ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಕಾಲೆಳೆದ ನೆಟ್ಟಿಗರು

Date:

Advertisements
  • 2023ರ ವಿಧಾನಸಭೆ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಜೆಡಿಎಸ್‌
  • ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ: ಎಚ್‌ಡಿಕೆ

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶವೂ ಹೊರಬಿದ್ದಿದೆ. ಬಹುಮತ ಸಾಧಿಸಿರುವ ಕಾಂಗ್ರೆಸ್‌ ಸರ್ಕಾರ ರಚಿಸಲಿದ್ದು, 5 ವರ್ಷಗಳ ಕಾಲ ಕರ್ನಾಟಕದಲ್ಲಿ ಆಡಳಿತ ನಡೆಸಲಿದೆ. ಕಾಂಗ್ರೆಸ್‌ ಸಂಭ್ರಮದ ನಡುವೆ ನೆಟ್ಟಿಗರು ಇತರ ಪಕ್ಷಗಳ ಕಾಲೆಳೆಯುತ್ತಿದ್ದಾರೆ ಮತ್ತು ಛೇಡಿಸುತ್ತಿದ್ದಾರೆ. ಸದ್ಯ, ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರೂ ನೆಟ್ಟಿಗರ ಟ್ರೋಲ್‌ಗೆ ಆಹಾರವಾಗಿದ್ದಾರೆ.

ಚುನಾವಣೆಗೆ ಸಿದ್ದತೆ ಮತ್ತು ಪ್ರಚಾರದ ವೇಳೆ ರಾಜಕೀಯ ಪಕ್ಷದ ನಾಯಕರು ಹೇಳಿಕೆಗಳು, ಗ್ಯಾರೆಂಟಿಗಳು, ಭರವಸೆಗಳ ಮೂಲಕ ಜನರನ್ನು ಸೆಳೆಯಲು ಪೈಪೋಟಿ ನಡೆಸಿದ್ದವು. ಈ ವೇಳೆ, ಹಲವು ನಾಯಕರು ಪ್ರಚಾರದ ಭರದಲ್ಲಿ ಮೀತಿ ಮೀರಿ ಮಾತಾಡಿದ್ದು ಉಂಟು.

ಅಂತೆಯೇ, ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಪ್ರಚಾರದ ವೇಳೆ, “ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದು ಮಹತ್ವದ ಹೇಳಿಕೆ ನೀಡಿದ್ದರು.

Advertisements

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಭರದಿಂದ ಸಿದ್ಧತೆ ನಡೆಸಿತ್ತು. ಚುನಾವಣೆ ದಿನಾಂಕದ ಘೋಷಣೆಗೂ ಮುನ್ನವೇ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ರಾಜ್ಯದಾದ್ಯಂತ ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥ ಯಾತ್ರೆಯೂ ನಡೆದಿತ್ತು. ಇಷ್ಟೆಲ್ಲಾ ಕಸರತ್ತುಗಳ ನಡುವೆಯೂ ಜೆಡಿಎಸ್‌ 19 ಸ್ಥಾನಕ್ಕೆ ತೃಪ್ತಿ ಪಡುವಂತಹ ಸ್ಥಿತಿ ಎದುರಾಗಿದೆ.

2013ರಲ್ಲಿ 40ಸ್ಥಾನಗಳಲ್ಲಿ ಗೆದ್ದಿದ್ದ ಜೆಡಿಎಸ್‌, 2018ರಲ್ಲಿ 37 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವ ಉಳಿಸಿಕೊಂಡಿತ್ತು. ಇದೀಗ, 19 ಸ್ಥಾನಗಳಿಗೆ ಕುಸಿದಿದೆ.

ಈ ನಡುವೆ, ಮೇ 10ರಂದು ಮತದಾನ ನಡೆದ ಬಳಿಕ ಮಾತನಾಡಿದ್ದ ಕುಮಾರಸ್ವಾಮಿ, “ಅತಂತ್ರ ವಿಧಾನಸಭೆ ನಿರ್ಮಾಣವಾದಲ್ಲಿ, ತಮ್ಮ ಷರತ್ತುಗಳಿಗೆ ಒಪ್ಪುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು, ಸರ್ಕಾರ ರಚಿಸುತ್ತೇವೆ” ಎಂದೂ ಹೇಳಿದ್ದರು.

ಇದೀಗ, ಫಲಿತಾಂಶವೂ ಪ್ರಕರವಾಗಿದೆ. ಈಗ ಮತ್ತೆ ಟ್ವೀಟ್‌ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, “ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಅವರ ಚುನಾವಣಾ ಪ್ರಚಾರದ ಹೇಳಿಕೆ, ಮತದಾನದ ನಂತರದ ಹೇಳಿಕೆ ಮತ್ತು ಫಲಿತಾಂಶ ನಂತರದ ಹೇಳಿಕೆಗಳು ವಿಭಿನ್ನವಾಗಿವೆ. ಪಕ್ಷವನ್ನೇ ವಿಸರ್ಜಿಸುವ ಮಾತನಾಡಿದ್ದವರು, ಈಗ ಮತ್ತೆ ಪಕ್ಷ ಕಟ್ಟುವ ಮಾತನಾಡಿದ್ದಾರೆ. ಇದು ನೆಟ್ಟಿಗರ ಟ್ರೋಲ್‌ಗೆ ಗುರಿಯಾಗಿದೆ. ಟ್ವೀಟರ್‌ನಲ್ಲಿ ಹಲವರು ಮಾಜಿ ಮುಖ್ಯಮಂತ್ರಿಯನ್ನು ಛೇಡಿಸಿ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

“ಗೆದ್ದಾಗ ದುಡ್ಡು ಮಾಡಿದ್ದೀರಿ. ಈ ಸಾರಿ ಪಕ್ಷ ವಿಸರ್ಜನೆ ಮಾಡುವುದು ಬಾಕಿ ಇದೆ. ಯಾವಾಗ ನೀವು ವಿಸರ್ಜನೆ ಮಾಡತೀರಿ” ಎಂದು ಬಿ.ವಿ ಕುಲಕರ್ಣಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

“ಆದರೆ ನೀವು ಬಹುಮತ ಬಾರದೆ ಇದ್ರೆ ಪಕ್ಷ ವಿಸರ್ಜನೆ ಮಾಡ್ತೀನಿ ಅಂತ ಹೇಳಿದ್ರೆ ಕುಮಾರಣ್ಣ! ನಿಮ್ಮ ಮಾತಿಗೆ ನೀವು ಬದ್ದರಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X