ನಿರುದ್ಯೋಗ | ಅಟೆಂಡರ್ ಕೆಲಸಕ್ಕೆ ಲಕ್ಷಾಂತರ ಪದವೀಧರರಿಂದ ಅರ್ಜಿ; ವರ್ಕಿಂಗ್ ಇಂಡಿಯಾ ವರದಿ ಹೇಳಿದ್ದೇನು?

Date:

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರ ಸಂಖ್ಯೆ ಹೆಚ್ಚುತ್ತಿದ್ದರೂ, ಅದಕ್ಕೆ ತಕ್ಕ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್, ಎಂ.ಬಿ.ಎ, ಪಿಎಚ್‌ಡಿ ಪದವಿ ಪಡೆದವರು ಕಸಗುಡಿಸುವ (ಪೌರಕಾರ್ಮಿಕ) ಮತ್ತು ಅಟೆಂಡರ್ ಹುದ್ದೆಗಳಿಗೆ ಮುಗಿಬೀಳುತ್ತಿರುವುದು ದೇಶದ ಆರ್ಥಿಕತೆ ಹಾಗೂ ಉದ್ಯೋಗ ಮಾರುಕಟ್ಟೆಯ ಗಂಭೀರ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ.

- Advertisement -

ಇತ್ತೀಚೆಗೆ, ಸುಪ್ರೀಂಕೋರ್ಟ್ ಪ್ರಮುಖ ತೀರ್ಪೊಂದನ್ನು ನೀಡಿದೆ. “ಕಡಿಮೆ ಶೈಕ್ಷಣಿಕ ಅರ್ಹತೆ (ಉದಾಹರಣೆಗೆ 10ನೇ ತರಗತಿ) ನಿಗದಿಪಡಿಸಿರುವ ಸರ್ಕಾರಿ ಅಥವಾ ಬ್ಯಾಂಕ್ ಉದ್ಯೋಗಗಳನ್ನು ಪಡೆಯಲು, ಅಭ್ಯರ್ಥಿಗಳು ತಮ್ಮ ಉನ್ನತ ಶೈಕ್ಷಣಿಕ ಅರ್ಹತೆಯನ್ನು (ಪದವಿ) ಮರೆಮಾಚಿ ಅರ್ಜಿ ಸಲ್ಲಿಸುವಂತಿಲ್ಲ. ಪದವಿ ಮರೆ ಮಾಚುವುದರಿಂದ ಕಡಿಮೆ ಓದಿದ, ನಿಜವಾದ ಅರ್ಹ ಅಭ್ಯರ್ಥಿಗಳಿಗೆ ಸಿಗಬೇಕಾದ ನ್ಯಾಯಯುತ ಉದ್ಯೋಗದ ಅವಕಾಶ ಕೈತಪ್ಪುತ್ತದೆ” ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ನೇಮಕಾತಿ ನಿಯಮಗಳ ಪ್ರಕಾರ ಈ ತೀರ್ಪು ಸರಿಯಾಗಿದ್ದರೂ, ಇದು ದೇಶದ ಮುಂದಿಟ್ಟಿರುವ ಸಾಮಾಜಿಕ ಪ್ರಶ್ನೆ ಮಾತ್ರ ಅತ್ಯಂತ ಆತಂಕಕಾರಿ. ಯಾಕೆಂದರೆ, ʼಸ್ಟೇಟ್ ಆಫ್ ವರ್ಕಿಂಗ್ ಇಂಡಿಯಾʼ ವರದಿ ಹೇಳುವಂತೆ; ಭಾರತದಲ್ಲಿ 20 ರಿಂದ 29 ವರ್ಷದೊಳಗಿನ ನಿರುದ್ಯೋಗಿ ಯುವಜನರಲ್ಲಿ ಸುಮಾರು 67%ರಷ್ಟು ಮಂದಿ ಪದವೀಧರರಾಗಿದ್ದಾರೆ. ಅಟೆಂಡರ್, ಪೌರಕಾರ್ಮಿಕ ಅಥವಾ ಗ್ರೂಪ್-ಡಿ ಹುದ್ದೆಗಳಿಗೆ 5ರಿಂದ 10 ಲಕ್ಷಕ್ಕೂ ಹೆಚ್ಚು ಪದವೀಧರರು ಅರ್ಜಿ ಸಲ್ಲಿಸುತ್ತಿರುವುದನ್ನು ವರದಿ ಗಮನಿಸಿದೆ.

ಉನ್ನತ ಶಿಕ್ಷಣ ಪಡೆದ ಯುವಜನರು ಇಷ್ಟಪಟ್ಟು ಪೌರಕಾರ್ಮಿಕ ಅಥವಾ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿಲ್ಲ; ಬದಲಿಗೆ ಮಾರುಕಟ್ಟೆಯಲ್ಲಿ ತಮ್ಮ ಅರ್ಹತೆಗೆ ತಕ್ಕ ಉದ್ಯೋಗಗಳು ಇಲ್ಲದಿರುವ ಕಾರಣ ಕೇವಲ ಬದುಕಿನ ಅನಿವಾರ್ಯತೆಗಾಗಿ ಈ ಕೆಲಸಗಳಿಗೆ ಸಿದ್ಧರಾಗುತ್ತಿದ್ದಾರೆ ಎಂದು ವರದಿ ಹೇಳಿದೆ.

ಕಳೆದ ಒಂದು ದಶಕದಿಂದ ಭಾರತದಲ್ಲಿ, ‘ಡಿಗ್ರಿ ಇದ್ದರೆ ಸಾಕು ಜೀವನ ಸುಲಭವಾಗುತ್ತದೆ’ ಎಂಬ ನಂಬಿಕೆ ಸುಳ್ಳಾಗುತ್ತಿದ್ದು, ದೇಶದ ಯುವಶಕ್ತಿ ಇಂದು ತೀವ್ರ ಹತಾಶೆಯಲ್ಲಿದೆ.

ಸುಪ್ರೀಂಕೋರ್ಟ್ ನಿಯಮಾವಳಿಗಳನ್ನು ಎತ್ತಿಹಿಡಿದು ತೀರ್ಪು ನೀಡಬಹುದಾದರೂ, ಕೇವಲ ಹತ್ತನೇ ತರಗತಿ ಪಾಸ್ ಆದವರಿಗೆ ಮೀಸಲಾದ “ಅಟೆಂಡರ್” ಕೆಲಸಕ್ಕೂ ಇಂಜಿನಿಯರ್‌ಗಳು ಮತ್ತು ಪಿಎಚ್‌ಡಿ ಪದವೀಧರರು ಸ್ಪರ್ಧಿಸುವಂತಾಗಿರುವುದು ದೇಶದ ಉದ್ಯೋಗ ನೀತಿ ಮತ್ತು ಆರ್ಥಿಕ ಪ್ರಗತಿಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...