ರಾಯಚೂರು ಎಪಿಎಂಸಿಯಲ್ಲಿ ತುಂಬಿದ ನೀರು; ಚುನಾವಣಾ ವಿಷಯವಾದ ರೈತರ ಸಂಕಷ್ಟ

Date:

Advertisements

ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ, ರೈತರು ನಷ್ಟ ಅನುಭಿವಿಸಿದ್ದಾರೆ. ವಿಧಾನಸಭಾ ಚುನಾವಣೆಗೆ 10 ದಿನಗಳಷ್ಟೇ ಉಳಿದಿದ್ದು, ರಾಯಚೂರು ಜಿಲ್ಲೆಯಲ್ಲಿ ಮಾರುಕಟ್ಟೆ ಸಮಸ್ಯೆ ಈಗ ರಾಜಕೀಯ ವಿಷಯಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಭತ್ತ, ಹತ್ತಿ, ಶೇಂಗಾ ಮತ್ತು ದ್ವಿದಳ ಧಾನ್ಯಗಳು ಪ್ರಮುಖ ಕೃಷಿ ಉತ್ಪನ್ನಗಳಾಗಿವೆ. ಕಳೆದ 10 ವರ್ಷಗಳಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ಜಿಲ್ಲೆಯ ರೈತರ ಸಮಸ್ಯೆಗಳನ್ನು ಪರಿಹರಿಸಲು ಏನೂ ಕೆಲಸ ಮಾಡಿವೆಂದು ರೈತರು ಆರೋಪಿಸುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ತಾವು ಅಧಿಕಾರಿಕ್ಕೆ ಬಂದರೆ ಭತ್ತ ಬೆಳೆಯುವ ರೈತರ ಸಮಸ್ಯೆಗಳನ್ನು ಪರಿಹರಿಸಿ, ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿವೆ.

Advertisements

:ಎಪಿಎಂಸಿ ಯಾರ್ಡ್‌ಗಳಲ್ಲಿ ಅಸಮರ್ಪಕ ಯೋಜನೆ ಮತ್ತು ಮೂಲಸೌಕರ್ಯದ ಕೊರತೆಗಳು ಸಮಸ್ಯೆಗೆ ಕಾರಣವಾಗಿವೆ. ಎಪಿಎಂಸಿಯಲ್ಲಿ ಸರಿಯಾದ ಶೆಡ್‌ಗಳಿಲ್ಲ. ಭತ್ತದ ಮೂಟೆಗಳು ಮಳೆನೀರಿನಲ್ಲಿ ಸಂಪೂರ್ಣವಾಗಿ ತೊಯ್ದು ಭತ್ತದ ಗುಣಮಟ್ಟವನ್ನು ಹಾಳಾಗುತ್ತಿವೆ. ಅಲ್ಲದೆ, ಕಳಪೆ ಭೂಗತ ಒಳಚರಂಡಿಗಳಿದ್ದು, ಮಳೆ ನೀರು ಸರಾಗವಾಗಿ ಹರಿದುಹೋಗದೇ, ಮಾರುಕಟ್ಟೆಯ ಅಂಗಳದಲ್ಲಿ ನಿಲ್ಲುತ್ತಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಅಸಮಾಧಾನ ವ್ಯಕ್ತಪಡಿಸಿವೆ.

“ಸರ್ಕಾರ 30 ಕೋಟಿ ಖರ್ಚು ಮಾಡಿ ಶೆಡ್‌ಗಳನ್ನು ನಿರ್ಮಿಸಿದರೂ, ರೈತರಿಗೆ ಏನೂ ಪ್ರಯೋಜನವಾಗಿಲ್ಲ. ಶುಕ್ರವಾರ ರಾಯಚೂರಿನಲ್ಲಿ ಸುರಿದ ಮಳೆಯಿಂದ ಒಂದೇ ದಿನದಲ್ಲಿ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ. ಸರ್ಕಾರವಾಗಲೀ, ಎಪಿಎಂಸಿಯಾಗಲೀ ನಮಗೆ ಪರಿಹಾರ ನೀಡುವುದಿಲ್ಲ. ಇದರಿಂದ ರೈತರು ನಷ್ಟ ಮತ್ತು ಸಂಕಷ್ಟ ಎದುರಿಸುತ್ತಿದ್ದಾರೆ” ಎಂದು ರೈತರ ಅಳಲನ್ನು ವಿವರಿಸಿದರು.

“ನಾವು ಈ ಸಮಸ್ಯೆಗಳ ಪರಿಹಾರಕ್ಕಾಗಿ ಅನೇಕ ಬಾರಿ ಪ್ರತಿಭಟನೆಗಳನ್ನು ನಡೆಸಿದ್ದೇವೆ. ಆದರೆ, ಏನೂ ಪ್ರಯೋಜನವಾಗಿಲ್ಲ. ಎಪಿಎಂಸಿ ಯಾರ್ಡ್‌ಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಮಹಿಳೆಯರು ಸೇರಿದಂತೆ ಕಾರ್ಮಿಕರು ಇಲ್ಲಿ ಹಗಲು ರಾತ್ರಿ ಕೆಲಸ ಮಾಡುತ್ತಾರೆ. ಅವರಿಗೆ ಒಂದೇ ಒಂದು ಶೌಚಾಲಯವಿಲ್ಲ. ರೈತರು ಮತ್ತು ದುಡಿಯುವವರನ್ನು ಸರ್ಕಾರ ಕೀಳಾಗಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿ ಪ್ರಕಾರ, ಎಪಿಎಂಸಿ ಮಾರುಕಟ್ಟೆಯ 95 ಎಕರೆ ಪ್ರದೇಶದಲ್ಲಿ ಸುಮಾರು 10,000 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಶುಕ್ರವಾರ, ಎಪಿಎಸಿಗೆ ಬಂದಿದ್ದ 55,000 ಕ್ವಿಂಟಾಲ್ ಭತ್ತದಲ್ಲಿ ಮಳೆ ಸುರಿದ ಪರಿಣಾಮ ಶೇ.10ರಷ್ಟು ಭತ್ತ ನೀರಿನಲ್ಲಿ ಕೊಚ್ಚಿ ಹೋಗಿವೆ. ನಾವು ವ್ಯಾಪಾರಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಸಮಸ್ಯೆಯನ್ನು ಬಗೆಹರಿಸುತ್ತೇವೆ,” ಎಂದು ರಾಯಚೂರು ಎಪಿಎಂಸಿ ಹೆಚ್ಚುವರಿ ಕಾರ್ಯದರ್ಶಿ ಬಿ ಕೃಷ್ಣ ಹೇಳಿದರು.

ಎಎಂಪಿಸಿ ಯಾರ್ಡ್‌ನಲ್ಲಿರುವ ಶೆಡ್‌ನಲ್ಲಿ ಸೋರಿಕೆಯಾಗಿರುವುದನ್ನು ಒಪ್ಪಿಕೊಂಡ ಅವರು, “ಶೆಡ್‌ನಲ್ಲಿ ಸೋರಿಕೆಯಾಗಿರುವುದರಿಂದ ಸಮಸ್ಯೆಗಳಾಗುತ್ತಿವೆ. ಅದನ್ನು ಸರಿಪಡಿಸಲು ಸರ್ಕಾರ 1.5 ಕೋಟಿ ರೂಪಾಯಿ ಮಂಜೂರು ಮಾಡಿದೆ” ಎಂದು ಅವರು ಹೇಳಿದರು.

ಚುನಾವಣಾ ಸಮಯದಲ್ಲಿ ಎದುರಾಗಿರುವ ಎಪಿಎಂಸಿಯ ಸಮಸ್ಯೆಯು ಸರ್ಕಾರದ ನಿಷ್ಕ್ರಿಯತೆಯ ಪ್ರತಿರೂಪವೆಂದು ವಿರೋಧ ಪಕ್ಷಗಳು ಆರೋಪಿಸಿವೆ. ತಾವು ಅಧಿಕಾರಕ್ಕೆ ಬಂದರೆ, ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳುತ್ತಿವೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

“ಬಿಜೆಪಿ ಸರ್ಕಾರವು ಕಮಿಷನ್‌ ಪಡೆಯುವತಲ್ಲಿ ನಿರತವಾಗಿದ್ದು, ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಸರ್ಕಾರವು ರೈತರನ್ನೂ ಖರೀದಿಸಬಹುದೆಂದು ಭಾವಿಸಿದೆ. ರೈತರನ್ನು ನಿರ್ಲಕ್ಷಿಸಿರುವ ಸರ್ಕಾರವನ್ನು ಸೋಲಿಸಬೇಕು. ನಾವು ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳನ್ನು ಸರಿಪಡಿಸುತ್ತೇವೆ” ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಕಿಡಿಕಾರಿದ್ದಾರೆ.

“ಎಪಿಎಂಸಿ ಯಾರ್ಡ್‌ಗಳಲ್ಲಿ ಮೂಲಸೌಕರ್ಯಗಳ ಕೊರತೆಯೇ ಸಮಸ್ಯೆಗೆ ಮುಖ್ಯ ಕಾರಣ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಳೆನೀರಿನ ಸಮಸ್ಯೆಯನ್ನು ಬಗೆಹರಿಸುವುದು ಮಾತ್ರವಲ್ಲದೆ, ಅಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ತಂಗುದಾಣವನ್ನೂ ಒದಗಿಸುತ್ತೇವೆ” ಎಂದು ರಾಯಚೂರು ನಗರಸಭೆ ಅಧ್ಯಕ್ಷರಾಗಿದ್ದ ಜೆಡಿಎಸ್‌ ಅಭ್ಯರ್ಥಿ ವಿನಯ್‌ಕುಮಾರ್‌ ಭರವಸೆ ನೀಡಿದ್ದಾರೆ.

“ರೈತರು ಸಮಸ್ಯೆ ಎದುರಿಸುವಾಗ ಯಾವಾಗಲೂ ರೈತರ ಪರವಾಗಿ ನಿಂತಿದ್ದೇನೆ. ನಾನು ಶಾಸಕನಾದ ನಂತರ ಸರ್ಕಾರದಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ರೈತರೊಂದಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದೇನೆ. ನನ್ನ ಪ್ರಯತ್ನದಿಂದ ರಾಯಚೂರು ತಾಲೂಕಿನ ಜನರು ಹಾಗೂ ರೈತರು ಸಂತಸಗೊಂಡಿದ್ದಾರೆ” ಎಂದು ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಡಾ. ಎಸ್ ಶಿವರಾಜ್ ಪಾಟೀಲ್ ಹೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X