ಉದ್ಯೋಗ ಮಾಹಿತಿ | 2,482 ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವ ಗಡುವು ಸೆ. 17ರವರೆಗೆ ವಿಸ್ತರಣೆ

Date:

ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಒಂದಾದ ‘ಬ್ಯಾಂಕ್ ಆಫ್ ಬರೋಡಾ’ ಸಂಸ್ಥೆಯು ‘ಲೋಕಲ್ ಬ್ಯಾಂಕ್ ಆಫೀಸರ್’ (LBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. 2,482 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸಂಸ್ಥೆಯು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ಮತ್ತು ನಿಗದಿತ ಶುಲ್ಕವನ್ನು ಸೆಪ್ಟೆಂಬರ್ 17, 2026ರ ರಾತ್ರಿ 11:59 ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

- Advertisement -

ಸಂಸ್ಥೆಯು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 2,482 ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್-I ಹುದ್ದೆಗಳನ್ನು ಕಾಯಂ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಗುಜರಾತ್‌ನಲ್ಲಿ ಗರಿಷ್ಠ 1,185 ಹುದ್ದೆಗಳಿದ್ದರೆ, ಕರ್ನಾಟಕದಲ್ಲಿ 418 ಹಾಗೂ ಮಹಾರಾಷ್ಟ್ರದಲ್ಲಿ 218 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸುವುದಾಗಿ ಬ್ಯಾಂಕ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 21 ರಿಂದ 30 ವರ್ಷದ ವಯೋಮಿತಿಯೊಳಗಿರಬೇಕು, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ, ಅನುಸೂಚಿತ ವಾಣಿಜ್ಯ ಬ್ಯಾಂಕ್‌ನಲ್ಲಿ (Scheduled Commercial Bank) ಕನಿಷ್ಠ ಒಂದು ವರ್ಷದ ಕಾಲ ಅಧಿಕಾರಿ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವುದು ಕಡ್ಡಾಯ ಎಂದು ಬ್ಯಾಂಕ್ ಹೇಳಿದೆ.

ಇನ್ನು ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಉತ್ತಮ ಪ್ರಾವೀಣ್ಯತೆಯನ್ನು ಹೊಂದಿರಬೇಕು ಎಂದು ತಿಳಿಸಿದೆ.

ಅರ್ಜಿ ಶುಲ್ಕ; ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 850 ರೂಪಾಯಿ ಮತ್ತು ಎಸ್‌ಸಿ, ಎಸ್‌ಟಿ, ವಿಶೇಷ ಚೇತನ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 175 ರೂ. ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ, ಗುಂಪು ಚರ್ಚೆ ಅಥವಾ ವೈಯಕ್ತಿಕ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯನ್ನು ಒಳಗೊಂಡಿರುತ್ತದೆ.

ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬ್ಯಾಂಕ್‌ನೊಂದಿಗೆ ಕನಿಷ್ಠ ಮೂರು ವರ್ಷಗಳ ಕಾಲ ಕಡ್ಡಾಯವಾಗಿ ಸೇವೆ ಸಲ್ಲಿಸುವ ಬಾಂಡ್‌ಗೆ ಸಹಿ ಮಾಡಬೇಕಾಗುತ್ತದೆ. ನಿಯಮಿತ ಅವಧಿಗಿಂತ ಮುಂಚಿತವಾಗಿ ಕೆಲಸ ತೊರೆದರೆ ದಂಡ ಪಾವತಿಸಬೇಕಾಗುತ್ತದೆ.

ಆಸಕ್ತರು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ನ ಕರಿಯರ್ಸ್ ವಿಭಾಗಕ್ಕೆ ಭೇಟಿ ನೀಡಿ ನಿಗದಿತ ಗಡುವಿನೊಳಗೆ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕ್ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಶಾಲಾ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಸ್ಥಳದಲ್ಲಿ ಮೂರು ಡೆತ್‌ನೋಟ್‌ಗಳು ಪತ್ತೆ

ರಾಷ್ಟ್ರ ರಾಜಧಾನಿ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದ...

ಕಾಲದ ಹಾದಿಯಲ್ಲಿ ಅಮರ ಪ್ರೇಮ ಕಾವ್ಯ: ರಾಜೀವ್ ಜತೆಗಿನ ಮಧುರ ಒಡನಾಟ ನೆನೆದು ಭಾವುಕರಾದ ಸೋನಿಯಾ ಗಾಂಧಿ

ಬದುಕಿನ ಸಂಧ್ಯಾಕಾಲದಲ್ಲಿ ನಿಂತು ಹಿಂದಿನ ಸವಿ ನೆನಪುಗಳನ್ನು ಮೆಲುಕು ಹಾಕುವುದು ಒಂದು...

ಭಾಲ್ಕಿ | ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ನಮ್ಮ ಕರ್ನಾಟಕ ಸೇನೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು,...

ಈ ದಿನ ಸಂಪಾದಕೀಯ | ಅಮೆರಿಕದ ದಬ್ಬಾಳಿಕೆ-ಮೋದಿ ಸರ್ಕಾರದ ಮೌನ; ಭಾರತದ ಸಾರ್ವಭೌಮತ್ವಕ್ಕೆ ಶೋಭೆಯಲ್ಲ!

ತನ್ನ ಹಿತಾಸಕ್ತಿಗಾಗಿ ಭಾರತದ ಇಂಧನ, ವ್ಯಾಪಾರ ಹಾಗೂ ವಿದೇಶಾಂಗ ನೀತಿಗಳನ್ನು ನಿಯಂತ್ರಿಸಲು...