ಪಕ್ಷವೊಂದರ ಬಗ್ಗೆ ಪ್ರಚಾರದ ನಕಲಿ ವಿಡಿಯೋ: ಪ್ರಕರಣ ದಾಖಲಿಸಿದ ಅಮೀರ್ ಖಾನ್

Date:

ನಿರ್ದಿಷ್ಟ ಪಕ್ಷವೊಂದರ ಪರ ಪ್ರಚಾರ ಮಾಡುವ ನಕಲಿ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿರುವ ಬಗ್ಗೆ ಬಾಲಿವುಡ್ ನಟ ಅಮೀರ್‌ ಖಾನ್ ಮುಂಬೈ ಸೈಬರ್‌ ಅಪರಾಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

- Advertisement -

”ಅಮೀರ್‌ ಖಾನ್‌ ಅವರು ಕಳೆದ 35 ವರ್ಷದ ತಮ್ಮ ವೃತ್ತಿಯಲ್ಲಿ ಯಾವುದೇ ಪಕ್ಷದ ಪರ ಪ್ರಚಾರ ನಡೆಸಿಲ್ಲ. ಕಳೆದ ಹಲವು ವರ್ಷಗಳಿಂದ ಚುನಾವಣಾ ಆಯೋಗದ ಮೂಲಕ ಸಾರ್ವಜನಿಕರಿಗೆ ಚುನಾವಣೆಯ ಬಗ್ಗೆ ಅರಿವು ಮೂಡಿಸಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಮೀರ್‌ ಖಾನ್ ಅವರ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

”ನಿರ್ದಿಷ್ಟ ಪಕ್ಷವೊಂದರ ಬಗ್ಗೆ ಅಮೀರ್‌ ಖಾನ್‌ ಪ್ರಚಾರ ಮಾಡುತ್ತಿರುವ ಇತ್ತೀಚಿನ ಒಂದು ವಿಡಿಯೋ ಬಗ್ಗೆ ನಾವು ಜಾಗೃತಗೊಂಡಿದ್ದೇವೆ. ಇದೊಂದು ನಕಲಿ ವಿಡಿಯೋ ಆಗಿದ್ದು, ಸಂಪೂರ್ಣ ಸುಳ್ಳಿನಿಂದ ಕೂಡಿದೆ ಎಂದು ಸ್ಪಷ್ಟಪಡಿಸುತ್ತೇವೆ. ಈ ವಿಷಯದ ಬಗ್ಗೆ ಅಮೀರ್ ಖಾನ್‌ ಅವರು ಎಫ್‌ಐಆರ್ ಹಾಗೂ ಮುಂಬೈನ ಸೈಬರ್ ಸೆಲ್ ಸೇರಿದಂತೆ ಸಂಬಂಧಿಸಿದ ಸಂಸ್ಥೆಗಳಿಗೆ ದೂರು ನೀಡಿದ್ದಾರೆ” ಎಂದು ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

”ಅದಲ್ಲದೆ ಅಮೀರ್‌ ಖಾನ್ ಅವರು ಎಲ್ಲ ಭಾರತೀಯರು ಬಂದು ಮತದಾನ ಮಾಡಿ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿ ಎಂದು ಮನವಿ ಮಾಡಿದ್ದಾರೆ” ಎಂದು ವಕ್ತಾರರು ಹೇಳಿದ್ದಾರೆ.

ಅಮೀರ್‌ ಖಾನ್ ಅವರದು ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. ಇದು ಎಐ ನಿರ್ಮಿತವಾಗಿದ್ದು, ದಶಕದ ಹಿಂದೆ ‘ಸತ್ಯಮೇವ ಜಯತೆ’ ಕಾರ್ಯಕ್ರಮದಲ್ಲಿ ಈ ರೀತಿಯ ದೃಶ್ಯಗಳು ಪ್ರಸಾರವಾಗಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...