ಉರಿಗೌಡ, ನಂಜೇಗೌಡರ ಸೃಷ್ಟಿ; ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಹುನ್ನಾರ ಎಂದ ಕಿಶೋರ್‌

Date:

ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್‌, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು ಕಿಡಿ ಕಾರಿದ್ದಾರೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಲ್ಪಿತ ಪಾತ್ರಗಳ ಬಗೆಗಿನ ವರದಿಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಿಶೋರ್, “ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದು ರಾಜಕೀಯ ಮಾಡಲಾಗುತ್ತಿದೆ. ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಮತ್ತು ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಟಿಪ್ಪುವನ್ನು ಕೊಂದವರೆೆಂದು ಹೇಳಿ ಮುಸ್ಲಿಮರು ಮತ್ತು ಒಕ್ಕಲಿಗರನ್ನು ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ” ಎಂದು ಪ್ರಶ್ನಿಸಿದ್ದಾರೆ.

“ಮೊದಲು ಹಿಂದೂ-ಮುಸ್ಲಿಂ ಎಂದು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು. ಗಾಂಧಿ ಎಂದು ಗಾಂಧಿಯನ್ನು ಕೊಂದರು. ರೈತರನ್ನು ಭಯೋತ್ಪಾದಕರು ಎಂದರು. ಉರಿ ಹೊತ್ತಿಸಿ, ನಂಜು ಕಾರಿ, ಒಕ್ಕಲಿಗರೆಂದರು. ಟಿಪ್ಪುವೆಂದರು, ಬಿಹಾರಿಗಳೆಂದರು, ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು, ಭಾಷೆ ಎಂದರು, ದೇಶವೆಂದರು, ಇತಿಹಾಸ ತಿರುಚಿ ಸುಳ್ಳು ಸುದ್ದಿ ಹರಡಿದರು” ಎಂದು ಆಕ್ರೋಶ ವಕ್ತಪಡಿಸಿದ್ದಾರೆ.

“ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ʼವಸುದೇವ ಕುಟುಂಬಕಂʼನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ. ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ” ಎಂದು ರಾಜ್ಯದ ಜನರಿಗೆ ಕಿವಿ ಮಾತು ಹೇಳಿದ್ದಾರೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...