ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Advertisements

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳ ಸದರಿ ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳಿಗೆ ಇದೇ ತಿಂಗಳ ನವೆಂಬರ್ 25 ರೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ವರದಿಗಾರರು, ಜೂನಿಯರ್ ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್, ಮಾಸಜರ್, ಸೇರಿದಂತೆ ವಿವಿಧ ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನವೆಂಬರ್ 25 ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು:
ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿಯನ್ನು ವರ್ಗಾವಾರು ಕೆಳಗಿನಂತೆ ತಿಳಿಸಲಾಗಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ವಯಸ್ಸು ದಾಟಿರಬಾರದು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5074,
ಮೊದಲನೇ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.

ಕರ್ನಾಟಕ ವಿಧಾನಸಭೆ ಸಚಿವಾಲಯದ ನೇಮಕಾತಿ ಹಾಗೂ ಸೇವಾ ಷರತ್ತುಗಳು, ನಿಯಮಗಳು 2003ರ ಅನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯಲಿದೆ).

ಇದನ್ನು ಓದಿದ್ದೀರಾ? ಕರ್ನಾಟಕ ಲೋಕಾಯುಕ್ತದಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಹುದ್ದೆವಾರು ವಿದ್ಯಾರ್ಹತೆ ವಿವರ ಕೆಳಗಿನಂತಿದೆ.

ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆ: ವಿದ್ಯಾರ್ಹತೆ
ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ | ಮಾಹಿತಿ ವಿಜ್ಞಾನ | ಎಲೆಕ್ಟ್ರಾನಿಕ್ಸ್ ಇಂಜಿನೀಯರಿಂಗ್ ನಲ್ಲಿ ಪದವೀಧರರಾಗಿರಬೇಕು ಅಥವಾ ಕಂಪ್ಯೂಟರ್ ಅಪ್ಲಿಕೇಶನ್ (MCA)ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದು, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳ ಜ್ಞಾನವುಳ್ಳವರಾಗಿರಬೇಕು.

ವಿಬಿ 6, VB.Net, ಒರಾಕಲ್, ಎಸ್ಕ್ಯುಎಲ್-ಸರ್ವರ್, ಎಂಎಸ್-ಆಕ್ಸೆಸ್, ಕ್ರಿಸ್ಟಲ್ ರಿಪೋರ್ಟ್ಸ್ ಮತ್ತು ನೆಟ್ವರ್ಕಿಂಗ್‌ನಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪ್ರೋಗ್ರಾಮರ್ ಆಗಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ಕನ್ನಡ ವರದಿಗಾರರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರಥಮ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತಿರ್ಣರಾಗಿರಬೇಕು. ಹಿಂದಿ ಪ್ರಥಮ ದರ್ಜೆಯ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.

ಕಂಪ್ಯೂಟರ್ ಆಪರೇಟರ್ ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕ ಪದವಿ (ಬಿ.ಸಿ.ಎ.) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ. ಪದವಿ ಹೊಂದಿರಬೇಕು.

ಕಿರಿಯ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನವುಳ್ಳವಾಗಿರಬೇಕು.
ಕರ್ನಾಟಕ ವಿಧಾನ ಸಭೆ ಸಚಿವಾಲಯದ ಗ್ರೂಪ್ ‘ಡಿ’ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ಹೊಂದಿರುವ ನೌಕರರಿಗೆ ಆದ್ಯತೆ ನೀಡಲಾಗುವುದು.

ಕಿರಿಯ ಗ್ರಂಥಾಲಯ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಹೊಂದಿದ್ದು, ಕಂಪ್ಯೂಟರ್‌ ಜ್ಞಾನವುಳ್ಳವಾಗಿರಬೇಕು.

ಮಸಾಜರ್ ಹುದ್ದೆಗೆ ವಿದ್ಯಾರ್ಹತೆ
ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಯಾವುದಾದರು ಹೆಲ್ತ್ ಕ್ಲಬ್ ನಲ್ಲಿ ಮಸಾಜರ್ ಆಗಿ ಕಾರ್ಯ- ನಿರ್ವಹಿಸಿರುವ ಬಗ್ಗೆ ಐದು ವರ್ಷಗಳ ಅನುಭವವಿರಬೇಕು

ಬಡಗಿ ಹುದ್ದೆಗೆ ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಥವಾ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಬಡಗಿ ಕೋರ್ಸ್‌ ಅಥವಾ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಿಂದ ಅಥವಾ ಕೈಗಾರಿಕಾ ಸಂಸ್ಥೆಯ (ಐ.ಟಿ.ಐ.)ಯಿಂದ ಪ್ರಮಾಣ ಪತ್ರ ಹೊಂದಿರಬೇಕು.

ದಲಾಯತ್ ಹುದ್ದೆಗೆ ವಿದ್ಯಾರ್ಹತೆ
7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಸ್ವೀಪರ್ ಹುದ್ದೆಗೆ ವಿದ್ಯಾರ್ಹತೆ
4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ ರೂ.500.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಬಾಗಲಕೋಟ ದಲ್ಲಿ ಅಪ್ಲಿಕೇಶನ್ ಫಾರ್ಮ್ ಯಲ್ಲಿ ಸಿಗುತ್ತವೆ ಮಾಹಿತಿ ತಿಳಿಸಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ...

ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ...

Download Eedina App Android / iOS

X