ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

Date:

  • ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್
  • 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ ಬಿಜೆಪಿಗೆ ಕೈ ಕೊಡುತ್ತಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಮಾಜಿ ಸಚಿವ ಎ ಬಿ ಮಾಲಕರೆಡ್ಡಿ ಅವರು ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ. ಬೆನ್ನಲ್ಲೇ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಹುರಿಯಾಳು ಆಗಿ ಕಣಕ್ಕಿಳಿದಿದ್ದಾರೆ.

ಮಾಲಕರೆಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್‌ ಸೇರಿದ್ದಾರೆ.

ಕೆಲ ದಿನಗಳ ಹಿಂದೆ ಎ ಬಿ ಮಾಲಕರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಟಿಕೆಟ್‌ನ ಬೇಡಿಕೆ ಮುಂದಿಟ್ಟಿದ್ದರು. ಆದರೆ, ಯಾದಗಿರಿಯಿಂದ ಚನ್ನಾರಡ್ಡಿ ಪಾಟೀಲ್ ತುನ್ನೂರು ಅವರ ಹೆಸರನ್ನು ಫೈನಲ್ ಮಾಡಲಾಗಿದೆ.

ಮಾಲಕರೆಡ್ಡಿ ಅವರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಟಿಕೆಟ್ ನಿರಾಕರಿಸಿವೆ. ಹಾಗಾಗಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಮಾಲಕರೆಡ್ಡಿ ಕಾಂಗ್ರೆಸ್ ಸೇರದೆ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್​ನಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲಕರೆಡ್ಡಿ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಂಡಾಯ ಸಾರಿ, ಖರ್ಗೆ ಸೋಲಿಸಲು ಪಣ ತೊಟ್ಟು ಬಿಜೆಪಿ ಸೇರಿದ್ದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಯಾದಗಿರಿ ಜಿಲ್ಲಾ ಉಸ್ತುವರಿಯನ್ನಾಗಿ ನೇಮಿಸಿದ ನಂತರ ಮಾಲಕರೆಡ್ಡಿ ಅವರು ಖರ್ಗೆ ಕುಟುಂಬದೊಂದಿಗಿನ ದ್ವೇಷ ಇನ್ನಷ್ಟು ಹೆಚ್ಚಾಗಿತ್ತು.

ಈ ಸುದ್ದಿ ಓದಿದ್ದೀರಾ? ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೋಲಿಸುವಲ್ಲಿ ಪಾತ್ರ ವಹಿಸಿದ ಪ್ರಮುಖರಲ್ಲಿ ಮಾಲಕರೆಡ್ಡಿ ಸಹ ಒಬ್ಬರಾಗಿದ್ದರು.

ಕಾಂಗ್ರೆಸ್ ಜೊತೆಗಿನ ಸುದೀರ್ಘ ಸಂಬಂಧವನ್ನು ಕಳಚಿಕೊಂಡಿದ್ದ ಮಾಲಕರೆಡ್ಡಿ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮರಳಿ ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆದರೆ ಅವರ ಪ್ರಯತ್ನ ವಿಫಲವಾಗಿದೆ.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ

87 ವರ್ಷದ ಎ ಬಿ ಮಾಲಕರೆಡ್ಡಿ ಅವರು 2018ರಲ್ಲಿ, “ವಯಸ್ಸಿನ ಕಾರಣದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ಘೋಷಣೆ ಮಾಡಿದ್ದರು.

“ಮತದಾರರು, ಅಭಿಮಾನಿಗಳು ಒತ್ತಾಯ ಮಾಡಿದರು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ” ಎಂದಿದ್ದರು.

ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಎ ಬಿ ಮಾಲಕರೆಡ್ಡಿ ಮೂರು ಪಕ್ಷಗಳ ಟಿಕೆಟ್‌ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದರು. ಸಿಗದಿದ್ದಾಗ ಮಗಳಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು. ಕೊನೆಗೂ ಜೆಡಿಎಸ್‌ನ ಟಿಕೆಟ್ ಪಡೆದುಕೊಂಡಿದ್ದಾರೆ.

4 ಕ್ಷೇತ್ರಗಳ ಪೈಕಿ ಮೂವರು ಪಕ್ಷಾಂತರ ಅಭ್ಯರ್ಥಿಗಳು

ಯಾದಗಿರಿ ಜಿಲ್ಲಾ ರಾಜಕಾರಣ ಈ ಬಾರಿ ಪಕ್ಷಾಂತರ ಪರ್ವಕ್ಕೆ ಸಾಕ್ಷಿಯಾಗಿದೆ. ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರಿಗೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ‘ಕೈ’ ಟಿಕೆಟ್ ನೀಡಲಾಗಿತ್ತು.

ಬೆನ್ನಲ್ಲೇ ಶಹಾಪುರ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ತೊರೆದ ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಅವರು ಜೆಡಿಎಸ್ ಟಿಕೆಟ್ ಪಡೆದುಕೊಂಡಿದ್ದರು. ಅವರ ಜೊತೆಗೆ ಮಾಲಕರೆಡ್ಡಿ ಕೂಡ ಕಮಲ ಬಿಟ್ಟು ತೆನೆ ಹೊತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂವರು ಪಕ್ಷಾಂತರಿ ಅಭ್ಯರ್ಥಿಗಳಿಗೆ ಟಿಕೆಟ್ ದೊರೆತಿದೆ. ಈ ಮೂವರು ಬಿಜೆಪಿ ತೊರೆದವರು ಎನ್ನುವುದು ಗಮನಾರ್ಹ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...

ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

'ಬಿ ಎ ಮೊಯ್ದೀನ್ ಅಪ್ಪಟ ಜಾತ್ಯತೀತ ಮೌಲ್ಯಗಳುಳ್ಳ ಆದರ್ಶ ವ್ಯಕ್ತಿತ್ವ ಹೊಂದಿದ್ದರು' 'ಸಂವಿಧಾನದ...