72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಮಮ್ಮುಟ್ಟಿ ಅತ್ಯುತ್ತಮ ನಟ, ಯಾಮಿ ಅತ್ಯುತ್ತಮ ನಟಿ.. ಪೂರ್ತಿ ವಿವರ ಇಲ್ಲಿದೆ

Date:

ಇಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 2024ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣೀಕೃತಗೊಂಡ ಚಲನಚಿತ್ರಗಳನ್ನು ಪರಿಗಣಿಸಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಖ್ಯಾತ ಮಲಯಾಳಂ ನಿರ್ದೇಶಕ ಜಯರಾಜ್ ಅವರ ನೇತೃತ್ವದ 11 ಸದಸ್ಯರ ತೀರ್ಪುಗಾರರ ಸಮಿತಿಯು ಈ ಬಾರಿಯ ವಿಜೇತರನ್ನು ಆಯ್ಕೆ ಮಾಡಿದೆ.

- Advertisement -

ಈ ವರ್ಷದ ಪ್ರಶಸ್ತಿಗಳಲ್ಲಿ ಪ್ರಮುಖ ಆಕರ್ಷಣೆಯಾಗಿ ‘ಆರ್ಟಿಕಲ್ 370’ ಚಿತ್ರ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಚಿತ್ರದ ಅಭಿನಯಕ್ಕಾಗಿ ಯಾಮಿ ಗೌತಮ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಅತ್ಯುತ್ತಮ ನಟ ವಿಭಾಗದಲ್ಲಿ ಮಮ್ಮುಟ್ಟಿ (ಭ್ರಮಯುಗಂ- ಮಲಯಾಳಂ) ಮತ್ತು ಕಾರ್ತಿಕ್ ಆರ್ಯನ್ (ಚಂದು ಚಾಂಪಿಯನ್) ಪ್ರಶಸ್ತಿ ಹಂಚಿಕೊಂಡಿದ್ದಾರೆ. ನಿರ್ದೇಶನದ ವಿಭಾಗದಲ್ಲಿ ರಾಜ್‌ಕುಮಾರ್ ಪೆರಿಯಸಾಮಿ ಅವರು ಅತ್ಯುತ್ತಮ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಅತ್ಯುತ್ತಮ ಕನ್ನಡ ಚಿತ್ರ ವಿಭಾಗದಲ್ಲಿ, ನಟ ರಕ್ಷಿತ್‌ ಶೆಟ್ಟಿ ಹಾಗೂ ಕೆಆರಜಿ ನಿರ್ಮಾಣದ ʼಮಿಥ್ಯʼ ಚಿತ್ರ ಈ ಪ್ರಶಸ್ತಿಯನ್ನ ತನ್ನದಾಗಿಸಿಕೊಂಡಿದೆ. ಈ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ಬಾಲನಟ ಪ್ರಶಸ್ತಿಯನ್ನ ಅತಿಶ್ ಶೆಟ್ಟಿ ಅವರು ಪಡೆದುಕೊಂಡಿದ್ದಾರೆ. ಇದೇ ಚಿತ್ರದ ಪೋಷಕ ನಟನೆಗೆ ರೂಪಾ ವರ್ಕಾಡಿ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಅದೇ ರೀತಿ ಹಿಂದಿ ಭಾಷೆಯಲ್ಲಿ ‘ಶ್ರೀಕಾಂತ್’, ತಮಿಳಿನಲ್ಲಿ ‘ರಾಯನ್’, ತೆಲುಗಿನಲ್ಲಿ ‘ಕಮಿಟಿ ಕುರ್ರೊಲ್ಲು’ ಮತ್ತು ಮಲಯಾಳಂನಲ್ಲಿ ‘ಫೆಮಿನಿಚಿ ಫಾತಿಮಾ’ ಚಿತ್ರಗಳು ಆಯಾ ಭಾಷೆಯ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿವೆ.

ಇದನ್ನೂ ಓದಿ:

ಕಲಾತ್ಮಕ ಮತ್ತು ಮನರಂಜನಾತ್ಮಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರವಾಗಿ ‘ಕಲ್ಕಿ 2898 ಎಡಿ’ ಪ್ರಶಸ್ತಿಗೆ ಪಾತ್ರವಾಗಿದೆ. ಪೋಷಕ ನಟರ ವಿಭಾಗದಲ್ಲಿ ಸಂಜಯ್ ಮಿಶ್ರಾ ಅವರು ಅತ್ಯುತ್ತಮ ಪೋಷಕ ನಟನಾಗಿ ಹಾಗೂ ರೂಪಶ್ರೀ ವರ್ಕಾಡಿ ಅವರು ಅತ್ಯುತ್ತಮ ಪೋಷಕ ನಟಿಯಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಉತ್ತೇಜಿಸುವ ಅತ್ಯುತ್ತಮ ಚಿತ್ರವಾಗಿ ‘ಕ್ಯಾಪ್ಟನ್ ಮಿಲ್ಲರ್’ ಗುರುತಿಸಲ್ಪಟ್ಟಿದೆ.

ಕಳೆದ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆಯು ಪಕ್ಷಪಾತದಿಂದ ಕೂಡಿದೆ ಎಂದು ನಟ ಪ್ರಕಾಶ್ ರಾಜ್ ಬಹಿರಂಗವಾಗಿ ಟೀಕಿಸಿದ್ದರು. ವಿಶೇಷವಾಗಿ, ಅತ್ಯುತ್ತಮ ನಟನಾಗಿ ಮಮ್ಮುಟ್ಟಿಯವರ ಹೆಸರನ್ನು ಪರಿಗಣಿಸದಿರುವುದು ತಪ್ಪು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರ ಟೀಕೆಗೆ ಉತ್ತರವೋ ಎಂಬಂತೆ, ಈ ವರ್ಷದ ಪ್ರಶಸ್ತಿಯಲ್ಲಿ ಮಮ್ಮುಟ್ಟಿಯವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...