ಬಿಜೆಪಿ ಲೂಟಿಯಿಂದ ಕರ್ನಾಟಕ ರಕ್ಷಿಸಲು ಕಾಂಗ್ರೆಸ್‌ಗೆ ಮತ ನೀಡಿ : ಸೋನಿಯಾ ಗಾಂಧಿ

Date:

Advertisements
  • ಜಗದೀಶ್ ಶೆಟ್ಟರ್ ಪರ ಮತ ಯಾಚಿಸಿದ ಸೋನಿಯಾ ಗಾಂಧಿ
  • ಜನರು ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುತ್ತಾರೆ

ಕರ್ನಾಟಕ ರಾಜ್ಯವನ್ನು ಬಿಜೆಪಿಯ ಲೂಟಿಯಿಂದ ರಕ್ಷಿಸಲು ಕಾಂಗ್ರೆಸ್ಗೆ ಮತ ನೀಡಿ ಎಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹೇಳಿದರು.

ಹುಬ್ಬಳಿಯಲ್ಲಿನ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಬದಲಾವಣೆಯಾಗುವ ದಿನ ಹತ್ತಿರದಲ್ಲಿದೆ. ಕಾಂಗ್ರೆಸ್ ಇಸಿಹಾಸದಲ್ಲಿ ಕರ್ನಾಟಕ ರಾಜ್ಯಕ್ಕೆ ವಿಶೇಷ ಸ್ಥಾನವಿದೆ. ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ.

ಇಂದಿರಾ ಗಾಂಧಿ ಅವರು ಕೇಂದ್ರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡಿದ್ದರು. ಆಗ ಚಿಕ್ಕಮಗಳೂರಿನ ಜನ ಅವರ ಬೆಂಬಲಕ್ಕೆ ನಿಂತಿದ್ದರು. 25 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಬಳ್ಳಾರಿಯ ಜನ ನನ್ನನ್ನು ಬೆಂಬಲಿಸಿದ್ದರು. ಈ ಕತ್ತಲ ಸಮಯದಲ್ಲಿ ನಾವು ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದರು.

Advertisements

ಸಮಾಜದಲ್ಲಿ ದ್ವೇಷ ಪಸರಿಸುತ್ತಿರುವವರ ವಿರುದ್ಧ ಹೋರಾಡಲು ಭಾರತ ಜೋಡೋ ಯಾತ್ರೆ ಮಾಡಲಾಯಿತು. ಬಿಜೆಪಿಯ ಈ ದ್ವೋಷ ರಾಜಕೀಯದಿಂದ ದೇಶವನ್ನು ಮುಕ್ತಿಗೊಳಿಸುವ ಹೊರತಾಗಿ ಕರ್ನಾಟಕ ಹಾಗೂ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.

ಇದೇ ಕಾರಣಕ್ಕೆ ಲಕ್ಷಾಂತರ ಜನ ರಾಹುಲ್ ಗಾಂಧಿ ಅವರ ಜತೆ 4 ಸಾವಿರ ಕಿ.ಮೀ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಯಾತ್ರೆಯಲ್ಲಿ ಬಿಜೆಪಿಗೆ ಎಷ್ಟು ಭಯವಾಗಿದೆ ಎಂದರೆ, ಅವರು ಎಲ್ಲ ರೀತಿಯ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇಂದು ಅಧಿಕಾರದಲ್ಲಿರುವವರು ಜನರ ರಕ್ಷಣೆ ಮಾಡುವ ಬದಲು ಹಣ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

2018ರಲ್ಲಿ ನೀವು ಬಿಜೆಪಿಗೆ ಅಧಿಕಾರ ನೀಡಲಿಲ್ಲ. ಆದರೂ ಇವರು ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದಿದ್ದರು. ನಂತರ ಅವರ 40% ಸರ್ಕಾರ ನಿಮ್ಮನ್ನು ಲೂಟಿ ಮಾಡಿದೆ. ಬಿಜೆಪಿ ನಾಯಕರು ಎಷ್ಟು ಅಹಂಕಾರದಲ್ಲಿದ್ದಾರೆ ಎಂದರೆ ಅವರು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ಯಾವುದೇ ಪತ್ರಕ್ಕೂ ಉತ್ತರ ನೀಡುತ್ತಿಲ್ಲ. ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಿಯಂತ್ರಿಸುತ್ತಿದ್ದಾರೆ.

ಯಾವುದೇ ಸರ್ಕಾರದಲ್ಲಿ ಇಂತಹ ದುರಾಡಳಿತವನ್ನು ನೀವು ಎಂದಾದರೂ ನೋಡಿದ್ದೀರಾ? ಪ್ರಜಾತಂತ್ರ ವ್ಯವಸ್ಥೆ ನಡೆಯುವುದು ಹೀಗೆಯೇ? ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಹಿರಂಗವಾಗಿ ಧಮಕಿ ಹಾಕುತ್ತಿದ್ದಾರೆ. ಬಿಜೆಪಿ ಸೋತರೆ ರಾಜ್ಯದಲ್ಲಿ ಗಲಭೆಯಾಗುತ್ತದೆ ಎಂದು ಹೇಳುತ್ತಾರೆ ಇಂತಹವರ ಸರ್ಕಾರ ನಮಗೆ ಬೇಕೆ ಎಂದು ಸೋನಿಯಾ ಪ್ರಶ್ನಿಸಿದರು.

ನಿಮ್ಮ ಪರವಾಗಿ ನಾನು ಅವರಿಗೆ ಒಂದು ಮಾತು ಹೇಳಬಯಸುತ್ತೇನೆ. ನೀವು ಕರ್ನಾಟಕ ರಾಜ್ಯದ ಜನರನ್ನು ಇಷ್ಟು ದಡ್ಡರೆಂದು ಭಾವಿಸಬೇಡಿ. ಕರ್ನಾಟಕದ ಜನ ತಮ್ಮ ಪರಿಶ್ರಮ ಹಾಗೂ ಸಂಕಲ್ಪದ ಮೇಲೆ ಭರವಸೆ ಇಟ್ಟಿದ್ದಾರೆ ಹೊರತು ಬೇರೆ ಯಾರ ಆಶೀರ್ವಾದದಿಂದಲೂ ಅಲ್ಲ. ಕರ್ನಾಟಕದ ಜನ ದುರಾಸೆ ಇರುವವರಲ್ಲ, ನಿಮ್ಮ ಬೆದರಿಕೆಗಳಿಗೆ ಹೆದರುವವರೂ ಅಲ್ಲ. ಕರ್ನಾಟಕದ ಜನ ಮೇ 10 ರಂದು ನಿಮಗೆ ಈ ಮಣ್ಣಿನ ಶಕ್ತಿ ಏನು ಎಂದು ತಿಳಿಸಲಿದ್ದಾರೆ ಎಂದು ಸೋನಿಯಾಗಾಂಧಿ ಗುಡುಗಿದರು.

ಇಂದು ಲಕ್ಷಾಂತರ ರೈತರು ಹಾಗೂ ಹಾಲು ಉತ್ಪಾದಕರನ್ನು ಕತ್ತಲೆಗೆ ದೂಡಲು ನಂದಿನಿಯಂತಹ ಅತ್ಯುತ್ತಮ ಸಂಸ್ಥೆಯನ್ನು ನಾಶ ಮಾಡಲು ಷಡ್ಯಂತ್ರ ರೂಪಿಸಿದ್ದಾರೆ. ಇದು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ. ಜನರ ಆಶೀರ್ವಾದದಿಂದ ನಾಯಕರಾಗುತ್ತಾರೆಯೇ ಹೊರತು, ಯಾವುದೇ ನಾಯಕರ ಆಶೀರ್ವಾದದಿಂದ ಈ ರಾಜ್ಯದ ಜನರ ಭವಿಷ್ಯ ನಿರ್ಧಾರವಾಗುವುದಿಲ್ಲ ಎಂದು ಈ ಸಮಯದಲ್ಲಿ ಬಿಜೆಪಿಯವರಿಗೆ ಹೇಳಬಯಸುತ್ತೇನೆ. ಜನರು ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುತ್ತಾರೆ.

ಭಗವಾನ್ ಬಸವಣ್ಣ ಅವರು ಈ ಭೂಮಿಯಿಂದ ಹುಟ್ಟಿದ್ದಾರೆ. ಅವರು ಯಾರ ಮಾತಿಗೂ ಅಂಜದೇ ಎಲ್ಲರನ್ನು ಸಮಾನತೆ ನೀಡುವ ಹೋರಾಟ ಮಾಡಿದ್ದರು. ಇದು ಕುವೆಂಪು ಅವರ ಭೂಮಿಯಾಗಿದ್ದು, ಬಿಜೆಪಿ ಇವರ ತತ್ವಗಳನ್ನು ಪ್ರತಿನಿತ್ಯ ಅಪಮಾನಿಸುತ್ತಲೇ ಬಂದಿದೆ.
ದೇಶದ ಇತಿಹಾಸ ಹಾಗೂ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯನ್ನು ನಾಶ ಮಾಡುವ ಪ್ರಯತ್ನ ಮಾಡಬೇಡಿ. ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಇಂತಹ ಸರ್ಕಾರವನ್ನು ತೊಲಗಿಸುವ ಶಪತವನ್ನು ನೀವೆಲ್ಲರೂ ಕೈಗೊಳ್ಳಬೇಕು.

ಈ ಸುದ್ದಿ ಓದಿದ್ದೀರಾ?:ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌…

ನೀವು ಸಂತರ ತತ್ವ ಸಿದ್ಧಾಂತದ ಮೇಲೆ ದಾಳಿ ಮಾಡುವವರ ಪರ ನಿಲ್ಲುತ್ತೀರೋ ಅಥವಾ ಎಲ್ಲಾ ವರ್ಗದವರ ಕಲ್ಯಾಣಕ್ಕಾಗಿ ಹೋರಾಟ ಮಾಡುವವರ ಪರವಾಗಿ ನಿಲ್ಲುತ್ತೀರೋ ಎಂಬುದನ್ನು ನೀವು ನಿರ್ಧರಿಸಬೇಕು. ಈ ರಾಜ್ಯವನ್ನು ಲೂಟಿ ಹಾಗೂ ಕಮಿಷನ್ ನಿಂದ ದೂರ ಮಾಡಬೇಕು. ಆಮೂಲಕ ರಾಜ್ಯವನ್ನು ವಿಕಾಸದತ್ತ ತೆಗೆದುಕೊಂಡು ಹೋಗಬೇಕು. ಸಾಮಾಜಿಕ ನ್ಯಾಯ, ಸದ್ಭಾವನೆಯ ಪರಂಪರೆ ರಕ್ಷಿಸಲು ನೀವು ಯಾರ ಪರವಾಗಿ ನಿಲ್ಲುತ್ತೀರಿ? ಎಂದು ಹುಬ್ಬಳ್ಳಿ ಜನರನ್ನು ಪ್ರಶ್ನಿಸಿದರು.

ಐದು ವರ್ಷಗಳ ಹಿಂದೆ ಇದ್ದ ಸರ್ಕಾರ ತನ್ನ ಮಾತಿಗೆ ಬದ್ಧವಾಗಿ ಕೊಟ್ಟ ಬಹುತೇಕ ಎಲ್ಲಾ ಭರವಸೆ ಈಡೇರಿಸಿದೆ. ಇಂದು ರಾಜಸ್ಥಾನ, ಛತ್ತೀಸಿ ಗಡ, ಹಿಮಾಚಲದಲ್ಲಿ ಕಾಂಗ್ರೆಸ್ ಸರ್ಕಾರ ತಮ್ಮ ಭರವಸೆಗಳನ್ನು ಈಡೇರಿಸಿಕೊಂಡು ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನಿಮ್ಮ ವಿಶ್ವಾಸವನ್ನು ಉಳಿಸಿಕೊಳ್ಳಲಿದೆ. ಗೃಹಲಕ್ಷ್ಮಿ, ಯುವವನಿಧಿ, ಅನ್ನಭಾಗ್ಯ, ಗೃಹಜ್ಯೋತಿ, ಉಚಿತ ಪಯಣ ಯೋಜನೆಗಳನ್ನು ಜಾರಿ ಮಾಡಲಿದೆ. ಹೀಗಾಗಿ ಲೂಟಿ ಸರ್ಕಾರದ ಬದಲು ಜನಪರ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X