ವೈಎಸ್‌ವಿ ದತ್ತಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಅಭಿಮಾನಿಗಳಿಗೆ ಪತ್ರದ ಮೂಲಕ ಸಭೆಗೆ ಆಹ್ವಾನ

Date:

  • ಏಪ್ರಿಲ್‌ 9ಕ್ಕೆ ಅಭಿಮಾನಿಗಳ ಸಭೆ ಕರೆದ ದತ್ತ
  • ಕಡೂರಿನಲ್ಲಿ ಆನಂದ್‌ಗೆ ಮಣೆ ಹಾಕಿದ ಕಾಂಗ್ರೆಸ್

ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಹಿರಿಯ ನಾಯಕ ವೈಎಸ್‌ವಿ ದತ್ತ ಅವರು ತಮ್ಮ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಸಭೆಗೆ ಆಹ್ವಾನಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಪಕ್ಷಕ್ಕೆ ಬಂಡಾಯದ ಬಿಸಿ ತಗುಲಿದೆ. ಕಾಂಗ್ರೆಸ್ ಟಿಕೆಟ್ ಸಿಗಬಹುದು ಎನ್ನುವ ಭಾರೀ ನಿರೀಕ್ಷೆಯೊಂದಿಗೆ ದತ್ತ ಅವರು ಜೆಡಿಎಸ್‌ ತೊರೆದು ಕೈ ಹಿಡಿದಿದ್ದರು. ಆದರೆ, ಕಾಂಗ್ರೆಸ್ ಕಡೂರಿನಿಂದ ಆನಂದ್ ಅವರಿಗೆ ಟಿಕೆಟ್ ಘೊಷಿಸಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ದತ್ತಾ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.

ದತ್ತ ಅವರು ತಮ್ಮ ಅಭಿಮಾನಿಗಳೊಂದಿಗೆ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ. ಬಹುತೇಕ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂಬ ಸುದ್ದಿಯೂ ಇದೆ.

ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ದತ್ತ, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ದತ್ತಣ್ಣ, ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, ನಿಮ್ಮ ಜೊತೆಗೆ ನಾನಿರಬೇಕು. ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯ” ಎಂದು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೌಡಿ ಶೀಟರ್‌ ಫಯಾಜ್‌ ಜೊತೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗುಪ್ತ ಸಭೆ

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅಪಮಾನ. ಆದ್ದರಿಂದ ಮುಂದಿನ ನಿರ್ಧಾರ ಕೈಗೊಳ್ಳಲು ಕಡೂರು ಪಟ್ಟಣದಲ್ಲಿ ಏಪ್ರಿಲ್ 9ರಂದು ಬೆಳಗ್ಗೆ 11 ಗಂಟೆಗೆ ಅಭಿಮಾನಿಗಳ ಸಭೆಗೆ ಬನ್ನಿ. ನೀವು ಬಂದು ನನಗೆ ಹಾರೈಸಬೇಕು” ಎಂದು ಆಹ್ವಾನಿಸಿದ್ದಾರೆ.

ಇತರೆ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರಿದ್ದ ಎನ್ ವೈ ಗೋಪಾಲಕೃಷ್ಣ, ದೇವರಾಜ್, ಗುಬ್ಬಿ ಶ್ರೀನಿವಾಸ್, ಪುಟ್ಟಣ್ಣ, ಎಚ್ ನಾಗೇಶ್, ವೀರೇಂದ್ರ ಪಪ್ಪಿ, ಬಾಬುರಾವ್ ಚಿಂಚನಸೂರು, ಕಾಂತರಾಜು, ಎಂ ಸಿ ಸುಧಾಕರ್, ಕಿರಣ್ ಕುಮಾರ್‌ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ವೈಎಸ್‌ವಿ ದತ್ತ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ.

ಇದ್ದ ಪಕ್ಷವನ್ನೂ ಬಿಟ್ಟು ಕಾಂಗ್ರೆಸ್ ಸೇರಿರುವ ವೈಎಸ್‌ವಿ ದತ್ತ ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ವೈಎಸ್‌ವಿ ಅವರು ಬರೆದ ಪತ್ರ ಇಲ್ಲಿದೆ..

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...