ನಟಿ ರಶ್ಮಿಕಾ ಮಂದಣ್ಣರ ನಕಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಬಂಧನ

Date:

ನಟಿ ರಶ್ಮಿಕಾ ಮಂದಣ್ಣ ಅವರನ್ನು ಚಿತ್ರವನ್ನು ಬಳಸಿ, ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ವಿಡಿಯೋವೊಂದನ್ನು ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ವೈರಲ್ ಆಗಿ, ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ಆರೋಪಿಯನ್ನು ಬಂಧಿಸಲಾಗಿದೆ.

- Advertisement -

ವೈರಲ್‌ ಆಗಿದ್ದ ವಿಡಿಯೋದ ಅಸಲಿ ವಿಡಿಯೋ ಬ್ರಿಟಿಷ್-ಭಾರತೀಯ ಪ್ರಜೆ ಜರಾ ಪಟೇಲ್ ಅವರದ್ದು ಎಂಬುದು ಆಗಲೇ ಸ್ಪಷ್ಟವಾಗಿತ್ತು. ಕಪ್ಪು ಉಡುಪಿನಲ್ಲಿ ಲಿಫ್ಟ್‌ಗೆ ಅವರು ತೆರಳುವ ವಿಡಿಯೋ ಅವರದ್ದಾಗಿತ್ತು. ಆದರೆ, ಆ ವಿಡಿಯೋವನ್ನು ಡೀಪ್‌ಫೇಕ್ ತಂತ್ರಜ್ಞಾನದ ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ ಹರಿಬಿಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಮ್ಮದಲ್ಲದ ತಿರುಚಿದ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದ ರಶ್ಮಿಕಾ ‘ಅತ್ಯಂತ ಭಯಾನಕ’ ಎಂದಿದ್ದರು. “ತಂತ್ರಜ್ಞಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ,. ಇಂತಹ ದುರುಪಯೋಗದಿಂದ ವ್ಯಕ್ತಿತ್ವಗಳಿಗೆ ಹಾನಿಯಾಗುತ್ತದೆ. ನಮ್ಮಲ್ಲಿ ಪ್ರತಿಯೊಬ್ಬರಿಗೆ ಇಂತಹ ಪರಿಸ್ಥಿತಿ ಎದುರಾಗುವುದು ನಿಜಕ್ಕೂ ಅತ್ಯಂತ ಭಯಾನಕ” ಎಂದು ಅವರು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ?: ಆರ್‌ಎಸ್‌ಎಸ್‌ಗೆ ಹಣ ನೀಡುವ ಎನ್‌ಆರ್‌ಐ ಬ್ರಾಹ್ಮಣರು ಮಾಂಸ ತಿನ್ನುತ್ತಿಲ್ಲವೇ? : ‘ಅನ್ನಪೂರ್ಣಿ’ ವಿವಾದದ ಬಗ್ಗೆ ಗಾಯಕ ಟಿ.ಎಂ.ಕೃಷ್ಣ

ಇತ್ತೀಚೆಗೆ, ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು “ಎಲ್ಲ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ತಮ್ಮ ಪ್ಲಾಟ್‌ಫಾರ್ಮ್‌ಗಳಿಂದ ತಪ್ಪು ಮಾಹಿತಿಯನ್ನು ಗುರುತಿಸಲು ಮತ್ತು ತೆಗೆದುಹಾಕಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಡೀಪ್‌ಫೇಕ್ ನಮಗೆಲ್ಲರಿಗೂ ದೊಡ್ಡ ಸಮಸ್ಯೆಯಾಗಿದೆ. ನಾವು ಎಲ್ಲ ದೊಡ್ಡ ಸಾಮಾಜಿಕ ಮಾಧ್ಯಮ ಫಾರ್ಮ್‌ಗಳಿಗೆ ನೋಟಿಸ್‌ ನೀಡಿದ್ದೇವೆ. ಡೀಪ್‌ಫೇಕ್‌ ಪೋಸ್ಟ್‌ಗಳನ್ನು ಗುರುತಿಸಲು ಮತ್ತು ಅವುಗಳನ್ನು ತೆಗೆದುಹಾಕಲು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇವೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ಕ್ರಮ ಕೈಗೊಳ್ಳುವುದಾಗಿ ತಿಳಿಸಿವೆ” ಎಂದು ಅವರು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಮಾತ್ರವಲ್ಲದೆ, ಕತ್ರಿನಾ ಕೈಫ್, ಅಮಿತಾಬ್ ಬಚ್ಚನ್, ಪ್ರಿಯಾಂಕಾ ಚೋಪ್ರಾ ಹಾಗೂ ಸಚಿನ್ ತೆಂಡೂಲ್ಕರ್ ಅವರ ಡೀಪ್‌ಫೇಕ್ ವೀಡಿಯೊಗಳು ಸಹ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಈ ಸುದ್ದಿ ಓದಿದ್ದೀರಾ?: ಹೊಂಬಾಳೆಯಿಂದ ‘ರಘುತಾತ’ ಟೀಸರ್ ಬಿಡುಗಡೆ: ‘ಹಿಂದಿ ತೆರಿಯಾದ್ ಪೋಯ’ ಎಂದ ನಾಯಕಿ ಕೀರ್ತಿ ಸುರೇಶ್!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...