2020 ಹಾಗೂ 2021 ರ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಪ್ರಕಟ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ.

- Advertisement -

2020 ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ , ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ “ನಮೋ ವೆಂಕಟೇಶ” ಕೃತಿ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಈದಿನ ಡಾಟ್‌ ಕಾಂ ವೆಬ್‌ಸೈಟ್‌ನ ಸಂಪಾದಕರಾದ ಬಸವರಾಜು ಮೇಗಲಕೇರಿ ಅವರು 2020 ನೇ ಕ್ಯಾಲೆಂಡರ್ ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

2021 ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ,ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ “ಅಂತರಂಗದ ಅಣ್ಣ” ಕೃತಿ ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ ,ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...