ಹಿಂದುತ್ವ ಕುರಿತ ಟ್ವೀಟ್‌ ಪ್ರಕರಣ : ನಟ ಚೇತನ್‌ಗೆ ಜಾಮೀನು

Date:

  • ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಎಂದಿದ್ದ ಚೇತನ್‌
  • ಹಿಂದುತ್ವದ ಅವಹೇಳನ ಎಂದು ದೂರು ದಾಖಲಿಸಿದ್ದ ಬಲಪಂಥೀಯರು

ಹಿಂದುತ್ವದ ಬಗ್ಗೆ ಟ್ವೀಟ್‌ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸ್ಯಾಂಡಲ್‌ವುಡ್‌ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರಿಗೆ 32ನೇ ಎಸಿಎಮ್‌ಎಮ್‌ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಜೆ ಲಲಿತಾ, 25 ಸಾವಿರ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಒಬ್ಬರ ಭದ್ರತೆಯ ಮೇಲೆ ನಟನಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.

ನಟ ಚೇತನ್‌ ಕೆಲ ದಿನಗಳ ಹಿಂದೆ ತಮ್ಮ ಟ್ವಿಟರ್‌ ಖಾತೆಯಲ್ಲಿ “ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮ ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂತಿರುಗಿದಾಗ ಭಾರತ ದೇಶ ಹುಟ್ಟಿಕೊಂಡಿತು ಎಂಬ ಸಾವರ್ಕರ್ ಹೇಳಿಕೆ ಸುಳ್ಳು. ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಎಂಬ ಅಂಶ ಸುಳ್ಳು, ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎಂಬ ಮಾತು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಬರೆದುಕೊಂಡಿದ್ದರು.

ನಟನ ಈ ಅಭಿಪ್ರಾಯವನ್ನು ವಿರೋಧಿಸಿ ಬಲಪಂಥೀಯ ಶಿವಕುಮಾರ್‌ ಎಂಬುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ಅವಹೇಳನಕಾರಿ ಹೇಳಿಕೆ ಆರೋಪದಡಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಾರ್ಚ್‌ 21ರಂದು ಚೇತನ್‌ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಎಸಿಎಮ್‌ಎಮ್‌ ನ್ಯಾಯಾಲಯ ಚೇತನ್‌ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಗುರುವಾರ ನಟನ ಪರ ವಕೀಲರ ಅರ್ಜಿ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟ ಸೋನು ಸೂದ್‌...

ಕುತೂಹಲ ಹೆಚ್ಚಿಸಿದ ʼಆದಿಪುರುಷ್‌ʼ 2ನೇ ಟ್ರೈಲರ್‌

ಜೂನ್‌ 16ಕ್ಕೆ ತೆರೆಗೆ ಬರಲಿದೆ ʼಆದಿಪುರುಷ್‌ʼ ಒಂದೂವರೆ ಕೋಟಿ ವೀಕ್ಷಣೆ ಪಡೆದ ಟ್ರೈಲರ್‌ ತೆಲುಗಿನ...

ಈ ದಿನ ವಿಶೇಷ | ಗ್ಯಾರಂಟಿ ಯೋಜನೆಗಳ ಬಗ್ಗೆ ಸಿನಿ ತಾರೆಯರ ಮಾತು

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಗ್ಯಾರಂಟಿಯ...

2 ಭಾಗಗಳಲ್ಲಿ ತೆರೆಗೆ ಬರಲಿದೆ ʼಸಪ್ತ ಸಾಗರದಾಚೆ ಎಲ್ಲೋʼ

40ನೇ ವಸಂತಕ್ಕೆ ಕಾಲಿಟ್ಟ ರಕ್ಷಿತ್‌ ಶೆಟ್ಟಿ ನಿರೀಕ್ಷೆ ಹೆಚ್ಚಿಸಿದ ʼಸಪ್ತ ಸಾಗರದಾಚೆ ಎಲ್ಲೋʼ...