ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಟೈಟಲ್‌ ಘೋಷಿಸಿದ ರಾಮ್‌ ಚರಣ್‌

Date:

  • 38ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್‌ ರಾಮ್‌ ಚರಣ್‌
  • ಗಮನ ಸೆಳೆಯುತ್ತಿದೆ ಹೊಸ ಸಿನಿಮಾ ಟೈಟಲ್‌

ತೆಲುಗಿನ ಸ್ಟಾರ್‌ ನಟ ರಾಮ್‌ ಚರಣ್‌ ಸೋಮವಾರ 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಭಾರತೀಯ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಇದೇ ಸಂದರ್ಭದಲ್ಲಿ ರಾಮ್‌ ಚರಣ್‌ ನಟನೆಯ 50ನೇ ಚಿತ್ರದ ಟೈಟಲ್‌ ಬಹಿರಂಗಗೊಂಡಿದೆ.

ರಾಮ್‌ ಚರಣ್‌ ಮತ್ತು ತಮಿಳಿನ ಖ್ಯಾತ ನಿರ್ದೇಶಕ ಶಂಕರ್‌ ಕಾಂಬಿನೇಶನ್‌ನ ಹೊಸ ಸಿನಿಮಾ ಕಳೆದ ಫೆಬ್ರವರಿಯಲ್ಲಿ ಘೋಷಣೆಯಾಗಿತ್ತು. ನಟನ ಹುಟ್ಟು ಹಬ್ಬದ ಪ್ರಯುಕ್ತ ಟೈಟಲ್‌ ಘೋಷಿಸಿರುವ ಚಿತ್ರತಂಡ ನೂತನ ಚಿತ್ರಕ್ಕೆ ʼಗೇಮ್‌ ಚೇಂಜರ್‌ʼ ಎಂದು ಹೆಸರಿಟ್ಟಿದೆ.

42 ಸೆಕೆಂಡುಗಳ ಟೈಟಲ್‌ ಟೀಸರ್‌ ಬಿಡುಗಡೆ ಮಾಡಿ ರಾಮ್‌ ಚರಣ್‌ಗೆ ಹುಟ್ಟು ಹಬ್ಬದ ಶುಭಕೋರಿರುವ ನಿರ್ದೇಶಕ ಶಂಕರ್‌, ʼಟೈಟಲ್‌ ಥೀಮ್‌ʼನಲ್ಲಿಯೇ ಚಿತ್ರದ ಕಥೆ ಚುನಾವಣಾ ರಾಜಕೀಯದ ಸುತ್ತ ಇರಲಿದೆ. ಕಥಾ ನಾಯಕ ಈ ಕಥೆಯ ʼಗೇಮ್‌ ಚೇಂಜರ್‌ʼ ಎಂಬ ಸುಳಿವು ನೀಡಿದ್ದಾರೆ.

ಬಾಲಿವುಡ್‌ನ ಖ್ಯಾತ ನಟಿ ಕಿಯಾರಾ ಅಡ್ವಾಣಿ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಬಹುಭಾಷಾ ನಟಿ ಅಂಜಲಿ, ಸಮುದ್ರಕಣಿ, ಎಸ್‌ ಜೆ ಸೂರ್ಯ, ಶ್ರೀಕಾಂತ್‌, ಸುನಿಲ್‌ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ತಮನ್‌ ಎಸ್‌ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ರಾಜು ಮತ್ತು ಶಿರೀಶ್‌ ಬಂಡವಾಳ ಹೂಡುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

ಮಲಯಾಳಂ ನಟ ವಿನೋದ್ ಥಾಮಸ್ ಕೇರಳದ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ...

ತೆಲಂಗಾಣ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು...

ಮೊದಲು ಹೊಡೆದು ನಂತರ ಕ್ಷಮೆ ಕೇಳಿದ ನಟ ನಾನಾ ಪಾಟೇಕರ್: ವಿಡಿಯೋ ವೈರಲ್

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ...

ಬಿಗ್‌ಬಾಸ್ ಶೋನಲ್ಲಿ ಭೋವಿ ಜನಾಂಗಕ್ಕೆ ಅವಹೇಳನ ಆರೋಪ: ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್

ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ...