ಕನ್ನಡದ ಹಿರಿಯ ನಿರ್ದೇಶಕ ಕಿರಣ್‌ ಗೋವಿ ನಿಧನ

Date:

ಹೃದಯಾಘಾದಿಂದ ಆಸ್ಪತ್ರೆ ಸೇರಿದ್ದ ಕಿರಣ್‌

ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ನಿರ್ದೇಶಕ

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಕಿರಣ್‌ ಗೋವಿ ಶನಿವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಇತ್ತೀಚೆಗೆ ಆಸ್ಪತ್ರೆ ಸೇರಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

50 ವರ್ಷದ ಕಿರಣ್‌ ಬುಧವಾರ ತಮ್ಮ ಕಚೇರಿಯಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿತ್ತು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಕುಟುಂಬಸ್ಥರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರದ ಹೊತ್ತಿಗೆ ಅವರ ಸ್ಥಿತಿ ಗಂಭೀರಗೊಂಡು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಜಾಕ್ವೆಲಿನ್‌ಗೆ ಜೈಲಿನಿಂದ ಪ್ರೇಮಪತ್ರ ಬರೆದ ಸುಕೇಶ್‌

ಆರ್ಕೆಸ್ಟ್ರಾ ಮೂಲಕ ಸ್ಯಾಂಡಲ್‌ವುಡ್‌ ನಂಟು ಬೆಳೆಸಿಕೊಂಡಿದ್ದ ಕಿರಣ್‌, ʼಸಂಚಾರಿʼ, ʼಪಯಣʼ, ʼಯಾರಿಗುಂಟು ಯಾರಿಗಿಲ್ಲʼ, ʼಪಾರು ವೈಫ್‌ ಆಫ್‌ ದೇವದಾಸ್‌ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದರು. ಹಿರಿಯ ನಿರ್ದೇಶಕನ ಅಕಾಲಿಕ ಮರಣಕ್ಕೆ ಚಿತ್ರರಂಗದ ಹಲವು ಗಣ್ಯರು ಕಂಬಿನಿ ಮಿಡಿದಿದ್ದಾರೆ.

ಸದ್ಯ ಕಿರಣ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲುಗಿನ ಹಿರಿಯ ನಿರ್ದೇಶಕ ಕೆ. ವಾಸು ಇನ್ನಿಲ್ಲ

ಮೆಗಾಸ್ಟಾರ್‌ ಚಿರಂಜೀವಿ ಚೊಚ್ಚಲ ಚಿತ್ರ ನಿರ್ದೇಶಿಸಿದ್ದ ವಾಸು ಜಗ್ಗೇಶ್‌ ನಟನೆಯ ʼಸರ್ವರ್‌ ಸೋಮಣ್ಣʼ...

ಮಂತ್ರಿಯಾದ ಮಧು ಬಂಗಾರಪ್ಪ : ಶ್ರಮದ ಪ್ರತಿಫಲ ಎಂದ ಶಿವಣ್ಣ

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ ಚುನಾವಣೆಯಲ್ಲಿ ಕಾಂಗ್ರೆಸ್‌...

ಯಶ್‌ ಜೊತೆಗೆ ನರ್ತನ್‌ ಸಿನಿಮಾ ಸದ್ಯಕ್ಕಿಲ್ಲ

ಶಿವರಾಜ್‌ ಕುಮಾರ್‌ ನಟನೆಯ ʼಭೈರತಿ ರಣಗಲ್‌ʼ ಸಿನಿಮಾದಲ್ಲಿ ನರ್ತನ್‌ ಬ್ಯುಸಿ ಕೆಜಿಎಫ್‌-2 ಬಿಡುಗಡೆಯಾಗಿ...

ʼದಿ ಡೈರಿ ಆಫ್‌ ವೆಸ್ಟ್‌ ಬೆಂಗಾಲ್‌ʼ ಚಿತ್ರದ ನಿರ್ದೇಶಕನಿಗೆ ಕೋಲ್ಕತ್ತಾ ಪೊಲೀಸರಿಂದ ನೋಟಿಸ್‌

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುರಿಯಾಗಿಸಿ ಸಿನಿಮಾ ಮಾಡಿದ ಸನೋಜ್‌ ಟ್ರೈಲರ್‌ ಬಿಡುಗಡೆಯಾದ...