17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಕ್ತಾಯ; ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

Date:

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ.

- Advertisement -

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದರು. ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ. ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ ಮುಂತಾದವರು ಈ ಸಮಾರಂಭದಲ್ಲಿ ಹಾಜರಿದ್ದರು. ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಮಾತನಾಡಿದ ಹಂಸಲೇಖ, ʼಕಲೆಗೆ ಸಂಬಂಧಿಸಿದ ಸಮಾರಂಭಕ್ಕೆ ಸಮಾರೋಪ ಇರುವುದಿಲ್ಲ. ಅದು ಆರಂಭ. ಸೃಷ್ಟಿ ಕಾರ್ಯ ನಿರಂತರ. ಅದು ಯಾವತ್ತು ನಿಲ್ಲುವುದಿಲ್ಲ. ‌ಕೃಷಿಕರು, ಕಾರ್ಮಿಕರು, ಸಿನಿಮಾದವರಿಗೆ ಯಾವುದೇ ವ್ಯತ್ಯಾಸ ಇಲ್ಲ. ಒಬ್ಬನಿಂದ ಸಿನಿಮಾ ಆಗುವುದಿಲ್ಲ. ಅದೊಂದು ಸಾಮೂಹಿಕ ಕೃಷಿ. ಈ ಚಿತ್ರೋತ್ಸವಕ್ಕೆ ರಾಜ್ಯ ಸರ್ಕಾರ ತುಂಬು ಸಹಾಕಾರ‌ ನೀಡಿದೆ. ಜೀವಮಾನ ಪ್ರಶಸ್ತಿ ಸಿಕ್ಕಿದ್ದು ಖುಷಿಯ ವಿಷಯ. ನಾವು ಕನ್ನಡ ನಾಡಿಗೆ ಋಣಿಯಾಗಿರಬೇಕು. ಕನ್ನಡದಲ್ಲಿ ಬದುಕಿದ್ದೇವೆ. ಕಲೆ ಎನ್ನುವುದು ಆತ್ಮದ ಮೇವು. ಕಲೆಯ ಮೇವನ್ನು ಆರು ದಶಕಗಳ ಕಾಲ‌ ಮೇದಿರುವೆ. ಇಲ್ಲಿನ ವೈಚಾರಿಕತೆ, ಆಧ್ಯಾತ್ಮಿಕತೆ ನನ್ನನ್ನು ಬೆಳೆಸಿದೆ. ಬೇಂದ್ರೆ ಅವರು ʼಉತ್ತರ ಧ್ರುವದಿಂದ ದಕ್ಷಿಣ ಧ್ರುವಕೂ …ʼ ಎಂದು ಹೇಳಿದರೆ, ʼಕಾಂತಾರʼ ಮತ್ತು ʼಕೆಜಿಎಫ್ʼ ಚಿತ್ರಗಳು ಅದನ್ನು ದಕ್ಷಿಣದಿಂದ ಉತ್ತರದವರೆಗೂ ಎಂದು ಬದಲಾಯಿಸಿದೆ. ಪ್ರಜಾಪ್ರಭುತ್ವದ ಬೀಜ ಬಿತ್ತಿದ ಬಸವ ನಾಡಿನಲ್ಲಿ ಪ್ರಜಾಪ್ರಭುತ್ವ ರಕ್ಷಿಸುವ ಸಿನಿಮಾ ‌ಮಾಡಬೇಕಿದೆʼ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ʼಚಿತ್ರೋತ್ಸವಗಳಿಂದ ಬೇರೆ ಭಾಷೆಯ ಸಿನಿಮಾ ನೋಡಬಹುದಾಗಿದೆ. ಇದು ಕಲೆಯನ್ನು ಉತ್ಕೃಷ್ಟ ಮಟ್ಟಕ್ಕೆ ಒಯ್ಯುವ ಉದ್ದೇಶದಿಂದ ಮಾಡುವ ಚಿತ್ರೋತ್ಸವ. ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಕಲೆ ಮೇಲಿದೆ ಎಂಬುವ ಮಾತು ಒಪ್ಪುವೆ. ಎಲ್ಲ ರೀತಿಯ ಸಿನಿಮಾಗಳು ಬರಬೇಕು. ಕಮರ್ಷಿಯಲ್, ಕಲಾತ್ಮಕ ಸೇರಿ ಎಲ್ಲಾ ರೀತಿಯಲ್ಲಿ ಬರಬೇಕು. ಕಲೆಯಲ್ಲಿ ಭಯ, ಭೀತಿ ಇರಬಾರದು. ಅಭಿವ್ಯಕ್ತಿ ಇರಬೇಕು. ಸ್ವಾತಂತ್ರ್ಯ ಇರಬೇಕು. ಯಾರಿಗೇ ಆಗಲಿ, ಪ್ರಶ್ನೆ ‌ಮಾಡುವ ಅವಕಾಶವಿದೆ. ಕನ್ನಡದಲ್ಲಿ ಯಾರ ಹಂಗೂ ಇಲ್ಲದೆ ಧೈರ್ಯದಿಂದ ಸಿನಿಮಾ‌ ಮಾಡುವಂತಾಗಬೇಕು. ಕಲಾವಿದರು ಜವಾಬ್ದಾರಿ ಅರಿತು ಕೆಲಸ‌ ಮಾಡಬೇಕುʼ ಎಂದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ಮಾತನಾಡಿ, ʼಭಾಷೆ ಹಲವಾದರೂ, ಭಾವನೆ ಒಂದೇ. ಬೇರೆಬೇರೆ ವ್ಯಾಕರಣ ಇದ್ದರೂ, ಅದರ ಗರ್ಭದಲ್ಲಿ ಗ್ರಹಿಕೆ ಒಂದೇ. ಮನುಷ್ಯ ವಿಕಾಸದಲ್ಲಿ ಸಿನಿಮಾ ಹೊಸ ಭಾಷೆ. ಅದು ಅವನ ಸಂಸ್ಕೃತಿ, ನೋವು, ಅಳಲು ದಾಖಲಿಸುತ್ತದೆ. ಚಿತ್ರೋತ್ಸವವೆನ್ನುವುದು ಪ್ರಪಂಚದ ಬೇರೆಬೇರೆ ಮಾನವೀಯ ಗ್ರಹಿಕೆಗಳನ್ನು ಹಂಚಿಕೊಳ್ಳುವ ವೇದಿಕೆ. ದೇಶಕ್ಕೆ, ಸಮಾಜಕ್ಕೆ ಆದ ನೋವು ದೊಡ್ಡ ನೋವು. ಅಂತಹ ನೋವುಗಳನ್ನು ಸಿನಿಮಾಗಳು ದಾಖಲಿಸಬೇಕು. ಈ‌ ನಿಟ್ಟಿನಲ್ಲಿ‌ ಚಿತ್ರೋತ್ಸವ ಉತ್ಸವವಾಗಿದೆ.‌ ಹಂಸಲೇಖ ಅವರನ್ನು ಸನ್ಮಾನಿಸಿ ಉತ್ಸವದ ಅರ್ಥವನ್ನು ಹೆಚ್ಚಿಸಿದೆʼ ಎಂದರು.

ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಎಲ್ಲಾ ಸಿನಿಮಾಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ. ಸಾಧು ಕೋಕಿಲ, ʼಭಾರತದ ಅತೀ ದೊಡ್ಡ ಚಿತ್ರೋತ್ಸವ ನಮ್ಮದಾಗಿದೆ. ಇದಕ್ಕೆ ಶ್ರಮಿಸಿದ ಸರ್ಕಾರ ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸುವೆ. ಈ ಬಾರಿಯ ಹೊಸ ಯೋಜನೆಗಳು ಯಶಸ್ವಿಯಾಗಿವೆ. 92 ವರ್ಷಗಳ ಇತಿಹಾಸವಿರುವ ಚಲನಚಿತ್ರ ಸಾಧಕರ ಛಾಯಾಚಿತ್ರ ಪ್ರದರ್ಶನ, ಟೆಂಟ್‌ ಸಿನಿಮಾ ಹಾಗೂ ಡಾ. ರಾಜಕುಮಾರ್‌ ಸೇರಿ ವಿವಿಧ ನಟರ ಸಿನಿಮಾಗಳ ಪ್ರದರ್ಶನಗೊಂಡು ಜನಮೆಚ್ಚುಗೆ ಪಡೆದಿವೆ. ಹಂಡಲೇಖ ಅವರಿಗೆ ಜೀವಮಾನದ ಪ್ರಶಸ್ತಿ ನೀಡಿರುವುದು ನಮಗೆ ನಾವೇ ಮಾಡಿಕೊಳ್ಳುವ ಗೌರವ. ಈ ಚಿತ್ರೋತ್ಸವದಲ್ಲಿ ಒಂದು ಲಕ್ಷಕ್ಕೂ ಅಧಿಕ ಹಿರಿಯ ನಾಗರಿಕರು ಭಾಗವಹಿಸಿದ್ದಾರೆʼ ಎಂದರು.

ಈ ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ವಿನೋದ್‌ ಚಂದ್ರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ

ಜನವರಿ 29ರಂದು ಪ್ರಾರಂಭವಾದ ಈ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಚಲನಚಿತ್ರಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...