ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ

Date:

  • ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗಿಲ್ಲ
  • ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು : ರಾಘವ್‌ ಚಡ್ಡಾ

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಷ್ಟೇ ಹಣ ನೀಡಿದರೂ ಕರ್ನಾಟಕದ ಜನತೆ ಈ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಮತ ಹಾಕಬೇಕು ಎಂದು ಪಕ್ಷದ ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ ಕರೆ ನೀಡಿದರು.

- Advertisement -

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಘವ್‌ ಚಡ್ಡಾ, “ಕರ್ನಾಟಕದಲ್ಲಿ ಚಿಕ್ಕಮಕ್ಕಳಿಂದ ಹಿರಿಯ ನಾಗರಿಕರ ತನಕ ಎಲ್ಲರಿಗೂ ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮವಾಗಿರುವುದು ಗಮನಕ್ಕೆ ಬರುತ್ತಿದೆ. ರಾಜ್ಯ ಅಭಿವೃದ್ಧಿಯಾಗಬೇಕು. ಇಲ್ಲಿನ ಜನರು ನೆಮ್ಮದಿಯಿಂದ ಬದುಕಬೇಕಾದರೆ ಈ 40% ಕಮಿಷನ್‌ ಸರ್ಕಾರ ಹೋಗಬೇಕು. ಇಲ್ಲಿ ೦% ಕಮಿಷನ್‌ ಪಡೆಯುವ ಹಾಗೂ 100% ಪ್ರಾಮಾಣಿಕವಾಗಿ ಕೆಲಸ ಮಾಡುವ ಆಮ್‌ ಆದ್ಮಿ ಪಾರ್ಟಿ ಸರ್ಕಾರ ರಚನೆಯಾಗಬೇಕು. ರಾಜ್ಯದ ಅಭಿವೃದ್ಧಿಗಾಗಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿಯಬೇಕು ಎಂದು ಬಿಜೆಪಿ ನಾಯಕರು ಪದೇಪದೆ ಹೇಳುತ್ತಿದ್ದಾರೆ. ಆದರೆ, ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗುವ ಬದಲು ಕಮಿಷನ್‌ ಪರ್ಸೆಂಟೇಜ್‌ ಡಬಲ್‌ ಆಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ಹಲವು ಜನಪರ ಹಾಗೂ ಅಭಿವೃದ್ಧಿಪರ ಗ್ಯಾರಂಟಿಗಳನ್ನು ನೀಡಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಕೇಂದ್ರಗಳ ನಿರ್ಮಾಣ, ಉದ್ಯೋಗ ಸೃಷ್ಟಿ, ಶುದ್ಧ ಹಾಗೂ ಉಚಿತ ಕುಡಿಯುವ ನೀರು, ದಿನವಿಡೀ ವಿದ್ಯುತ್‌ ಪೂರೈಕೆ ಹಾಗೂ 200 ಯೂನಿಟ್‌ ತನಕ ಉಚಿತ ವಿದ್ಯುತ್‌, ರೈತರಿಗೆ ಸಾಲಮನ್ನಾ ಬೆಂಬಲಬೆಲೆ ಸೇರಿದಂತೆ ಮುಂತಾದ ಅನೇಕ ಯೋಜನೆಗಳನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ಸೂಕ್ತ ರೀತಿಯಲ್ಲಿ ಜಾರಿಗೆ ತರಬಲ್ಲದು” ಎಂದು ರಾಘವ್‌ ಚಡ್ಡಾ ಹೇಳಿದರು.

“ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಜನರಿಗೆ ಹಣ ಹಾಗೂ ನಾನಾ ಆಮಿಷಗಳನ್ನು ಒಡ್ಡುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಜನರು ಅವುಗಳನ್ನು ತೆಗೆದುಕೊಳ್ಳಬಾರದು ಎಂದು ನಾನು ಹೇಳುವುದಿಲ್ಲ. ಏಕೆಂದರೆ, ಜನರ ತೆರಿಗೆಯನ್ನು ಲೂಟಿ ಮಾಡಿದ ಹಣದಿಂದಲೇ ಅವೆಲ್ಲವನ್ನು ನೀಡಲಾಗುತ್ತಿದೆ. ಆದರೆ, ಜನರು ಯಾರಿಂದ ಏನನ್ನೇ ತೆಗದುಕೊಂಡರೂ, ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು. ದೇಶದಲ್ಲಿ ಬಿಜೆಪಿ ಮಾತ್ರ ಇರಬೇಕು ಹಾಗೂ ವಿರೋಧಪಕ್ಷಗಳು ಇರಬಾರದೆಂದು ಬಿಜೆಪಿ ನಿರ್ಧರಿಸಿದೆ. ಆದ್ದರಿಂದಲೇ ಆಮ್‌ ಆದ್ಮಿ ಪಾರ್ಟಿ ನಾಯಕರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗುತ್ತಿದೆ. ದೆಹಲಿಯ ಶಿಕ್ಷಣ ಸಚಿವರಾಗಿದ್ದ ಮನೀಷ್‌ ಸಿಸೋದಿಯಾ ನಿವಾಸದಲ್ಲಿ ಕೇವಲ ₹10,000 ನಗದು ಸಿಕ್ಕಿದ್ದರೂ ಅವರನ್ನು ವಿಚಾರಣೆ ನೆಪದಲ್ಲಿ ಬಂಧಿಸಲಾಗಿದೆ” ಎಂದು ರಾಘವ್‌ ಚಡ್ಡಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ: ಬೆಸ್ಕಾಂನಿಂದ ದೂರು ದಾಖಲು

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಾಮೋದರನ್‌, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ವಕ್ತಾರರಾದ ಉಷಾ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...