ನೀತಿ ಸಂಹಿತೆ ಉಲ್ಲಂಘನೆಯಡಿ 265 ಕೋಟಿ ರೂಪಾಯಿ ಜಪ್ತಿ: ಮನೋಜ್ ಕುಮಾರ್ ಮೀನಾ

Date:

  • ಈ ಬಾರಿ ಚುನಾವಣೆಗಾಗಿ 58,545 ಮತ ಕೇಂದ್ರಗಳನ್ನ ಸ್ಥಾಪನೆ; ಮೀನಾ
  • ವೋಟ್ ಫ್ರಂ ಹೋಮ್ ಅವಕಾಶ ಪಡೆದ 80 ಸಾವಿರ ಮಂದಿ

ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ರಾಜ್ಯದಲ್ಲಿ ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 265 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.

ಇಂದು ಬೆಂಗಳೂರಿನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್, ನೀತಿಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಈವರೆಗೆ 265 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಗುಂಪು ಘರ್ಷಣೆ ಸಂಬಂಧ 15 ಎಫ್‌ಐಆರ್ ದಾಖಲಾಗಿದೆ. ದ್ವೇಷ ರಾಜಕಾರಣ ಸಂಬಂಧ 5 ಎಫ್‌ಐಆರ್ ಸೇರಿ 673 ಎಫ್‌ಐಆರ್ ದಾಖಲಾಗಿದೆ ಎಂದು ಮೀನಾ ಮಾಹಿತಿ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಾರಿ ಚುನಾವಣೆಯಲ್ಲಿ 224 ಕ್ಷೇತ್ರಗಳಿಂದ ಒಟ್ಟು 2615 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇದರಲ್ಲಿ 2429 ಪುರುಷ ಅಭ್ಯರ್ಥಿಗಳು 185 ಮಹಿಳಾ ಅಭ್ಯರ್ಥಿಗಳು ಹಾಗೂ ಇತರೆ ಓರ್ವ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ?: ರೌಡಿಶೀಟರ್‌ ಮಣಿಕಂಠ ಪರ ಮೋದಿ ಪ್ರಚಾರ; ಮೋದಿ-ಅಮಿತ್ ಶಾಗೆ…

ರಾಜ್ಯದಲ್ಲಿ ಒಟ್ಟು 5,30,85,566 ಮತದಾರರಿದ್ದು, ಈ ಪೈಕಿ 2,66,82,156 ಪುರುಷ ಮತದಾರರು, 2,63,98,483 ಮಹಿಳಾ ಮತದಾರರಿದ್ದಾರೆ.

ಇವರೆಲ್ಲರಿಗಾಗಿ ರಾಜ್ಯಾದ್ಯಂತ ಒಟ್ಟು 58,545 ಮತ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದರು.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ಸಾವಿರಕ್ಕೂ ಹೆಚ್ಚು ಮಂದಿ ವೋಟ್ ಫ್ರಂ ಹೋಮ್ ಅವಕಾಶ ಪಡೆದುಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ....

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....