ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅಭಿನಯದ ‘ಸಿತಾರೆ ಜಮೀನ್ ಪರ್’ ಸಿನಿಮಾದ ಬಿಡುಗಡೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಅನುಮತಿ ಪತ್ರ ನೀಡಿದೆ. ಜೂನ್ 20ರಂದು ಸಿನಿಮಾ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
2007ರಲ್ಲಿ ಬಿಡುಗಡೆಯಾಗಿದ್ದ ಅಮೀರ್ ಖಾನ್ ಅವರು ‘ತಾರೇ ಜಮೀನ್ ಪರ್’ ಸಿನಿಮಾ ಹೊಸ ಸಂಚಲನ ಸೃಷ್ಟಿಸಿತ್ತು. ಪ್ರೇಕ್ಷಕರ ಮನ ಗೆದ್ದಿತ್ತು. ಅದೇ ಸಿನಿಮಾದ ಸೀಕ್ವೆಲ್ ಆಗಿ ‘ಸಿತಾರೆ ಜಮೀನ್ ಪರ್‘ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಇದೀಗ, ಸಿಬಿಎಫ್ಸಿ ಸರ್ಟಿಫಿಕೇಟ್ ಪಡೆದು, ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.
ಸಿನಿಮಾ ಅವರು ಅಮೀರ್ ಖಾನ್ ಬ್ಯಾನರ್ ಅಡಿಯಲ್ಲೇ ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಅಮೀರ್ ಖಾನ್ ಮತ್ತು ಜೆನಿಲಿಯಾ ದೇಶ್ಮುಖ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಆರ್.ಎಸ್ ಪ್ರಸನ್ನ ನಿರ್ದೇಶಿಸಿದ್ದಾರೆ.