ʼಮಳ್ಳಿ ಪೆಳ್ಳಿʼ ಚಿತ್ರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ನರೇಶ್‌ ಮೂರನೇ ಪತ್ನಿ

Date:

ನರೇಶ್‌ ಮತ್ತು ಪವಿತ್ರಾ ಲೋಕೇಶ್‌ ನಟನೆಯ ಚಿತ್ರ

ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗ ತಡೆಯಾಜ್ಞೆಗೆ ಮನವಿ

ತೆಲುಗಿನ ಹಿರಿಯ ನಟ ನರೇಶ್‌ ಮತ್ತು ಬಹುಭಾಷಾ ನಟಿ ಪವಿತ್ರಾ ಲೋಕೇಶ್‌ ಇತ್ತೀಚೆಗೆಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ವಿವಾದದ ನಡುವೆಯೇ ಹಸೆಮಣೆ ಏರಿದ್ದ ಈ ಜೋಡಿ ತಮ್ಮ ಪ್ರೀತಿ ಮತ್ತು ಮದುವೆಯ ಕಥೆಯನ್ನು ತೆರೆಗೆ ಅಳವಡಿಸಿದ್ದು, ಟೀಸರ್‌ ಮತ್ತು ಟ್ರೈಲರ್‌ ಮೂಲಕ ಗಮನ ಸೆಳೆದಿದ್ದ ʼಮಳ್ಳಿ ಪೆಳ್ಳಿʼ ಸಿನಿಮಾ ಮೇ 26ರಂದು ತೆರೆಗೆ ಬರಲು ಸಜ್ಜಾಗಿದೆ. ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗಲೇ ಈ ಚಿತ್ರದ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ನರೇಶ್‌ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತೆಲಂಗಾಣದ ಕುಕ್ಕಟ್ಪಲ್ಲಿಯ ಕೌಟುಂಬಿಕ ನ್ಯಾಯಾಲಯದಲ್ಲಿ ʼಮಳ್ಳಿ ಪೆಳ್ಳಿʼ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿರುವ ರಮ್ಯಾ, ನನ್ನ ಘನತೆಗೆ ಧಕ್ಕೆಯಾಗುವಂತಹ ಸನ್ನಿವೇಶಗಳು ಚಿತ್ರದಲ್ಲಿವೆ. ಹೀಗಾಗಿ ಈ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ. ರಮ್ಯಾ ಮತ್ತು ನರೇಶ್‌ ಅವರ ವಿಚ್ಛೇದನ ಪ್ರಕರಣದ ವಿಚಾರಣೆ ಕೂಡ ಇದೇ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಕೆಲ ತಿಂಗಳ ಹಿಂದೆ ಮಾಧ್ಯಮಗಳ ಎದುರು ಅಳಲು ತೋಡಿಕೊಂಡಿದ್ದ ರಮ್ಯಾ, ನರೇಶ್‌ ತಮಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದರು. ಪವಿತ್ರಾ ಲೋಕೇಶ್‌ ವಿರುದ್ಧವೂ ಹರಿಹಾಯ್ದಿದ್ದರು. ಇದಾದ ಬೆನ್ನಲ್ಲೇ ದಾಂಪತ್ಯಕ್ಕೆ ಕಾಲಿಟ್ಟಿದ್ದ ನರೇಶ್‌ ಮತ್ತು ಪವಿತ್ರಾ, ತಮ್ಮ ಪ್ರೀತಿ ಮತ್ತು ಮದುವೆಯ ಕುರಿತು ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು.

ನರೇಶ್‌ ನಾಲ್ಕನೇ ಮದುವೆಯಾಗಿದ್ದಕ್ಕೆ ಭಾರೀ ಟೀಕೆಗೆ ಗುರಿಯಾಗಿದ್ದರು. ಪವಿತ್ರಾ ಲೋಕೇಶ್‌ ಅವರ ನಡೆಯ ಬಗ್ಗೆಯೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಈ ಜೋಡಿ ನಮ್ಮ ಖಾಸಗಿ ಬದುಕಿಗೆ ಗೌರವ ನೀಡಿ ಎಂದಷ್ಟೇ ಮನವಿ ಮಾಡಿ ಸುಮ್ಮನಾಗಿತ್ತು.

ಈ ಸುದ್ದಿ ಓದಿದ್ದೀರಾ? ʼ19.20.21ʼ ಸಿನಿಮಾ ಡಿಜಿಟಲ್‌ ಹಕ್ಕು ಖರೀದಿ ನಿರಾಕರಿಸಿದ ʼಅಮೆಜಾನ್‌ ಪ್ರೈಂʼ, ʼನೆಟ್‌ಫ್ಲಿಕ್ಸ್‌ʼ

ʼಮಳ್ಳಿ ಪೆಳ್ಳಿʼ ಚಿತ್ರಕ್ಕೆ ತೆಲುಗಿನ ನಿರ್ದೇಶಕ ಎಂ.ಎಸ್‌ ರಾಜು ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಶರತ್ ಬಾಬು, ಜಯಸುಧಾ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅರುಲ್‌ ದೇವ್‌ ಹಿನ್ನೆಲೆ ಸಂಗೀತ ನೀಡಿದ್ದು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಚಿತ್ರ ಸಿದ್ಧಗೊಂಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...