2019ನೇ ಸಾಲಿನ ರಾಜ್ಯ ಪ್ರಶಸ್ತಿ | ಕಿಚ್ಚ ಸುದೀಪ್‌ & ಅನುಪಮಾ ಗೌಡಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

Date:

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಬುಧವಾರ (ಜ.22ರಂದು) ಘೋಷಣೆಯಾಗಿದೆ. ಅತ್ಯುತ್ತಮ ನಟಿ ಪ್ರಶಸ್ತಿಗೆ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಮತ್ತು ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಪಾತ್ರರಾಗಿದ್ದಾರೆ.

- Advertisement -

‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್‌ ಅವರಿಗೆ ಅತ್ಯುತ್ತಮ ನಟ ಮತ್ತು ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಇನ್ನೂ ಐದು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಣೆ ಬಾಕಿಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪೂರ್ಣ ಪಟ್ಟಿ ಇಲ್ಲಿದೆ:

ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್)

ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)

ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ (ನಿರ್ದೇಶಕ -ಪಿ. ಶೇಷಾದ್ರಿ)

ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೇಲ್’ (ನಿರ್ದೇಶಕ – ಡಾರ್ಲಿಂಗ್ ಕೃಷ್ಣ)

ತೃತೀಯ ಅತ್ಯುತ್ತಮ ಚಿತ್ರ : ‘ಅರ್ಧ್ಯಂ’ (ನಿರ್ದೇಶಕ – ವೈ ಶ್ರೀನಿವಾಸ್)

ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಪೋಷಕ ನಟಿ: ಅನುಷಾ ಕೃಷ್ಣ (ಬ್ರಾಹ್ಮಂ)

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ – ಮಂಜುನಾಥ್ ಎಸ್)

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ V/s ಇಂಗ್ಲೆಂಡ್ (ನಿರ್ದೇಶಕ – ನಾಗತಿಹಳ್ಳಿ ಚಂದ್ರಶೇಖರ್)

ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ – ಜಿ. ಅರುಣ್ ಕುಮಾರ್)

ಚೊಚ್ಚಲ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ (ನಿರ್ದೇಶಕ – ನಾಗೇಶ್ ಎನ್.)

ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತ್ರಿಬಲ್ ತಲಾಖ್ (ಬ್ಯಾರಿ ಭಾಷೆ) (ನಿರ್ದೇಶಕ – ಯೂಕೂಬ್ ಖಾದರ್ ಗುಲ್ವಾಡಿ)

ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ

ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್)

ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)

ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್‌

ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)

ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)

ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)

ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೇಲ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಂಗಮ ಶೆಟ್ಟಿ ( ರಾಗಭೈರವಿ ಚಿತ್ರ)

ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ

ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)

ಒಟ್ಟು 180 ಸಿನಿಮಾಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವು. ಪ್ರತಿ ವರ್ಷ ರಾಜ್ಯ ಸರ್ಕಾರ ಪ್ರಶಸ್ತಿ ನೀಡುತ್ತಾ ಬರುತ್ತಿತ್ತು. ಆದರೆ ಕೋವಿಡ್ ಬಳಿಕ ಇದಕ್ಕೆ ಹಿನ್ನೆಡೆ ಆಗಿತ್ತು. ಇದೀಗ 6 ವರ್ಷ ಬಳಿಕ ಪ್ರಶಸ್ತಿ ಘೋಷಣೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...