ನಿರೀಕ್ಷೆ ಹೆಚ್ಚಿಸಿದ ʼಹೊಯ್ಸಳʼ ಟ್ರೈಲರ್‌

Date:

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಡಾಲಿ ಧನಂಜಯ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಹೊಯ್ಸಳ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಸೋಮವಾರ ಬಹುನಿರೀಕ್ಷಿತ ಟ್ರೈಲರ್‌ ಬಿಡುಗಡೆಗೆ ಮಾಡಿದ್ದು, ಎರಡೂವರೆ ನಿಮಿಷಗಳ ಟ್ರೈಲರ್‌ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಬಹುಪಾಲು ಸಿನಿಮಾಗಳಲ್ಲಿ ಖಳನ ಪಾತ್ರದಲ್ಲಿಯೇ ಕಾಣಿಸಿಕೊಳ್ಳುತ್ತಿದ್ದ ಧನಂಜಯ್‌ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಖಡಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಮಹಾರಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ತೊಡೆ ತಟ್ಟಿ ನಿಲ್ಲುವ ದಕ್ಷ ಪೊಲೀಸ್‌ ಅಧಿಕಾರಿಯ ಬದುಕಿನ ಸುತ್ತ ಚಿತ್ರದ ಕಥೆ ಮೂಡಿಬಂದಿದೆ ಎಂಬುದನ್ನು ಟ್ರೈಲರ್‌ನಲ್ಲಿ ಸೂಕ್ಷ್ಮವಾಗಿ ತೋರಿಸಲಾಗಿದೆ. ಧನಂಜಯ್‌ ಉತ್ತರ ಕರ್ನಾಟಕ ಭಾಷೆಯಲ್ಲಿ ಆಡುವ ಮಾತುಗಳು ಗಮನ ಸೆಳೆಯುತ್ತವೆ. ʼಗುಲ್ಟುʼ ಖ್ಯಾತಿಯ ನವೀನ್‌ ಶಂಕರ್‌ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್‌ ಬಿಎಸ್‌, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌, ಮಯೂರಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಆ್ಯಕ್ಷನ್ ಕಥಾಹಂದರವುಳ್ಳ ʼಹೊಯ್ಸಳʼ ಚಿತ್ರಕ್ಕೆ ವಿಜಯ್ ಎನ್‌ ನಿರ್ದೇಶನವಿದೆ. ಚಿತ್ರದಲ್ಲಿ ಧನಂಜಯ್‌ಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ʼಕೆ ಆರ್ ಜಿ ಸ್ಟುಡಿಯೋಸ್ʼನ ಕಾರ್ತಿಕ್‌ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ. ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಸಿನಿ ರಸಿಕರ ಗಮನ ಸೆಳೆಯುತ್ತಿರುವ ಈ ಚಿತ್ರ ಮಾರ್ಚ್‌ 30ರಂದು ತೆರೆ ಕಾಣಲಿದೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಲಿದ್ದಾರೆ ಅಶ್ವಿನಿ ಪುನೀತ್​ ರಾಜ್‌ಕುಮಾರ್

ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯಲಿರುವ 'ಬೆಂಗಳೂರು ಕಂಬಳ'ಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್...

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...