ಕರ್ನಾಟಕ ಲೋಕಾಯುಕ್ತದಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

Date:

Advertisements

ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಸಂಬಂಧ ಇಲಾಖೆಯು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕದ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್ ಆಗಿರುವ lokayukta.kar.nic.in​ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಈ ಎಲ್ಲ ಅರ್ಜಿಗಳು ಆನ್​ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಬೇರೆ ಮೂಲದಿಂದ ಬರುವ ಅರ್ಜಿಗಳನ್ನು ಇಲಾಖೆ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದೆ.

ಕರ್ನಾಟಕ ಲೋಕಾಯುಕ್ತ ನಿಯಮಗಳು 1988 ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಮೀಸಲಾತಿ) ಅರ್ಹತಾ ಪ್ರಮಾಣ ಪತ್ರ ಹೊಂದಿರಬೇಕು. ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ, ಅರ್ಜಿ ಶುಲ್ಕ, ವೇತನ ಶ್ರೇಣಿ, ಹುದ್ದೆ ಹೆಸರು ಏನು, ನೇಮಕಾತಿ ಪ್ರಕ್ರಿಯೆಯ ಬಗ್ಗೆ ಇಲ್ಲಿದೆ ವಿವರ.

Advertisements

ಹುದ್ದೆಯ ಹೆಸರು- ಕ್ಲರ್ಕ್​ ಕಮ್ ಟೈಪಿಸ್ಟ್​
ಒಟ್ಟು ಹುದ್ದೆಗಳು- 14
ವೇತನ ಶ್ರೇಣಿ- ₹34,100 ರಿಂದ ₹67.600

ಶೈಕ್ಷಣಿಕೆ ವಿದ್ಯಾರ್ಹತೆ

ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. (ಅಂಕಪಟ್ಟಿ ಹೊಂದಿರಲೇಬೇಕು).

ನೇಮಕಾತಿ ಪ್ರಕ್ರಿಯೆ

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಪರಿಗಣಿಸಿ ಮೀಸಲಾತಿ ಆಧಾರದಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ತಯಾರಿಸಲಾಗುತ್ತದೆ. ಪಟ್ಟಿಯಲ್ಲಿರುವ ಹೆಸರು ಪಡೆದವರಿಗೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳನ್ನು ಅಭ್ಯರ್ಥಿಗಳು ಪಡೆಯಲೇಬೇಕು.

ಅರ್ಜಿ ಶುಲ್ಕದ ವಿವರ ಹೀಗಿದೆ: ಸಾಮಾನ್ಯ ಅರ್ಹತೆ, 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ- ₹250 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷ ಚೇತನರು- ಶುಲ್ಕ ವಿನಾಯಿತಿ. ಆನ್​ಲೈನ್​ ಮೂಲಕವೇ ಶುಲ್ಕ ಪಾವತಿ ಮಾಡಬೇಕು.

ಇದನ್ನು ಓದಿದ್ದೀರಾ? ಬೆಳಗಾವಿ | ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ತಹಶೀಲ್ದಾರ್ ಆಪ್ತ ಸಹಾಯಕ

ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ: 29 ನವೆಂಬರ್ 2024
ಶುಲ್ಕ ಪಾವತಿಗೆ ಕೊನೆ ದಿನಾಂಕ: 30 ನವೆಂಬರ್ 2024

ವಯೋಮಿತಿ: 18 ರಿಂದ 43 ವರ್ಷದ ಒಳಗಿನವರಿಗೆ ಅವಕಾಶ

ನೋಟಿಫಿಕೇಶನ್‌ನ ಪ್ರತಿ ಓದಲು ಈ ಕೆಳಗಿನ ಫೈಲ್ ಲಿಂಕ್ ಕ್ಲಿಕ್ ಮಾಡಿ:

ಹೆಚ್ಚಿನ ವಿವರಗಳಿಗೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್​ಸೈಟ್: Karnataka Lokayukta ಅನ್ನು ಭೇಟಿ ನೀಡಬಹುದು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ...

ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ...

Download Eedina App Android / iOS

X