ನಾನು , ಶಾರೂಖ್, ಸಲ್ಮಾನ್ ಮಾತ್ರವೇ ‘ಅಂತಿಮ ಸ್ಟಾರ್‌ಗಳಲ್ಲ’; ಅಮಿರ್ ಖಾನ್

Date:

ಹಿಂದಿ ಚಿತ್ರರಂಗದಲ್ಲಿ ಖಾರೂಖ್ ಖಾನ್, ಸಲ್ಮಾನ್ ಖಾನ್ ಹಾಗೂ ಅಮಿರ್ ಖಾನ್ ಅವರೇ ಪ್ರಸ್ತುತ ಸಂದರ್ಭದಲ್ಲಿ ಸ್ಟಾರ್‌ ನಟರೆಂದು ಕರೆಯಲಾಗುತ್ತಿದೆ. ಮಾತ್ರವಲ್ಲದೆ, ಈ ಮೂವರೇ ‘ಅಂತಿಮ ಸ್ಟಾರ್‌‘ಗಳೂ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ‘ಇಂತಹ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರತಿ ಪೀಳಿಗೆಯೂ ತನ್ನದೇ ಆದ ಸ್ಟಾರ್‌ಗಳನ್ನು ಹೊಂದಿರುತ್ತದೆ. ಕಾಲಾನಂತರದಲ್ಲಿ ಅವರೂ ಮರೆತುಹೋಗುತ್ತಾರೆ’ ಎಂದು ಅಮಿರ್ ಖಾನ್ ಹೇಳಿದ್ದಾರೆ.

- Advertisement -

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಮಿರ್ ಖಾನ್, “90ರ ದಶಕದಲ್ಲಿ ಮುನ್ನೆಲೆಗೆ ಬಂದ ಕಲಾವಿದರು ‘ಸ್ಟಾರ್‌’ ಕಿರೀಟಗಳನ್ನು ಪಡೆದಿದ್ದಾರೆ. ಆದರೆ, ಆ ನಟರಂತೆ ಈಗಿನ ಪೀಳಿಗೆಯ ಕಲಾವಿದರು ‘ಸ್ಟಾರ್‌’ಗಳೆಂದು ಗುರುತಿಸಿಕೊಳ್ಳುತ್ತಿಲ್ಲ ಎನ್ನಲಾಗದು. ಪ್ರತಿ ಪೀಳಿಗೆಯು ಹಿಂದಿನ ಪೀಳಿಗೆಗಿಂತ ಉತ್ತಮವಾಗಿ ಮುಂದೆ ಬರುತ್ತದೆ. ಈ ಪೀಳಿಗೆಯಲ್ಲೂ ದೊಡ್ಡ ತಾರೆಗಳು ಹುಟ್ಟಿಕೊಳ್ಳುತ್ತಾರೆ. ‘ನಾವು ಸ್ಟಾರ್‌ಗಳಲ್ಲಿ ಕೊನೆಯವರು’ ಎಂಬುದಾಗಿ ನಾನು ಭಾವಿಸುವುದಿಲ್ಲ. ನಮ್ಮ ನಂತರವೂ ಸ್ಟಾರ್‌ಗಳು ಬರುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಹುಶಃ ಇನ್ನು ಮುಂದೆ ನಾವೂ ಬ್ರಹ್ಮ, ವಿಷ್ಣು, ಮಹೇಶ್ವರರಾಗಿ (ಅಮಿರ್, ಶಾರೂಖ್, ಸಲ್ಮಾನ್) ಲೆಕ್ಕದಲ್ಲಿರುವುದಿಲ್ಲ. ಜನರು ನಮ್ಮನ್ನು ಮರೆತುಬಿಡುತ್ತಾರೆ. ಸಮಯ ಮುಂದೆ ಸಾಗುತ್ತಲೇ ಇರುತ್ತದೆ. ನೀವು ಎಲ್ಲವನ್ನೂ ಮರೆತುಬಿಡುತ್ತೀರಿ” ಎಂದು ಹೇಳಿದ್ದಾರೆ.

“ನಾನು, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದು ಚಿತ್ರದಲ್ಲಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳುವ ಬಗ್ಗೆ ಚರ್ಚಿಸಿದ್ದೇವೆ. ಒಳ್ಳೆಯ ಕತೆಗಾಗಿ ಕಾಯುತ್ತಿದ್ದೇವೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ಅಮೀರ್ ಖಾನ್ ಅವರು ‘ಸೀತಾರೆ ಜಮೀನ್ ಪರ್’ ಸಿನಿಮಾ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸಲ್ಮಾನ್ ಅವರ ‘ಸಿಕಂದರ್’ ಚಿತ್ರ ಮಾರ್ಚ್ 30ರಂದು ಬಿಡುಗಡೆಯಾಗಲಿದೆ. ಶಾರುಖ್ ಖಾನ್ ಅವರು ತಮ್ಮ ಮಗಳು ಸುಹಾನಾ ಖಾನ್ ಜೊತೆ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...