ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಯುವಜನರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ತಂತ್ರಜ್ಞ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ರೈಲ್ವೆ ಸಚಿವಾಲಯ ಮುಂದಾಗಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಜೂನ್ 30 ರಂದು ಅಧಿಕೃತ ಸಂಪೂರ್ಣ ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ಆನ್‌ಲೈನ್ ಅರ್ಜಿ ಪ್ರಕ್ರಿಯೆಯೂ ಆರಂಭವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಹುದ್ದೆಗಳ ವಿವರ:
ಒಟ್ಟು ಹುದ್ದೆಗಳು: 6,565
ತಂತ್ರಜ್ಞ ಗ್ರೇಡ್ 1 (ಸಿಗ್ನಲ್ ವಿಭಾಗ): 323 ಹುದ್ದೆಗಳು
ತಂತ್ರಜ್ಞ ಗ್ರೇಡ್ 3 ವಿಭಾಗ: 6,252 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಇದರೊಂದಿಗೆ ಹುದ್ದೆಗಳಿಗೆ ಸಂಬಂಧಿಸಿದ ವಿಭಾಗದಲ್ಲಿ ಐಟಿಐ, ಬಿಎಸ್ಸಿ ಅಥವಾ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ/ಪದವಿ ಶಿಕ್ಷಣ ಮುಗಿಸಿರಬೇಕು.
ವಯೋಮಿತಿ: ಗ್ರೇಡ್ 1 ಹುದ್ದೆಗಳಿಗೆ 18 ರಿಂದ 33 ವರ್ಷ ಹಾಗೂ ಗ್ರೇಡ್ 3 ಹುದ್ದೆಗಳಿಗೆ 18 ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಆರಂಭಿಕ ಮೂಲ ವೇತನ ಸಿಗಲಿದೆ:
ಟೆಕ್ನಿಷಿಯನ್ ಗ್ರೇಡ್ 1 (ಸಿಗ್ನಲ್): ತಿಂಗಳಿಗೆ ರೂ. 29,200 ರಿಂದ ಆರಂಭ.
ಟೆಕ್ನಿಷಿಯನ್ ಗ್ರೇಡ್ 3: ತಿಂಗಳಿಗೆ ರೂ. 19,900 ರಿಂದ ಆರಂಭ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಕೇವಲ ಶಿಕ್ಷಣದ ಆಧಾರದ ಮೇಲಷ್ಟೇ ಅಲ್ಲದೆ, ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBT) ಮತ್ತು ವೈದ್ಯಕೀಯ ಪರೀಕ್ಷೆಗಳ (Medical Examination) ಮೂಲಕ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ:ಜೂನ್ 30, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 29, 2026
ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಸಿಕಂದರಾಬಾದ್ ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಈ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.



