ಯಾದಗಿರಿ | ವಿವಿಧ ಬೇಡಿಕೆ ಈಡೇರಿಕೆಗೆ ಹಾಸ್ಟೆಲ್‌ ಹೊರಗುತ್ತಿಗೆ ಕಾರ್ಮಿಕರು ಆಗ್ರಹ

Date:

Advertisements

ಹೊರಗುತ್ತಿಗೆ ಆಧಾರದ ಮೇಲೆ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಜೂನ್ ತಿಂಗಳಿಂದ ಬಾಕಿ ಇರುವ ಮಾಸಿಕ ವೇತನ ಸೇರಿದಂತೆ ಹಲವು ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕೆಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಈ ಸಂಬಂಧ ಯಾದಗಿರಿ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನಾ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿ.ಪಂ.ಸಹ ಕಾರ್ಯದರ್ಶಿ ಅವರಿಗೆ ಸಲ್ಲಿಸಿದರು.

“ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಯಾದಗಿರಿ ಮತ್ತು ಗುರುಮಠಕಲ್ ತಾಲೂಕಿನ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ಹಾಗು ವಿದ್ಯಾರ್ಥಿನೀಯರ ವಸತಿನಿಲಯ/ಆಶ್ರಮ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಅಡುಗೆ ಸಹಾಯಕ, ಕಾವಲುಗಾರ ಮತ್ತು ಸ್ವಚ್ಛತೆ ಸಿಬ್ಬಂದಿಗಳಿಗೆ ಜೂನ್ ತಿಂಗಳಿಂದ ಬಾಕಿ ಇರುವ ಮಾಸಿಕ ವೇತನ ಪಾವತಿ ಮಾಡಬೇಕು ಹಾಗು ವೇತನ ಪಾವತಿ ಚೀಟಿ ನೀಡಬೇಕು ಮತ್ತು ಇಪಿಎಫ್-ಇಎಸ್‌ಐ ಸೌಲಭ್ಯ ಸೇರಿದಂತೆ ಹಲವು ಶಾಸನಬದ್ಧ ಸೌಲಭ್ಯ ಒದಗಿಸಿಲ್ಲ” ಎಂದು ದೂರಿದರು.

Advertisements

“ಪ್ರತಿ ತಿಂಗಳು 5ನೇ ತಾರಿಖಿನ ಒಳಗಾಗಿ ವೇತನ ಪಾವತಿ ಮಾಡುವ ನಿಯಮವನ್ನು ಗಾಳಿಗೆ ತೂರಿ ಮನ ಬಂದಂತೆ 5 – 6 ತಿಂಗಳಿಗೊಮ್ಮೆ ವೇತನ ಪಾವತಿ ಮಾಡುವ ಮೂಲಕ ಕಾರ್ಮಿಕರನ್ನು ಸಾಲದ ಬಾಧೆಗೆ ಸರ್ಕಾರವೇ ನೇರವಾಗಿ ತಳ್ಳುತ್ತಿದೆ. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಮಾಸಿಕ ಕನಿಷ್ಠ ವೇತನ ಪಾವತಿ ಮಾಡದೆ ಕನಿಷ್ಠ ವೇತನ ಸೌಲಭ್ಯದಿಂದ ಕಾರ್ಮಿಕರನ್ನು ವಂಚಿಸಲಾಗುತ್ತಿದೆ. ಇಪಿಎಫ್, ಇಎಸ್‌ಐ ಕಟಾವು ಮಾಡಿದ ಮೊತ್ತವನ್ನು ಕಾರ್ಮಿಕರ ಇಪಿಎ, ಫ್ಇಎಸ್‌ಐ ಖಾತೆಗಳಿಗೆ ಜಮಾ ಮಾಡುತ್ತಿಲ್ಲ. ಇಲ್ಲಿಯವರೆಗೂ ಯಾವೊಬ್ಬ ಕಾರ್ಮಿಕರಿಗೆ ಇಎಸ್‌ಐ ಕಾರ್ಡ್ ವಿತರಿಸಿಲ್ಲ.
ಇದರಿಂದಾಗಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಮಿಕರು ದುಬಾರಿ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ಖರ್ಚು ಮಾಡುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಾಕಿ ವೇತನ ಪಾವತಿ, ಇಪಿಎಫ್ – ಇಎಸ್‌ಐ, ವೇತನ ಚೀಟಿ, 8 ಗಂಟೆ ದುಡಿಮೆ ಸೇರಿದಂತೆ ಹಾಸ್ಟೇಲ್ ಕಾರ್ಮಿಕರ ಹಲವು ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಕೈಗೊಂಡು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಜುಲೈ 20 ರಂದು ಮನವಿ ಸಲ್ಲಿಸಲಾಗಿತ್ತು.ಮನವಿ ಸ್ವೀಕರಿಸಿ ತಕ್ಷಣವೇ ಸಂಘದ
ಪದಾಧಿಕಾರಿಗಳೊಂದಿಗೆ ಬೇಡಿಕೆಗಳ ಕುರಿತು ಸಭೆ ಮಾಡುವ ಭರವಸೆ ನೀಡಿದರು. ಆದರೆ 3 ತಿಂಗಳು ಸಮೀಪಿಸಿದರೂ ಇವರೆಗೂ ಯಾವದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಹಾಸ್ಟೇಲ್ ಕಾರ್ಮಿಕರ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಘವು ಅನಿರ್ಧೀಷ್ಟ ಮುಷ್ಕರ ಹೂಡುವುದುಅನಿರ್ವಾವಾಗುತ್ತದೆ” ಎಂದು ಎಚ್ಚರಿಸಿದರು.

“ವೇತನ ಪಾವತಿ ಮಾಡುವವರೆಗೂ ಕಾರ್ಮಿಕರು ಸ್ಥಳಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿಯಲಾಯಿತು. ಇಲಾಖೆಯ ಉಪ ನಿರ್ದೇಶಕರು ಹಾಗು ಯಾದಗಿರಿ ಸಹಾಯಕ ನಿರ್ದೇಶಕರು ಸ್ಥಳಕ್ಕೆ ಧಾವಿಸಿ 88 ಹೈಸ್ಕೂಲ್ ಕಾರ್ಮಿಕರಿಗೆ ಮೂರು ತಿಂಗಳು ಮತ್ತು 27 ಕಾಲೇಜ್ ಹಾಸ್ಟೆಲ್ ಕಾರ್ಮಿಕರಿಗೆ ಎರಡು ತಿಂಗಳ ವೇತನ ವೇತನ ಪಾವತಿ ಮಾಡಲು ಬ್ಯಾಂಕ್ ಗೆ ಕಳುಹಿಸಲಾಗಿದೆ ಎಂದು ದಾಖಲೆ ತೋರಿಸಿ ಮತ್ತು ಉಳಿದ ವೇತನವನ್ನು ಎರಡು ದಿನಗಳಲ್ಲಿ ಪಾವತಿ ಮಾಡುವ ಭರವಸೆ ನೀಡಿದ್ದರಿಂದ ಸಂಜೆಗೆ ಪ್ರತಿಭಟನೆ ಹಿಂಪಡೆದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ’ಹಿಂದುತ್ವ’ದ ಹೆಸರಲ್ಲಿ ಹಗರಣ, ಎಚ್ಚೆತ್ತುಕೊಳ್ಳಲಿ ಸರ್ಕಾರ

ಈ ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಡಿ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಉಪಾಧ್ಯಕ್ಷ ತಾಜುದ್ದೀನ್ ಚೌಕಿ, ಸಹ ಕಾರ್ಯದರ್ಶಿ ಶ್ರೀಕಾಂತ ಚಿಕ್ಕಮೇಟಿ, ಗಜಾನಂದ, ಮಾಪಣ್ಣ, ಶ್ಯಾಮಪ್ಪ, ಭಾಗಪ್ಪ, ಮಲ್ಲಣ್ಣ, ಅಂಜಲಪ್ಪ, ನಾಗಮ್ಮ, ಶಿವಮ್ಮ, ಶರಣಮ್ಮ, ನಿರ್ಮಲಾ,
ಅಬೇದಾಬೇಗಂ, ನರಸಮ್ಮ ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X