಾಕ್ಷಿಗಳಿವೆ. ಒಂದು ವೇಳೆ ವಿನಯ್ ಕಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ” ಎಂದು ಅರ್ಜಿ ವಜಾ ಮಾಡಿದೆ.